ವಿಮಾನದ ಟಿಕೆಟ್ ಬುಕ್ ಮಾಡುವ ಮುನ್ನ ಗಮನಿಸಿ; ನಾನಾ ರಾಜ್ಯಗಳ ಕೊರೊನಾ ಮಾರ್ಗಸೂಚಿ ಹೀಗಿದೆ

Air India: ಈಗಾಗಲೇ ಹಲವು ರಾಜ್ಯ ಸರ್ಕಾರಗಳ ವಿಮಾನಗಳ ಪ್ರಯಾಣಿಕರಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಿವೆ. ವಿಮಾನಗಳ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುಂಚಿತವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಮಾತ್ರ ಪ್ರಯಾಣಿಸಬಹುದು ಎಂದು ಏರ್ ಇಂಡಿಯಾ ಟ್ವೀಟ್ ಮಾಡಿದೆ.

ವಿಮಾನದ ಟಿಕೆಟ್ ಬುಕ್ ಮಾಡುವ ಮುನ್ನ ಗಮನಿಸಿ; ನಾನಾ ರಾಜ್ಯಗಳ ಕೊರೊನಾ ಮಾರ್ಗಸೂಚಿ ಹೀಗಿದೆ
ಏರ್ ಇಂಡಿಯಾ ವಿಮಾನ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 21, 2021 | 5:59 PM

ನವದೆಹಲಿ: ಭಾರತದಲ್ಲಿ ಕೊರೊನಾ ಕೇಸುಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೇಶದೊಳಗೆ ವಿಮಾನಗಳ ಹಾರಾಟಕ್ಕೆ ಅನುಮತಿಯಿದ್ದು, ಬಹುತೇಕ ರಾಜ್ಯಗಳಲ್ಲಿ ಬೇರೆ ರಾಜ್ಯಗಳಿಂದ ಬರುವ ವಿಮಾನಗಳ ಪ್ರಯಾಣಿಕರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ದೇಶೀಯ ವಿಮಾನಗಳ ಪ್ರಯಾಣಿಕರಿಗಾಗಿ ಏರ್ ಇಂಡಿಯಾ ಕೊವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಗಾಗಿ, ವಿಮಾನಗಳ ಮೂಲಕ ಒಂದೆಡೆಯಿಂದ ಮತ್ತೊಂದೆಡೆ ತೆರಳುವ ಪ್ರಯಾಣಿಕರು ಟಿಕೆಟ್ ಬುಕ್ ಮಾಡುವ ಮೊದಲು ಈ ವಿಷಯಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಿ.

ಹೊಸ ಕೊವಿಡ್ ಮಾರ್ಗಸೂಚಿಗಳ ಬಗ್ಗೆ ಏರ್ ಇಂಡಿಯಾ ಪ್ರಕಟಣೆ ಹೊರಡಿಸಿದೆ. ಏರ್ ಇಂಡಿಯಾ ಪ್ರಯಾಣಿಕರು ಕೊವಿಡ್ ನಿಯಮಾವಳಿಗಳನ್ನು ಅನುಸರಿಸುವುದು ಅತ್ಯಗತ್ಯ. ಈಗಾಗಲೇ ಹಲವು ರಾಜ್ಯ ಸರ್ಕಾರಗಳ ವಿಮಾನಗಳ ಪ್ರಯಾಣಿಕರಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಿವೆ. ವಿಮಾನಗಳ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುಂಚಿತವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಮಾತ್ರ ಪ್ರಯಾಣಿಸಬಹುದು ಎಂದು ಏರ್ ಇಂಡಿಯಾ ಟ್ವೀಟ್ ಮಾಡಿದೆ.

ಯಾವ ರಾಜ್ಯಗಳ ವಿಮಾನ ಪ್ರಯಾಣಿಕರಿಗೆ ಯಾವ ನಿಯಮಗಳಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ…

ಕರ್ನಾಟಕ: ಕರ್ನಾಟಕಕ್ಕೆ ವಿಮಾನದ ಮೂಲಕ ಬರುವ ಕೇರಳ ಹಾಗೂ ಮಹಾರಾಷ್ಟ್ರದ ಪ್ರಯಾಣಿಕರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. 72 ಗಂಟೆಗಳ ಒಳಗಿನ ಕೊವಿಡ್ ನೆಗೆಟಿವ್ ವರದಿಯನ್ನು ಅವರು ಸಲ್ಲಿಸಬೇಕು. ಬೇರೆ ರಾಜ್ಯಗಳ ಪ್ರಯಾಣಿಕರಿಗೂ ಕೊರೊನಾ ನೆಗೆಟಿವ್ ವರದಿ ಕಡ್ಡಾಯ. ಕರ್ನಾಟಕದ ವಿಮಾನ ನಿಲ್ದಾಣಗಳಲ್ಲೂ 800 ರೂ. ಕೊಟ್ಟು ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳಬಹುದು.

