Covaxin Vaccine: ವಿಶ್ವ ಆರೋಗ್ಯ ಸಂಸ್ಥೆಯಿಂದ ಕೋವ್ಯಾಕ್ಸಿನ್ ಲಸಿಕೆ ಅನುಮತಿಗೆ ಪ್ರಯತ್ನಿಸುತ್ತಿದ್ದೇವೆ; ಭಾರತ್ ಬಯೋಟೆಕ್ ಸ್ಪಷ್ಟನೆ

Bharat Biotech| ಭಾರತದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವಿಡ್ ಲಸಿಕೆ ಕೊವಾಕ್ಸಿನ್ ಸದ್ಯದಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಬಳಕೆಗೆ ಅನುಮತಿ ಸಿಗುವ ಸಾಧ್ಯತೆಯಿದೆ.

Covaxin Vaccine: ವಿಶ್ವ ಆರೋಗ್ಯ ಸಂಸ್ಥೆಯಿಂದ ಕೋವ್ಯಾಕ್ಸಿನ್ ಲಸಿಕೆ ಅನುಮತಿಗೆ ಪ್ರಯತ್ನಿಸುತ್ತಿದ್ದೇವೆ; ಭಾರತ್ ಬಯೋಟೆಕ್ ಸ್ಪಷ್ಟನೆ
ಕೊವ್ಯಾಕ್ಸಿನ್ ಲಸಿಕೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 28, 2021 | 7:34 PM

ನವದೆಹಲಿ: ಭಾರತದ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ (Bharat Biotech) ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯ (Covaxin Vaccine) ತುರ್ತು ಬಳಕೆಗೆ ಅನುಮತಿ ಪಡೆಯಲು ವಿಶ್ವ ಆರೋಗ್ಯ ಸಂಸ್ಥೆ (WHO) ಜೊತೆ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಭಾರತದಲ್ಲಿ ತಯಾರಾಗಿರುವ ಕೊವ್ಯಾಕ್ಸಿನ್ ಲಸಿಕೆ ಬಗ್ಗೆ ಇನ್ನಷ್ಟು ಹೆಚ್ಚು ಪ್ರಶ್ನೆಗಳನ್ನು ಭಾರತ್ ಬಯೋಟೆಕ್​ಗೆ ಕಳುಹಿಸಿರುವುದರಿಂದ ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ಸಿಗುವುದು ಸ್ವಲ್ಪ ವಿಳಂಬವಾಗುತ್ತಿದೆ ಎಂದು ಭಾರತ್ ಬಯೋಟೆಕ್ ತಿಳಿಸಿದೆ.

ಭಾರತದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವಿಡ್ ಲಸಿಕೆ ಕೊವಾಕ್ಸಿನ್ ಸದ್ಯದಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಬಳಕೆಗೆ ಅನುಮತಿ ಸಿಗುವ ಸಾಧ್ಯತೆಯಿದೆ. ವಿಜ್ಞಾನದ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲು ನಾವು ವಿಶ್ವ ಆರೋಗ್ಯ ಸಂಸ್ಥೆಗೆ ಸಮಯ ನೀಡಬೇಕು. ಆದರೆ, ಈ ವಿಳಂಬದಿಂದ ಈಗಾಗಲೇ ಕೊವ್ಯಾಕ್ಸಿನ್ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ನಾಗರಿಕರು ಬೇರೆ ದೇಶಗಳಿಗೆ ಪ್ರಯಾಣ ಮಾಡುವಾಗ ತೊಂದರೆ ಆಗುತ್ತಿದೆ. ಇದು ನಮಗೂ ಬೇಸರ ತರಿಸಿದೆ ಎಂದು ಭಾರತ್ ಬಯೋಟೆಕ್ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡುವವರೆಗೆ ಬೇರೆ ದೇಶಗಳು ಕೊವ್ಯಾಕ್ಸಿನ್​ಗೆ ಮಾನ್ಯತೆ ನೀಡುವುದಿಲ್ಲ. ಈಗಾಗಲೇ ಡಬ್ಲುಎಚ್​ಓ ಕೊವ್ಯಾಕ್ಸಿನ್ ಕುರಿತು ಕೇಳಿರುವ ಎಲ್ಲ ದಾಖಲೆ, ಮಾಹಿತಿಯನ್ನೂ ನೀಡಲಾಗಿದೆ. ಆದರೂ ಇದಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಪ್ರಶ್ನೆಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಕೇಳಿರುವುದರಿಂದ ಅನುಮತಿ ಸಿಗುವುದು ತಡವಾಗುತ್ತಿದೆ. ಆದರೆ, ಸದ್ಯದಲ್ಲೇ ಕೊವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ ಸಿಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಮ್ಮೆ ಸಾಧನೆ; ಸೋಮವಾರವೂ 1 ಕೋಟಿ ಡೋಸ್ ಲಸಿಕೆ ನೀಡಿಕೆ

ಕೊವ್ಯಾಕ್ಸಿನ್ ಪಡೆದ 2 ತಿಂಗಳ ನಂತರ, ಕೊವಿಶೀಲ್ಡ್ ಪಡೆದ 3 ತಿಂಗಳ ನಂತರ ದೇಹದಲ್ಲಿ ಪ್ರತಿಕಾಯಗಳು ಕಮ್ಮಿಯಾಗುತ್ತಿವೆ: ICMR ಅಧ್ಯಯನ

(covaxin Vaccine: Working with WHO for Covaxin Vaccination approval Bharat Biotech says after reports of delay)

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್