AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ
ಕೊವ್ಯಾಕ್ಸಿನ್
TV9 Web
| Edited By: |

Updated on: Aug 02, 2021 | 1:44 PM

Share

ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನಲ್​ ಕೊರೊನಾ ಲಸಿಕೆ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣು ವಿರುದ್ಧ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council Of Medical Research)ಯ ಇತ್ತೀಚೆಗಿನ ಅಧ್ಯಯನ ತಿಳಿಸಿದೆ. ಕೊವ್ಯಾಕ್ಸಿನ್​ ಲಸಿಕೆಯನ್ನು ಐಸಿಎಂಆರ್​ ಮತ್ತು ರಾಷ್ಟ್ರೀಯ ವೈರಾಲಜಿ ಇನ್​ಸ್ಟಿಟ್ಯೂಟ್​ (NIV) ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಕೊವಿಡ್​ 19 ವೈರಸ್ ವಿರುದ್ಧ ಶೇ.77.8ರಷ್ಟು ಮತ್ತು ಡೆಲ್ಟಾ ವೈರಾಣು ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿ ಎಂದು ಈ ಹೇಳಲಾಗಿತ್ತು. ಆದರೆ ಕೊವಿಡ್​ 19 ರೂಪಾಂತರಿ ತಳಿಯಾದ, ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ಡೆಲ್ಟಾ ಪ್ಲಸ್​ ವೈರಾಣು ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು ಎಂದು ಐಸಿಎಂಆರ್​ ಅಧ್ಯಯನ ಇದೀಗ ತಿಳಿಸಿದೆ.

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು. ಅದರ ಅನ್ವಯ ಈ ಲಸಿಕೆ ಲಕ್ಷಣ ಸಹಿತ ಕೊವಿಡ್​ 19 ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಈ ಲಸಿಕೆ ಸದ್ಯ ಬ್ರೆಜಿಲ್, ಮೆಕ್ಸಿಕೋ, ಫಿಲಿಪೈನ್ಸ್ ಮತ್ತು ಇರಾನ್ ಸೇರಿದಂತೆ 16 ರಾಷ್ಟ್ರಗಳಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದಿದೆ.

ಇದನ್ನೂ ಓದಿ: ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು

Covaxin Vaccine is Effective Against Delta Plus Says ICMR

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