ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ, ನ್ಯಾಯಾಲಯದಲ್ಲಿ ಮಾಸ್ಕ್ ಧರಿಸಿ ಎಂದ ಸಿಜೆಐ

ನಾನು ನಕಾರಾತ್ಮಕ ಪರೀಕ್ಷೆ ಮಾಡಿದ್ದೇನೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದು, ಹಿರಿಯ ವಕೀಲ ಎಎಮ್ ಸಿಂಘ್ವಿ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ ಎಂದು ಹೇಳಿದರು.

ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ, ನ್ಯಾಯಾಲಯದಲ್ಲಿ ಮಾಸ್ಕ್ ಧರಿಸಿ ಎಂದ ಸಿಜೆಐ
ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ
Updated By: ರಶ್ಮಿ ಕಲ್ಲಕಟ್ಟ

Updated on: Aug 11, 2022 | 8:46 PM

ದೆಹಲಿ: ಸಿಬ್ಬಂದಿ ಮತ್ತು ನ್ಯಾಯಾಧೀಶರು ಕೋವಿಡ್-19  (Covid 19) ಸೋಂಕಿಗೆ ಒಳಗಾಗುತ್ತಿದ್ದಾರೆ. ಹಾಗಾಗಿ ನ್ಯಾಯಾಲಯದ ಕೊಠಡಿಗಳಲ್ಲಿ ಮಾಸ್ಕ್ ಧರಿಸುವಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ (CJI NV Ramana) ಇಂದು ವಕೀಲರಿಗೆ ಸಲಹೆ ನೀಡಿದ್ದಾರೆ. “ದಯವಿಟ್ಟು ಮಾಸ್ಕ್ ಧರಿಸಿ. ನಮ್ಮ ಬಹುಪಾಲು ಸಿಬ್ಬಂದಿ ಮತ್ತು ಸಹೋದ್ಯೋಗಿಗಳು ಕೋವಿಡ್ ಸೋಂಕಿಗೊಳಗಾಗಿದ್ದಾರೆ. ನ್ಯಾಯಾಧೀಶರು ಸಹ ಸೋಂಕಿಗೊಳಗಾಗುತ್ತಾರೆ ಎಂದು ನ್ಯಾಯಾಲಯದ ವಿಚಾರಣೆಯ ಪ್ರಾರಂಭದಲ್ಲಿ ಭಾರತದ ಮುಖ್ಯ ನ್ಯಾಯಾಧೀಶರು ವಕೀಲರಿಗೆ ಹೇಳಿದ್ದಾರೆ. ಉಚಿತ ಕೊಡುಗೆ ಬಗ್ಗೆ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠವು, ವಕೀಲರು ಮಾಸ್ಕ್ ಧರಿಸುವಂತೆ ಕೇಳಿತು.

ನಾನು ನಕಾರಾತ್ಮಕ ಪರೀಕ್ಷೆ ಮಾಡಿದ್ದೇನೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದು, ಹಿರಿಯ ವಕೀಲ ಎಎಮ್ ಸಿಂಘ್ವಿ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ ಎಂದು ಹೇಳಿದರು. ಓಹ್! ನೀವು ಶೀಘ್ರವಾಗಿ ಚೇತರಿಸಿಕೊಳ್ಳಿ ಎಂದು ನಾನು ಬಯಸುತ್ತೇನೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಹೇಳಿದರು.
ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಇದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