Coronavirus India Update: 1,15,736 ಹೊಸ ಕೊವಿಡ್ ಪ್ರಕರಣ ಪತ್ತೆ, ಮುಂದಿನ ನಾಲ್ಕು ವಾರಗಳಲ್ಲಿ ಗಂಭೀರ ಪರಿಸ್ಥಿತಿ ಎದುರಾಗಬಹುದು: ಕೇಂದ್ರ ಎಚ್ಚರಿಕೆ

Covid-19 India Update: ಮಂಗಳವಾರ ದೇಶದಲ್ಲಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಗರಿಷ್ಠ ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ 55,000 ಪ್ರಕರಣಗಳು ಪತ್ತೆಯಾಗಿದ್ದು, ಛತ್ತೀಸಗಡದಲ್ಲಿ 9,921 ಪ್ರಕರಣ ಪತ್ತೆಯಾಗಿದೆ.

Coronavirus India Update: 1,15,736 ಹೊಸ ಕೊವಿಡ್ ಪ್ರಕರಣ ಪತ್ತೆ, ಮುಂದಿನ ನಾಲ್ಕು ವಾರಗಳಲ್ಲಿ ಗಂಭೀರ ಪರಿಸ್ಥಿತಿ ಎದುರಾಗಬಹುದು: ಕೇಂದ್ರ ಎಚ್ಚರಿಕೆ
ರಾತ್ರಿ ಕರ್ಫ್ಯೂ ವೇಳೆ ದೆಹಲಿ ಪೊಲೀಸ್ ಸಿಬ್ಬಂದಿ
Follow us
ರಶ್ಮಿ ಕಲ್ಲಕಟ್ಟ
|

Updated on:Apr 07, 2021 | 10:54 AM

ದೆಹಲಿ: ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆಯ ಪರಿಣಾಮ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಮಂಗಳವಾರ ದೇಶದಲ್ಲಿ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಗರಿಷ್ಠ ಪ್ರಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ 55,000 ಪ್ರಕರಣಗಳು ಪತ್ತೆಯಾಗಿದ್ದು, ಛತ್ತೀಸಗಡದಲ್ಲಿ 9,921 ಪ್ರಕರಣ ಪತ್ತೆಯಾಗಿದೆ. ಕರ್ನಾಟಕ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ 5,000ಕ್ಕಿಂತಲೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿರುವ ಒಟ್ಟು ಕೊವಿಡ್ ರೋಗಿಗಳ ಸಂಖ್ಯೆ 28,01,785 ಆಗಿದ್ದು, 8,43,473 ಸಕ್ರಿಯ ಪ್ರಕರಣಗಳಿವೆ. ಮಂಗಳವಾರ 630 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 1,66,177ಕ್ಕೇರಿದೆ. ಮಹಾರಾಷ್ಟ್ರ, ಪಂಜಾಬ್, ಛತ್ತೀಸಗಡ, ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ಅತೀ ಹೆಚ್ಚು ಸಾವು ಸಂಭವಿಸಿದೆ.

ಕಳೆದ ಬಾರಿಗಿಂತಲೂ ಈ ಬಾರಿ ಕೊರೊನಾವೈರಸ್ ವೇಗವಾಗಿ ಹರಡುತ್ತಿದೆ. ಮುಂದಿನ ನಾಲ್ಕು ವಾರಗಳಲ್ಲಿ ಎರಡನೇ ಅಲೆಯನ್ನು ನಿಯಂತ್ರಿಸುವುದು ಕಷ್ಟವಾಗಲಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ. ಭಾರತದ ಕೊವಿಡ್-19 ಕಾರ್ಯಪಡೆಯ ನೇತೃತ್ವ ವಹಿಸಿರುವ ಡಾ.ವಿ.ಕೆ.ಪೌಲ್ ಕೊವಿಡ್ ನಿಯಂತ್ರಣಕ್ಕೆ ಜನರು ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳು ಹೆಚ್ಚು ಮಹತ್ವ ವಹಿಸಲಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ರಾತ್ರಿ ಕರ್ಫ್ಯೂ ದೆಹಲಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದ್ದು ಏಪ್ರಿಲ್ 30ರವರೆಗೆ ಇದು ಜಾರಿಯಲ್ಲಿರಲಿದೆ. ಪುಣೆಯಲ್ಲಿ ಐಸಿಯು ಮತ್ತು ವೆಂಟಿಲೇಟರ್​ಗಳ ಕೊರತೆಯಿಂದ ರೋಗಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕಳೆದ 15 ದಿನಗಳಲ್ಲಿ ಮುಂಬೈ ಪೊಲೀಸರಲ್ಲಿ ಕೊವಿಡ್ ಪ್ರಕರಣ ದುಪಟ್ಟಾಗಿದೆ. ಮಾರ್ಚ್ 22ರಂದು 155 ಪೊಲೀಸರಿಗೆ ಸೋಂಕು ತಗಲಿದ್ದು ಮಾರ್ಚ್ 5ರಂದು ಪ್ರಕರಣಗಳ ಸಂಖ್ಯೆ 408ಕ್ಕೇರಿದೆ.

