AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19: ಕೋವಿಡ್ ವಿರುದ್ಧ ಹೋರಾಡಲು ಈ ಪಂಚತಂತ್ರಗಳನ್ನು ಅನುಸರಿಸುವಂತೆ ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸಲಹೆ

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ(Corona) ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೋವಿಡ್ ವಿರುದ್ಧ ಹೋರಾಡಲು ಪಂಚ ತಂತ್ರಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸಲಹೆ ನೀಡಿದೆ.

Covid 19: ಕೋವಿಡ್ ವಿರುದ್ಧ ಹೋರಾಡಲು ಈ ಪಂಚತಂತ್ರಗಳನ್ನು ಅನುಸರಿಸುವಂತೆ ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸಲಹೆ
ಆರೋಗ್ಯ
ನಯನಾ ರಾಜೀವ್
|

Updated on:Mar 23, 2023 | 2:34 PM

Share

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ(Corona) ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕೋವಿಡ್ ವಿರುದ್ಧ ಹೋರಾಡಲು ಪಂಚ ತಂತ್ರಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸಲಹೆ ನೀಡಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಟೆಸ್ಟ್​, ಟ್ರ್ಯಾಕ್, ಟ್ರೀಟ್, ಲಸಿಕೆ ಹಾಗೂ ಕೋವಿಡ್ ಸೂಕ್ತ ನಡವಳಿಕೆ​ ಈ ಪಂಚ ತಂತ್ರಗಳು ಕೊರೊನಾ ಸೋಂಕಿನಿಂದ ದೂರವಿರಲು ಸಹಾಯ ಮಾಡುತ್ತದೆ ಎಂದು ಹೇಳಿದೆ.  ಅಧಿಸೂಚನೆಯಲ್ಲಿ ಕೋವಿಡ್ 19 ಸಿದ್ಧತೆಗಳನ್ನು ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಶೀಲಿಸಲಾಗುತ್ತಿದೆ.

ಆರೋಗ್ಯ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಪ್ರಕಾರ, ದೇಶದಲ್ಲಿ ಒಟ್ಟು 220.65 ಕೋಟಿ ಡೋಸ್​ ಲಸಿಕೆಯನ್ನು ನೀಡಲಾಗಿದೆ.

ಮತ್ತಷ್ಟು ಓದಿ: India Covid Updates: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,300 ಹೊಸ ಕೊರೊನಾ ಪ್ರಕರಣಗಳು ಪತ್ತೆ, 3 ಸಾವು

ಆಸ್ಪತ್ರೆಯಲ್ಲಿ ಪ್ರಕರಣಗಳು ಹೆಚ್ಚಳವಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ, ಹೆಚ್ಚು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕು, ತೀವ್ರತರವಾದ ಉಸಿರಾಟದ ಕಾಯಿಲೆ ಪ್ರಕರಣಗಳಿದ್ದರೆ ಕೊರೊನಾ ಪರೀಕ್ಷೆ ಮಾಡಲೇಬೇಕು ಎಂದು ಹೇಳಲಾಗಿದೆ.

ಭಾರತದಲ್ಲಿ ಕೊರೊನಾ(Corona) ಪ್ರಕರಣಗಳು ಕ್ರಮೇಣವಾಗಿ ಏರಿಕೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 1,300 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 140 ದಿನಗಳಲ್ಲೇ ಅತ್ಯಧಿಕ ಪ್ರಕರಣ ಇದಾಗಿದೆ. ಭಾರತದಲ್ಲಿ 4.46 ಕೋಟಿ ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ, ಇದುವರೆಗೆ 5,30,816 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕ, ಗುಜರಾತ್, ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದೇಶದಲ್ಲಿ 7,605 ಸಕ್ರಿಯ ಪ್ರಕರಣಗಳಿವೆ, ಕೋವಿಡ್ ಪತ್ತೆಗಾಗಿ ಇದುವರೆಗೆ ಒಟ್ಟು 92.06 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 89,078 ಪರೀಕ್ಷೆಗಳನ್ನು ನಡೆಸಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,41,60,997 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ.

ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚಿನ ಸಂಖ್ಯೆಯ H1N1 ಮತ್ತು H3N2 ಪ್ರಕರಣಗಳನ್ನು ಗಮನಿಸಿದ ಪ್ರಧಾನಿಯವರು ದೇಶದಲ್ಲಿ ಪ್ರಸ್ತುತ ಇನ್ಫ್ಲುಯೆನ್ಜಾ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Thu, 23 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