AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್: ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ₹500 ದಂಡ

ಮಂಗಳವಾರ ದೆಹಲಿಯು 632 ಹೊಸ ಕೊವಿಡ್ -19 ಪ್ರಕರಣಗಳನ್ನು ಶೇ 4.42ನಷ್ಟು ಸಕಾರಾತ್ಮಕ ದರದೊಂದಿಗೆ ವರದಿ ಮಾಡಿದೆ. ಸೋಮವಾರ, ದೈನಂದಿನ ಸಂಖ್ಯೆ 501 ಆಗಿದ್ದರೆ, ಸಕಾರಾತ್ಮಕ ದರವು ಶೇ 7.72 ಆಗಿತ್ತು. 

ಕೊವಿಡ್: ದೆಹಲಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ನಿಯಮ ಉಲ್ಲಂಘಿಸಿದರೆ ₹500 ದಂಡ
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Apr 20, 2022 | 1:56 PM

Share

ದೆಹಲಿ: ಕೊವಿಡ್ ಪ್ರಕರಣಗಳು (Covid 19) ಏರಿಕೆಯಾಗುತ್ತಿರುವುದರಿಂದ ನವದೆಹಲಿಯಲ್ಲಿ ಮತ್ತೊಮ್ಮೆ ಮಾಸ್ಕ್  (mask)ಕಡ್ಡಾಯಗೊಳಿಸಲಾಗಿದ್ದು, ನಿಯಮ ಉಲ್ಲಂಘನೆಗೆ ₹500 ದಂಡ ವಿಧಿಸಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಬುಧವಾರ ತನ್ನ ಸಭೆಯಲ್ಲಿ ನಿರ್ಧರಿಸಿದೆ. ದೈನಂದಿನ ಕೊವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದೆಹಲಿಯಲ್ಲಿ ಮತ್ತೆ ಏರಿಕೆಯಾಗುತ್ತಿರುವ ಕಾರಣ ಈ ನಿರ್ಧಾರ ಬಂದಿದೆ. ಶಾಲೆಗಳು ದೈಹಿಕ ತರಗತಿಗಳನ್ನು ಮುಂದುವರೆಸುತ್ತವೆ ಎಂದು ಪ್ರಾಧಿಕಾರವು ಹೇಳಿದ್ದು ಉತ್ತಮ ನಿರ್ವಹಣೆಗಾಗಿ ಎಸ್​​ ಒಪಿ (SOP) ಗಳನ್ನು ನೀಡಬೇಕಾಗುತ್ತದೆ. ಸಾಮಾಜಿಕ ಕೂಟಗಳ ಮೇಲೆ ಯಾವುದೇ ನಿಷೇಧವಿರುವುದಿಲ್ಲ. ಆದರೆ ಎಲ್ಲಾ ರೀತಿಯ ಸಭೆಗಳ ಮೇಲೆ ನಿಕಟವಾದ ಕಣ್ಗಾವಲಿರುತ್ತದೆ. ಮಂಗಳವಾರ ದೆಹಲಿಯು 632 ಹೊಸ ಕೊವಿಡ್ -19 ಪ್ರಕರಣಗಳನ್ನು ಶೇ 4.42ನಷ್ಟು ಸಕಾರಾತ್ಮಕ ದರದೊಂದಿಗೆ ವರದಿ ಮಾಡಿದೆ. ಸೋಮವಾರ, ದೈನಂದಿನ ಸಂಖ್ಯೆ 501 ಆಗಿದ್ದರೆ, ಸಕಾರಾತ್ಮಕ ದರವು ಶೇ 7.72 ಆಗಿತ್ತು.  ಏಪ್ರಿಲ್ 11 ಮತ್ತು 18 ರ ನಡುವೆ, ದೆಹಲಿಯು ದೈನಂದಿನ ಕೊವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಸುಮಾರು ಮೂರು ಪಟ್ಟು ಏರಿಕೆ ಕಂಡಿದೆ, ದೆಹಲಿಯು ಇತರ ಅನೇಕ ರಾಜ್ಯಗಳಂತೆ ಮಾಸ್ಕ್ ಕಡ್ಡಾಯ ಆದೇಶವನ್ನು ತೆಗೆದುಹಾಕಿದ ಸಮಯದಲ್ಲಿ ಪರಿಸ್ಥಿತಿಯು ಆತಂಕಕ್ಕೆ ಕಾರಣವಾಗಿದೆ. ಮಾಸ್ಕ್ ಧರಿಸುವ ಆದೇಶವನ್ನು ತೆಗೆದುಹಾಕುವ ನಿರ್ಧಾರದ ಬಗ್ಗೆ ವೈದ್ಯರು ಭಿನ್ನಾಭಿಪ್ರಾಯ ಹೊಂದಿದ್ದರು, ಏಕೆಂದರೆ ದುರ್ಬಲ ಜನರ ಗುಂಪುಗಳು ಮಾಸ್ಕ್ ಧರಿಸುವುದನ್ನು ಬಿಡಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಮ್ಮೆ ದಂಡ ವಿಧಿಸಲು ಸರ್ಕಾರ ಯೋಜಿಸುತ್ತಿಲ್ಲ ಎಂದು ಮಂಗಳವಾರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಭರವಸೆಯ ನಡುವೆಯೇ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎಂಬ ಆದೇಶ ಹೊರಡಿಸಲಾಗಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಮಿಜೋರಾಂ ಸರ್ಕಾರಗಳಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಐದು ರಾಜ್ಯಗಳಿಗೆ ಪತ್ರ ಬರೆದು ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದೆ. ಟೆಸ್ಟ್, ಟ್ರ್ಯಾಕ್, ಟ್ರೀಟ್​ಮೆಂಟ್, ವ್ಯಾಕ್ಸಿನೇಷನ್ ಹೆಚ್ಚಿಸುವಂತೆ ಅವರು ಸಲಹೆ ಮಾಡಿದ್ದಾರೆ. ಜಿನೋಮಿಕ್ ಸೀಕ್ವೆನ್ಸಿಂಗ್ ಹೆಚ್ಚಿಸಿ, ಹೆಚ್ಚು ಜನರು ಗುಂಪು ಸೇರದಂತೆ ನಿಗಾವಹಿಸಿ, ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡಿ ಎಂದು ಹೇಳಿದ್ದಾರೆ. ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.

