ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನಲ್ ಕೊರೊನಾ ಲಸಿಕೆ, ಡೆಲ್ಟಾ ಪ್ಲಸ್ ರೂಪಾಂತರಿ ವೈರಾಣು ವಿರುದ್ಧ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council Of Medical Research)ಯ ಇತ್ತೀಚೆಗಿನ ಅಧ್ಯಯನ ತಿಳಿಸಿದೆ. ಕೊವ್ಯಾಕ್ಸಿನ್ ಲಸಿಕೆಯನ್ನು ಐಸಿಎಂಆರ್ ಮತ್ತು ರಾಷ್ಟ್ರೀಯ ವೈರಾಲಜಿ ಇನ್ಸ್ಟಿಟ್ಯೂಟ್ (NIV) ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಕೊವಿಡ್ 19 ವೈರಸ್ ವಿರುದ್ಧ ಶೇ.77.8ರಷ್ಟು ಮತ್ತು ಡೆಲ್ಟಾ ವೈರಾಣು ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿ ಎಂದು ಈ ಹೇಳಲಾಗಿತ್ತು. ಆದರೆ ಕೊವಿಡ್ 19 ರೂಪಾಂತರಿ ತಳಿಯಾದ, ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ಡೆಲ್ಟಾ ಪ್ಲಸ್ ವೈರಾಣು ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು ಎಂದು ಐಸಿಎಂಆರ್ ಅಧ್ಯಯನ ಇದೀಗ ತಿಳಿಸಿದೆ.
ಕೊವ್ಯಾಕ್ಸಿನ್ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್ ಬಯೋಟೆಕ್ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು. ಅದರ ಅನ್ವಯ ಈ ಲಸಿಕೆ ಲಕ್ಷಣ ಸಹಿತ ಕೊವಿಡ್ 19 ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಈ ಲಸಿಕೆ ಸದ್ಯ ಬ್ರೆಜಿಲ್, ಮೆಕ್ಸಿಕೋ, ಫಿಲಿಪೈನ್ಸ್ ಮತ್ತು ಇರಾನ್ ಸೇರಿದಂತೆ 16 ರಾಷ್ಟ್ರಗಳಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದಿದೆ.
ಇದನ್ನೂ ಓದಿ: ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು
Covaxin Vaccine is Effective Against Delta Plus Says ICMR