‘ಕೊರೊನಾ ಬಿಕ್ಕಟ್ಟು.. ಪ್ರಧಾನಿ ಮೋದಿ ನಿರ್ಮಿತ ವಿಪತ್ತು’-ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿಯವರೇ, ನಿಮಗೆ ಕೊರೊನಾ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದೆ ಇದ್ದರೆ, ನಿಮ್ಮ ಖುರ್ಚಿಯನ್ನು ಬಿಟ್ಟುಬಿಡಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಕೋಲ್ಕತ್ತ: ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಪರಿಸ್ಥಿತಿಯ ಬಗ್ಗೆ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ವಿರುದ್ಧ ಹೋರಾಟಕ್ಕೆ ಸಹಕರಿಸಿ ಎಂದು ಜನರ ಬಳಿ ಮನವಿ ಮಾಡಿಕೊಂಡಿದ್ದಲ್ಲದೆ, ಲಾಕ್ಡೌನ್ನ್ನು ಕೊನೇ ಅಸ್ತ್ರವನ್ನಾಗಿ ಪ್ರಯೋಗಿಸಿ ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.
ಅದರ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದಿದ್ದಾರೆ. ಈ ಕೊರೊನಾ ಬಿಕ್ಕಟ್ಟು ಎನ್ನುವುದು ನರೇಂದ್ರ ಮೋದಿ ನಿರ್ಮಿತ ಬಹುದೊಡ್ಡ ಆಪತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆ ನಿಮಿತ್ತ ಪ್ರಚಾರ ನಡೆಸಿದ ಮಮತಾ ಬ್ಯಾನರ್ಜಿ, ದೇಶದಲ್ಲಿ ಕೊರೊನಾದ ಕೆಟ್ಟ ಪರಿಸ್ಥಿತಿ ಉಂಟಾಗಲು ಕೇಂದ್ರಸರ್ಕಾರವೇ ಕಾರಣ ಎಂದು ಹೇಳಿದ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರೇ, ನಿಮಗೆ ಕೊರೊನಾ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದೆ ಇದ್ದರೆ, ನಿಮ್ಮ ಖುರ್ಚಿಯನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.
ದೇಶದಲ್ಲಿ ಉಂಟಾಗಿರುವ ಆಕ್ಸಿಜನ್, ಕೊವಿಡ್ 19 ವ್ಯಾಕ್ಸಿನ್ ಸೇರಿ ಹಲವು ವ್ಯದ್ಯಕೀಯ ವ್ಯವಸ್ಥೆಗಳ ಅಭಾವ ಆಗಿರುವುದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ನಿನ್ನೆ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡುತ್ತ, ಆಕ್ಸಿಜನ್, ಲಸಿಕೆ, ಬೆಡ್ಗಳ ಕೊರತೆ ಆಗಿರುವುದು ಗಮನಕ್ಕೆ ಬಂದಿದೆ. ನಾವದನ್ನು ಅಗತ್ಯ ಇರುವಷ್ಟು ಪೂರೈಸಲು ಎಲ್ಲ ರೀತಿಯ ಕ್ರಮಗಳನ್ನೂ ತೆಗೆದುಕೊಳ್ಳುತ್ತಿದ್ದೇವೆ. ಜನರ ಜೀವ ರಕ್ಷಣೆಯೇ ನಮ್ಮ ಗುರಿ ಎಂದು ಹೇಳಿದ್ದರು. ಅಲ್ಲದೆ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದ ಮೋದಿಯವರು, ಲಾಕ್ಡೌನ್ ಕೊನೇ ಅಸ್ತ್ರವಾಗಿರಲಿ. ಅದರ ಬದಲು ಸೂಕ್ಷ್ಮ ಕಂಟೈನ್ಮೆಂಟ್ ಝೋನ್ಗಳನ್ನಾಗಿ ವಿಂಗಡಿಸಿ, ಕೊರೊನಾ ನಿಯಂತ್ರಿಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಚಿತ್ರರಂಗದಲ್ಲಿ 17 ವರ್ಷ ಕಳೆದ ಶುಭಾ ಪೂಂಜಾಗೆ ಈ ಗತಿಯೇ; ಮರುಗಿದ ಮಂಜು
(covid 19 crisis is a Narendra Modi Made Disaster says Mamata Banerjee)