ಭಾರತದಲ್ಲಿ ಕಳೆದ ಎರಡು ತಿಂಗಳುಗಳಿಂದ ಕೊವಿಡ್-19 ಪ್ರಕರಣಗಳು ಸತತವಾಗಿ ಇಳಿಕೆಯಾಗುತ್ತಿವೆ. ದೇಶದಲ್ಲಿ ಪ್ರತಿದಿನ ವರದಿಯಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆ ಸುಮಾರು 1000ದ ಆಸುಪಾಸಿನಲ್ಲಿದೆ. ಪಾಸಿಟಿವಿಟಿ ಪ್ರಮಾಣ ಶೇ 1ಕ್ಕಿಂತಲೂ ಕಡಿಮೆಯಿದೆ. ಆದರೆ ಇತ್ತೀಚೆಗೆ ಕೆಲ ರಾಜ್ಯಗಳಿಂದ ವರದಿಯಾಗುತ್ತಿರುವ ಸೋಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಿದೆ. ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಈಗಾಗಲೇ ಸಾಧಿಸಿರುವ ಯಶಸ್ಸು ವಿಫಲವಾಗದಂತೆ ಇಂಥ ರಾಜ್ಯಗಳು ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಮತ್ತೆ ಕೊರೊನಾ ಆತಂಕ: ಕೇಂದ್ರದಿಂದ 5 ರಾಜ್ಯಗಳಿಗೆ ಪತ್ರ

Published On - 1:55 pm, Wed, 20 April 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!