AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶದ ಘಟನೆ ಬೇರೆ ರಾಜ್ಯಗಳಿಗೂ ಎಚ್ಚರಿಕೆಯ ಗಂಟೆ

ಸೆಪ್ಟೆಂಬರ್ 30ರಂದು ಅನ್​ಲಾಕ್ 5.0ಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಕೇಂದ್ರ ಗೃಹ ಸಚಿವಾಲಯ ಶಾಲೆಗಳನ್ನು ಅಕ್ಟೋಬರ್ 15ರಿಂದ ಪುನರಾರಂಭಿಸಬಹುದೆಂದು ಹೇಳಿದೆ. ಆದರೆ, ಕರ್ನಾಟಕ ಸರ್ಕಾರ ಈ ಬಗ್ಗೆ ಅವಸರ ತೋರುತ್ತಿಲ್ಲ. ಪಕ್ಕದ ಆಂಧ್ರಪ್ರದೇಶದಲ್ಲಿ ಕೊವಿಡ್-19ಗೆ ಸಂಬಂಧಿಸಿದ ಒಂದು ಘಟನೆ ಮಾತ್ರ ಶಾಲೆಗಳನ್ನು ಆದಷ್ಟು ಬೇಗ ಪುನರಾರಂಭಿಸಲು ತವಕಪಡುತ್ತಿರುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ಇದು ಕೇವಲ ಸರ್ಕಾರವಷ್ಟೇ ಅಲ್ಲ ಪೋಷಕರನ್ನೂ ಎಚ್ಚರಿಸುವಂಥ ಪ್ರಕರಣವಾಗಿದೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಭಟ್ಲೂರಿನಲ್ಲಿ ಟ್ಯೂಷನ್​ಗೆಂದು ಹೋಗಿದ್ದ 15 ಮಕ್ಕಳಿಗೆ ಕೊವಿಡ್-19 ಸೋಂಕು ತಗುಲಿದೆ. ಇದು […]

ಆಂಧ್ರಪ್ರದೇಶದ ಘಟನೆ ಬೇರೆ ರಾಜ್ಯಗಳಿಗೂ ಎಚ್ಚರಿಕೆಯ ಗಂಟೆ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 02, 2020 | 11:04 PM

Share

ಸೆಪ್ಟೆಂಬರ್ 30ರಂದು ಅನ್​ಲಾಕ್ 5.0ಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಕೇಂದ್ರ ಗೃಹ ಸಚಿವಾಲಯ ಶಾಲೆಗಳನ್ನು ಅಕ್ಟೋಬರ್ 15ರಿಂದ ಪುನರಾರಂಭಿಸಬಹುದೆಂದು ಹೇಳಿದೆ. ಆದರೆ, ಕರ್ನಾಟಕ ಸರ್ಕಾರ ಈ ಬಗ್ಗೆ ಅವಸರ ತೋರುತ್ತಿಲ್ಲ. ಪಕ್ಕದ ಆಂಧ್ರಪ್ರದೇಶದಲ್ಲಿ ಕೊವಿಡ್-19ಗೆ ಸಂಬಂಧಿಸಿದ ಒಂದು ಘಟನೆ ಮಾತ್ರ ಶಾಲೆಗಳನ್ನು ಆದಷ್ಟು ಬೇಗ ಪುನರಾರಂಭಿಸಲು ತವಕಪಡುತ್ತಿರುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ಇದು ಕೇವಲ ಸರ್ಕಾರವಷ್ಟೇ ಅಲ್ಲ ಪೋಷಕರನ್ನೂ ಎಚ್ಚರಿಸುವಂಥ ಪ್ರಕರಣವಾಗಿದೆ.

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಭಟ್ಲೂರಿನಲ್ಲಿ ಟ್ಯೂಷನ್​ಗೆಂದು ಹೋಗಿದ್ದ 15 ಮಕ್ಕಳಿಗೆ ಕೊವಿಡ್-19 ಸೋಂಕು ತಗುಲಿದೆ. ಇದು ಮತ್ತೂ ಆಘಾತಕಾರಿ ಸಂಗತಿ ಯಾಕೆಂದರೆ ಸೋಂಕಿತ ಮಕ್ಕಳಲ್ಲಿ ಹೆಚ್ಚಿನವರು 7 ವರ್ಷಕ್ಕಿಂತ ಕಡಿಮೆ ಪ್ರಾಯದವರು. ಸೋಂಕಿತ ಮಕ್ಕಳನ್ನು ಕ್ವಾರಂಟೈನ್ ಸೆಂಟರ್​ಗೆ ದಾಖಲಿಸಲಾಗಿದೆ ಮತ್ತು ಇಡೀ ಏರಿಯಾವನ್ನು ಸ್ಯಾನಿಟೈಸ್ ಮಾಡಲಾಗಿದೆ.

ಅಂದಹಾಗೆ, ರಿಪೋರ್ಟ್​ ಒಂದರ ಪ್ರಕಾರ 14 ವರ್ಷದೊಳಗಿನ ಮಕ್ಕಳು ಈ ವ್ಯಾಧಿಯ ‘ಸೈಲೆಂಟ್ ಸ್ಪ್ರೆಡರ್’ ಗಳಂತೆ. ಪರಿಸ್ಥಿತಿ ಹಾಗಿರಬೇಕಾದರೆ ಶಾಲೆಗಳನ್ನು ಪುನರಾರಂಭಿಸುವ ಯೋಚನೆಯೇ ಅಪಾಯಕ್ಕೆ ಆಮಂತ್ರಣ ನೀಡಿದಂತೆ.

ವಿಶ್ವದಲ್ಲಿ ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಈಗಲೇ ಶಾಲೆಗಳೇನಾದರು ಪುನರಾರಂಭಗೊಂಡರೆ ಸೋಂಕು ಮತ್ತಷ್ಟು ಹೆಚ್ಚುವ ಸಾಧ್ಯತೆಯಿರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅಮೆರಿಕದಲ್ಲಿ ಶಾಲೆಗಳು ಪುನರಾರಂಭಗೊಂಡ ನಂತರವೇ ಸೋಂಕಿನ ಭರಾಟೆ ಅಧಿಕವಾಗಿದ್ದು. ಆದರೆ ಶಾಲೆ ಶುರುವಾಗದೇ ಇದ್ದರೆ, ಮಕ್ಕಳ ಭವಿಷ್ಯಕ್ಕೆ ತೊಂದರೆ; ಹಾಗಂತ ಈಗಲೇ ಪುನರಾರಂಭಿಸಿದರೆ ಮಕ್ಕಳ ಜೀವಕ್ಕೆ ಕುತ್ತು.

ಇಂಥ ಸೂಕ್ಷ್ಮ ಪರಿಸ್ಥಿತಿಯಲ್ಲಿ ಕರ್ನಾಟಕ ಸರ್ಕಾರ ಮಾತ್ರವಲ್ಲ, ಬೇರೆ ಬೇರೆ ರಾಜ್ಯಗಳ ಸರ್ಕಾರಗಳೂ ಅತ್ಯಂತ ವಿವೇಚನೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ರೂಪಿಸುವೆಡೆ ಗಮನಹರಿಸಬೇಕು.

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