ಚಂಡೀಗಡದಲ್ಲಿಯೂ ರಾತ್ರಿ ಕರ್ಫ್ಯೂ ಚಂಡೀಗಡದಲ್ಲಿ ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹೇರಲಾಗಿದೆ. ಇಂದಿನಿಂದ ಕರ್ಫ್ಯೂ ನಿರ್ಬಂಧ ಜಾರಿಗೆ ಬರಲಿದೆ. ಕೊವಿಡ್ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದರಿಂದ ರಾತ್ರಿ ಕರ್ಫ್ಯೂ ಹೇರಲು ವಾರ್ ರೂಂ ನಿರ್ಧಾರ ತೆಗೆದುಕೊಂಡಿದೆ. ಪಾರ್ಟಿ, ಗುಂಪು ಸೇರುವಿಕೆ ಮತ್ತು ಅನಗತ್ಯ ಕಾರ್ಯಕ್ರಮಗಳಿಗೆ ಅನುಮತಿ ಇರುವುದಿಲ್ಲ. ರೆಸ್ಟೊರೆಂಟ್​ಗಳು ರಾತ್ರಿ 10ಕ್ಕೆ ಮುಚ್ಚಬೇಕು. ಪರಿಸ್ಥಿತಿಯಲ್ಲಿ ಬದಲಾವಣೆ ಕಂಡರೆ ನಿರ್ಬಂಧ ಸಡಿಲಗೊಳಿಸಲಾಗುವುದು ಎಂದು ಜಿಲ್ಲಾಡಳಿತ ತಮ್ಮ ಪ್ರಕಟಣೆಯಲ್ಲಿ ಹೇಳಿದೆ.

ಹಿಮಾಚಲ ಪ್ರದೇಶದಲ್ಲಿ ನಿರ್ಬಂಧ ಕೊವಿಡ್ ನಿಯಂತ್ರಣಕ್ಕಾಗಿ ಹಿಮಾಚಲ ಪ್ರದೇಶ ಸರ್ಕಾರ ನಿರ್ಬಂಧಗಳನ್ನು ಹೇರಿದ್ದು ಮದುವೆ ಸಮಾರಂಭಗಳಲ್ಲಿ ಮನೆಯೊಳಗಡೆ ನಡೆಯುವುದಾದರೆ 50 ಮಂದಿ ಮತ್ತು ಹೊರಗಡೆ ನಡೆಯುವುದಾದರೆ 200 ಮಂದಿಗೆ ಮಾತ್ರ ಭಾಗವಹಿಸಲು ಅವಕಾಶ ಎಂದು ಹೇಳಿದೆ. ಅಂತ್ಯ ಸಂಸ್ಕಾರಗಳಲ್ಲಿ ಗರಿಷ್ಠ 50 ಮಂದಿ ಮಾತ್ರ ಭಾಗವಹಿಸಬಹುದು. ರಾಜ್ಯ ರೂಪುಗೊಂಡು 50 ವರ್ಷ ಪೂರೈಸಿದ ಪ್ರಯಕ್ತ ಏಪ್ರಿಲ್ 15ರಂದು ನಡೆಯಲಿರುವ ಸ್ವರ್ಣಿಂ ಹಿಮಾಚಲ್ ರಥ ಯಾತ್ರೆನ್ನು ಮುಂದೂಡಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಜೈ ರಾಂ ಠಾಕೂರ್ ಹೇಳಿದ್ದಾರೆ.

ಏಪ್ರಿಲ್ 10-14ರವರೆಗೆ ಗುಜರಾತ್ ಹೈಕೋರ್ಟ್ ಬಂದ್ ಗುಜರಾತ್ ಹೈಕೋರ್ಟ್ ಆವರಣವು ಏಪ್ರಿಲ್ 10-14ರವರೆಗೆ ಬಂದ್ ಆಗಲಿದ್ದು ಏಪ್ರಿಲ್ 12ಕ್ಕೆ ಇಲ್ಲಿ ಸ್ಯಾನಿಟೈಸೇಷನ್ ನಡೆಯಲಿದೆ.

ಇದನ್ನೂ ಓದಿ:  Coronavirus India Update: ಕಳೆದ 24 ಗಂಟೆಗಳಲ್ಲಿ 96,517 ಕೊವಿಡ್ ಪ್ರಕರಣ ಪತ್ತೆ, 445 ಸಾವು

Covid-19 vaccination: ಲಸಿಕೆಗೆ ವಯೋಮಿತಿ ನಿರ್ಬಂಧ ಸಡಿಲಿಕೆ ಸಾಧ್ಯವಿಲ್ಲ ಎಂದ ಕೇಂದ್ರ ಸರ್ಕಾರ

( Covid 19 1-15 Lakh new Cases reported in India Coronavirus Spreading Faster than last time says Centre)

Published On - 10:31 am, Wed, 7 April 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್