ಅಂಡಮಾನ್ ಮತ್ತು ನಿಕೋಬಾರ್: ಅಂಡಮಾನ್- ನಿಕೋಬಾರ್ ದ್ವೀಪಕ್ಕೆ ಬಂದಿಳಿಯುವ ವಿಮಾನ ಪ್ರಯಾಣಿಕರು 48 ಗಂಟೆಗಳ ಮೊದಲಿನ ಆರ್​ಟಿ-ಪಿಸಿಆರ್ ನೆಗೆಟಿವ್ ವರದಿ ತೋರಿಸುವುದು ಕಡ್ಡಾಯ. ಐಸಿಎಂಆರ್​​ನಿಂದ ನೋಂದಾಯಿಸಲ್ಪಟ್ಟಿರುವ ಲ್ಯಾಬ್​ನಲ್ಲಿಯೇ ಈ ಪರೀಕ್ಷೆ ಮಾಡಿಸಿರಬೇಕು. ಹಾಗೇ, ಪ್ರಯಾಣಿಕರು ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಕೂಡ ಮಾಡಿಸಿಕೊಂಡಿರಬೇಕು. ವಿಮಾನಗಳ ಪ್ರಯಾಣಿಕರು 7 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಬೇಕು. ಕೊವಿಡ್ ನಿಯಮ ಉಲ್ಲಂಘಿಸುವ ವಿಮಾನ ಪ್ರಯಾಣಿಕರಿಗೆ 5,000 ರೂ. ದಂಡ ವಿಧಿಸಲಾಗುವುದು.

ಗೋವಾ: ಗೋವಾ ಪ್ರವೇಶಿಸುವ ವಿಮಾನ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ ಕೊವಿಡ್ ನೆಗೆಟಿವ್ ವರದಿ ಸಲ್ಲಿಸಬೇಕು. ಅಥವಾ ಗೋವಾ ಪ್ರವೇಶಿಸುವ 14 ದಿನಗಳ ಮೊದಲು ಎರಡೂ ಡೋಸ್​ನ ಕೊವಿಡ್ ಲಸಿಕೆ ಪಡೆದಿರಬೇಕು.

ಆಂಧ್ರ ಪ್ರದೇಶ: ಆಂಧ್ರಪ್ರದೇಶಕ್ಕೆ ಬರುವ ವಿಮಾನ ಪ್ರಯಾಣಿಕರು ಕೂಡ 14 ದಿನ ಹೋಂ ಕ್ವಾರಂಟೈನ್ ಆಗಬೇಕು. ವಿಮಾನ ಪ್ರಯಾಣಿಕರು ತಮ್ಮ ಸಂಪೂರ್ಣ ಮಾಹಿತಿಯನ್ನು ಸ್ಪಂದನ ವೆಬ್​ಸೈಟ್​ನಲ್ಲಿ ರಿಜಿಸ್ಟರ್ ಮಾಡಬೇಕು.

ಅಸ್ಸಾಂ: ಅಸ್ಸಾಂ ರಾಜ್ಯದ ವಿಮಾನ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ರ್ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಲಾಗುತ್ತದೆ. ವಿಮಾನ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ. ಸರ್ಕಾರಿ ಸಿಬ್ಬಂದಿ ಮತ್ತು ವೈದ್ಯಕೀಯ ಕಾರಣಗಳಿಗೆ ಆಗಮಿಸುವ ವಿಮಾನ ಪ್ರಯಾಣಿಕರಿಗೆ ಮಾತ್ರ ಈ ನಿಯಮ ಅನ್ವಯವಾಗುವುದಿಲ್ಲ.

