HD Devegowda: ಪ್ರಧಾನಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

HD Devegowda Letter To PM Modi: ಕೊರೊನಾ ಲಸಿಕೆ ದರ ನಿಗದಿ ಮಾಡುವಂತೆ ಸಲಹೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸರ್ಕಾರವೇ ಉಚಿತವಾಗಿ ಕೊವಿಡ್ ಲಸಿಕೆ ನೀಡಿದರೆ ಅದು ದೊಡ್ಡ ಮಾನವೀಯ ನಡೆಯಾಗಲಿದೆ ಎಂದು ಪ್ರಧಾನಿ ಮೋದಿಗೆ ಕಿವಿಮಾತು ಹೇಳಿದ್ದಾರೆ.

HD Devegowda: ಪ್ರಧಾನಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಗ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ
Follow us
ಸಾಧು ಶ್ರೀನಾಥ್​
| Updated By: guruganesh bhat

Updated on:May 25, 2021 | 2:59 PM

ಬೆಂಗಳೂರು: ಇಡೀ ದೇಶ ಕೊರೊನಾ ಮಹಾಮಾರಿಯಿಂದ ಬಿಕ್ಕಟ್ಟು ಪರಿಸ್ಥಿತಿ ಎದುರಿಸುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 4 ಪುಟಗಳ ಸುದೀರ್ಘ ಪತ್ರ ಬರೆದಿದ್ದಾರೆ. ಮೂರು ಪುಟಗಳ ತಮ್ಮ ಪತ್ರದಲ್ಲಿ ಕೊರೊನಾ ಸೋಂಕಿನ ತಡೆಗೆ ಕೆಲ ಸಲಹೆ ನೀಡಿರುವ ದೇವೇಗೌಡರು, ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಅವಕಾಶ ನೀಡಿ, ಜಿಲ್ಲಾಡಳಿತಗಳಿಗೇ ಇಂತಹ ಅವಕಾಶ ನೀಡಬೇಕೆಂದು ಕೋರಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಕೊರೊನಾ ವಾರ್ ರೂಂ ತೆರೆಯಿರಿ. ತಾಲೂಕು, ಹಳ್ಳಿಗಳ ಕಡೆಯೂ ಗಮನ ಹರಿಸಬೇಕು. ಇದಕ್ಕಾಗಿ ಆರೋಗ್ಯ ಇಲಾಖೆ ಜತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಯನ್ನ ನಿಯೋಜಿಸಿ ಎಂದು ಅವರು ಸಲಹೆ ನೀಡಿದ್ದಾರೆ.

ಬಡವರಿಗಾಗಿ ಮಿಡಿಯುವ ಮಾಜಿ ಪ್ರಧಾನಿ ದೇವೇಗೌಡರು ನೀಡಿದ ಉಚಿತ ಸಲಹೆ ಏನು?

ಕೊರೊನಾ ಲಸಿಕೆ ಬಗ್ಗೆ ಸಕಾರಾತ್ಮಕ ಸಂದೇಶ ನೀಡಬೇಕು. ಕೊರೊನಾ ಲಸಿಕೆ ಪಡೆಯಲು ಜನರಿಗೆ ‌ಗಡುವು ನೀಡಬೇಕು. ಆಯಾ ಕ್ಷೇತ್ರದ ಜನರಿಗೆ ಲಸಿಕೆ ಹಾಕಿಸುವುದಕ್ಕೆ ಟಾರ್ಗೆಟ್ ನೀಡಿ. ಜನಪ್ರತಿನಿಧಿಗಳಿಗೇ ಹೀಗೆ ಲಸಿಕೆ ಹಾಕಿಸುವ ಟಾರ್ಗೆಟ್ ನೀಡಿ. ಬಡವರನ್ನು ಗಮನದಲ್ಲಿಟ್ಟುಕೊಂಡು ದರ ನಿಗದಿ ಮಾಡಿ. ಕೊರೊನಾ ಲಸಿಕೆ ದರ ನಿಗದಿ ಮಾಡುವಂತೆ ಸಲಹೆ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸರ್ಕಾರವೇ ಉಚಿತವಾಗಿ ಕೊವಿಡ್ ಲಸಿಕೆ ನೀಡಿದರೆ ಅದು ದೊಡ್ಡ ಮಾನವೀಯ ನಡೆಯಾಗಲಿದೆ ಎಂದು ಪ್ರಧಾನಿ ಮೋದಿಗೆ ಕಿವಿಮಾತು ಹೇಳಿದ್ದಾರೆ. ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳದಿದ್ದರೂ ಗುರುತಿನ ಚೀಟಿ ಇಲ್ಲದಿದ್ದರೂ ಇವುಗಳ ಗೊಡವೆ ಇಲ್ಲದೆ, ಲಸಿಕೆ ಪಡೆಯಲು ಅಡ್ಡಿಯಾಗಬಾರದು ಎಂದಿದ್ದಾರೆ. (covid 19 crisis former prime minister HD Devegowda writes Letter To prime minister narendra Modi)

Also Read: ಹಾಸನದಲ್ಲಿಯೂ ಮೃತದೇಹ ಅಂತ್ಯಸಂಸ್ಕಾರಕ್ಕೆ ಸಂಕಷ್ಟ ಶುರು; ಏನಾಗಿದೆ ಅಲ್ಲಿ?

Published On - 1:47 pm, Mon, 26 April 21

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್