ಬಿಹಾರ: ಬಿಹಾರಕ್ಕೆ ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರಿಗೆ ಆರ್​ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಹಾಗೇ, 10 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ವಿಮಾನ ಪ್ರಯಾಣಿಕರಿಗೆ ಮತ್ತೊಮ್ಮೆ ಏರ್​ಪೋರ್ಟ್​ನಲ್ಲಿಯೇ ಕೊವಿಡ್ ಟೆಸ್ಟ್ ಮಾಡಲಾಗುವುದು. ಗೋವಾ, ಮಧ್ಯಪ್ರದೇಶ, ದೆಹಲಿ, ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಪಂಜಾಬ್​ನಿಂದ ಬರುವ ವಿಮಾನಗಳ ಪ್ರಯಾಣಿಕರು ಲಸಿಕೆ ಪಡೆದಿರುವ ಸರ್ಟಿಫಿಕೆಟ್ ಅಥವಾ ಆರ್​ಟಿ-ಪಿಸಿಆರ್ ನೆಗೆಟಿವ್ ವರದಿಯನ್ನು ಸಲ್ಲಿಸಬೇಕು.

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ಬರುವ ದೇಶೀಯ ವಿಮಾನ ಪ್ರಯಾಣಿಕರು 14 ದಿನಗಳು ಹೋಂ ಕ್ವಾರಂಟೈನ್ ಆಗಬೇಕು. ಸರ್ಕಾರಿ ಸಿಬ್ಬಂದಿಗಳಿಗೆ ಮಾತ್ರ ಹೋಂ ಕ್ವಾರಂಟೈನ್ ಕಡ್ಡಾಯವಲ್ಲ.

ಕೇರಳ: ಕೇರಳಕ್ಕೆ ಬರುವ ವಿಮಾನಗಳ ಪ್ರಯಾಣಿಕರು 72 ಗಂಟೆಯೊಳಗಿನ ಕೊರೊನಾ ನೆಗೆಟಿವ್ ವರದಿ ತೋರಿಸಬೇಕು. ಯಾವುದೇ ರೋಗ ಲಕ್ಷಣಗಳಿಲ್ಲದವರು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಆಗಬೇಕು. ಪ್ರಯಾಣಿಕರ ಹಣದಲ್ಲೇ ವಿಮಾನ ನಿಲ್ದಾಣದಲ್ಲೂ ಆರ್​ಟಿ-ಪಿಸಿಆರ್​ ಪರೀಕ್ಷೆ ನಡೆಸಲಾಗುವುದು.

ಮಹಾರಾಷ್ಟ್ರ: ಮಹಾರಾಷ್ಟ್ರಕ್ಕೆ ಬರುವ ವಿಮಾನ ಪ್ರಯಾಣಿಕರು 72 ಗಂಟೆಗಳೊಳಗಿನ ಕೊರೊನಾ ವರದಿ ನೀಡಬೇಕು. ಕೊವಿಡ್ ನೆಗೆಟಿವ್ ವರದಿ ಇಲ್ಲದಿದ್ದರೆ ಪ್ರಯಾಣಿಕರಿಗೆ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡುವುದಿಲ್ಲ. 7 ದಿನಗಳಿಗೂ ಹೆಚ್ಚು ಕಾಲ ಮಹಾರಾಷ್ಟ್ರದಲ್ಲಿ ಇರುವವರು ಮಾತ್ರ ಕ್ವಾರಂಟೈನ್ ಆಗುವುದು ಕಡ್ಡಾಯ.

ತಮಿಳುನಾಡು: ತಮಿಳುನಾಡಿನ ವಿಮಾನ ಪ್ರಯಾಣಿಕರು ಈಗಾಗಲೇ 2 ಡೋಸ್ ಕೊವಿಡ್ ಲಸಿಕೆ ಹಾಕಿಸಿಕೊಂಡಿದ್ದರೆ ಕೊರೊನಾ ನೆಗೆಟಿವ್ ವರದಿ ನೀಡುವ ಅಗತ್ಯವಿಲ್ಲ. ಹಾಗೇ, ಕ್ವಾರಂಟೈನ್ ಆಗುವ ಅಗತ್ಯವೂ ಇಲ್ಲ. ಆದರೆ, ಕೊರೊನಾ ಲಸಿಕೆ ಪಡೆಯದ ಪ್ರಯಾಣಿಕರು 72 ಗಂಟೆಯೊಳಗಿನ ಕೊರೊನಾ ನೆಗೆಟಿವ್ ವರದಿ ನೀಡುವುದು ಕಡ್ಡಾಯ.

ಇದನ್ನೂ ಓದಿ: Karnataka Covid Update: ಕರ್ನಾಟಕದಲ್ಲಿ ಇಂದು 1,453 ಹೊಸ ಕೊವಿಡ್ ಪ್ರಕರಣ ದೃಢ, 17 ಜನರು ನಿಧನ

(COVID-19 guidelines for air travel Check states rules for domestic Flight travellers before booking tickets)

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್