ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ, ಪರಿಸ್ಥಿತಿ ಹದಗೆಡುತ್ತಿದೆ: ಕೇಂದ್ರ ಆರೋಗ್ಯ ಸಚಿವಾಲಯ

‘ನಾವು ಸೋಂಕು ನಿಯಂತ್ರಿಸಬಹುದು ಎಂದುಕೊಂಡಾಗಲೇ ಪರಿಸ್ಥಿತಿ ಕೈಮೀರುತ್ತಿದೆ’ ಎಂದು ಕೊರೊನಾ ಲಸಿಕೆ ವಿತರಣೆಗಾಗಿ ರಚಿಸಿರುವ ರಾಷ್ಟ್ರೀಯ ತಜ್ಞರ ಸಮಿತಿಯ ಅಧ್ಯಕ್ಷ ವಿ.ಕೆ.ಪೌಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ, ಪರಿಸ್ಥಿತಿ ಹದಗೆಡುತ್ತಿದೆ: ಕೇಂದ್ರ ಆರೋಗ್ಯ ಸಚಿವಾಲಯ
ಪ್ರಾತಿನಿಧಿಕ ಚಿತ್ರ
Follow us
| Updated By: ganapathi bhat

Updated on:Mar 30, 2021 | 8:25 PM

ದೆಹಲಿ: ದೇಶದಲ್ಲಿ ಕೋವಿಡ್-19 ಪರಿಸ್ಥಿತಿ ಹದಗೆಡುತ್ತಿದೆ. ದೇಶದಲ್ಲಿ ಕೆಟ್ಟ ಪರಿಸ್ಥಿತಿಯಿಂದ ಹದಗೆಟ್ಟ ಪರಿಸ್ಥಿತಿಗೆ ನಾವು ಹೋಗುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ‘ನಾವು ಸೋಂಕು ನಿಯಂತ್ರಿಸಬಹುದು ಎಂದುಕೊಂಡಾಗಲೇ ಪರಿಸ್ಥಿತಿ ಕೈಮೀರುತ್ತಿದೆ’ ಎಂದು ಕೊರೊನಾ ಲಸಿಕೆ ವಿತರಣೆಗಾಗಿ ರಚಿಸಿರುವ ರಾಷ್ಟ್ರೀಯ ತಜ್ಞರ ಸಮಿತಿಯ ಅಧ್ಯಕ್ಷ ವಿ.ಕೆ.ಪೌಲ್ ವಿಷಾದ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಸೋಂಕು ಪ್ರಮಾಣ ಹೆಚ್ಚಾಗಲು ರೂಪಾಂತರಿ ಕೊರೊನಾ ವೈರಾಣುಗಳು ಕಾರಣ ಎಂಬ ವರದಿಗಳನ್ನು ಅವರು ಅಲ್ಲಗಳೆದರು. ರಾಜ್ಯ ಸರ್ಕಾರಗಳು ಸೋಂಕು ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ‘ಕಾನೂನು ಬಳಸಿ, ದಂಡ ಹಾಕಿ. ಜನರು ಮಾಸ್ಕ್ ಧರಿಸಲೇಬೇಕು’ ಎಂದು ಅವರು ಕಟುವಾಗಿ ನುಡಿದರು.

ಕೊರೊನಾ ಸೋಂಕು ಹೆಚ್ಚಾಗುತ್ತಿರುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ನೀಡಿರುವ ಮಾಹಿತಿಯ 10 ಮುಖ್ಯಾಂಶಗಳು ಇವು..

1) ಪಂಜಾಬ್​ ರಾಜ್ಯವು ಸಾಕಷ್ಟು ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ಮಾಡುತ್ತಿಲ್ಲ. ಸೋಂಕಿತರನ್ನು ಸರಿಯಾದ ರೀತಿಯಲ್ಲಿ ಪ್ರತ್ಯೇಕವಾಸದಲ್ಲಿಯೂ (ಐಸೊಲೇಷನ್) ಇರಿಸುತ್ತಿಲ್ಲ. ಮಹಾರಾಷ್ಟ್ರದಲ್ಲಿ 3.37 ಲಕ್ಷ ಸಕ್ರಿಯ ಪ್ರಕರಣಗಳಿವೆ. ಫೆಬ್ರುವರಿ ತಿಂಗಳಲ್ಲಿ ಸರಾಸರಿ ಸಾವಿನ ಪ್ರಕರಣಗಳು 32 ಇತ್ತು. ಆದರೆ ಮಾರ್ಚ್​ನಲ್ಲಿ ಇದು 118 ಆಗಿದೆ. ಕರ್ನಾಟಕವೂ ಪ್ರತ್ಯೇಕವಾಸದ ಬಗ್ಗೆ ಗಮನ ನೀಡುತ್ತಿಲ್ಲ ಎಂದು ವಿ.ಕೆ.ಪೌಲ್ ಹೇಳಿದರು.

2) ದೇಶದಲ್ಲಿ ಅತಿಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ 10 ಜಿಲ್ಲೆಗಳ ಪೈಕಿ ದೆಹಲಿಯೂ ಒಂದು. ದೆಹಲಿಯನ್ನು ಒಂದೇ ಜಿಲ್ಲೆ ಎಂದು ಪರಿಗಣಿಸಲಾಗಿದೆ. ಇಂಥ ಇನ್ನೂ 8 ಜಿಲ್ಲೆಗಳು ಮಹಾರಾಷ್ಟ್ರದಲ್ಲಿವೆ ಎಂದರು.

3) ಸಾವಿನ ಪ್ರಮಾಣವು ಕಡಿಮೆಯಾಗಿದೆ ಎಂದು ಹೆಮ್ಮೆಪಡುತ್ತಿದ್ದೇವೆ. ಆದರೆ ಸಾವಿನ ಪ್ರಮಾಣ 4 ಪಟ್ಟು ಹೆಚ್ಚಾಗಿದೆ. ವೈರಸ್​ ಸೋಂಕು ನಿಯಂತ್ರಣಕ್ಕೆ ತುರ್ತಾಗಿ ಗಮನ ಹರಿಸಬೇಕಿದೆ ಎಂದು ಪೌಲ್ ಹೇಳಿದರು. ‘ಸಂಪರ್ಕಿತರ ಪತ್ತೆ, ಕ್ವಾರಂಟೈನ್ ಮತ್ತು ಪ್ರತ್ಯೇಕವಾಸಕ್ಕೆ ಗಮನ ನೀಡದಿದ್ದರೆ ಸೋಂಕು ಕಡಿಮೆ ಮಾಡಲು ಸಾಧ್ಯವಿಲ್ಲ’ ಎಂದು ಅವರು ತಿಳಿಸಿದರು.

4) ಭಾರತದಲ್ಲಿ ಹೊಸರೀತಿಯ ಕೊರೊನಾ ತಳಿ ಪತ್ತೆಯಾಗಿದೆ ಎಂಬ ವರದಿಗಳನ್ನು ಅವರು ಸಾರಾಸಗಟಾಗಿ ನಿರಾಕರಿಸಿದರು. ವೈರಾಣುಗಳು ರೂಪಾಂತರ ಸಹಜ ಪ್ರಕ್ರಿಯೆ ಎಂದರು.

5) ವಿದೇಶಗಳ ಕೆಲ ರೂಪಾಂತರಿತ ವೈರಾಣು ತಳಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾರತದಲ್ಲಿ ಪತ್ತೆಯಾಗಿಲ್ಲ. ದೇಶದ 10 ಪ್ರಯೋಗಾಲಯಗಳಲ್ಲಿ ತಪಾಸಣೆಗೆ ಒಳಪಡಿಸಿದ 11,064 ಮಾದರಿಗಳಲ್ಲಿ ಈವರೆಗೆ 807 ಬ್ರಿಟನ್​ ಮತ್ತು 47 ದಕ್ಷಿಣ ಆಫ್ರಿಕಾದ ರೂಪಾಂತರಿ ಮಾದರಿ ಪತ್ತೆಯಾಗಿದೆ ಎಂದು ಸಚಿವಾಲಯ ಹೇಳಿದೆ.

6) ಸೋಂಕಿನ ಪ್ರಮಾಣ ಹೆಚ್ಚಾಗಿ ವರದಿಯಾಗುತ್ತಿರುವ ಜಿಲ್ಲೆಗಳಲ್ಲಿ ಆದ್ಯತಾ ಗುಂಪುಗಳಿಗೆ ಲಸಿಕೆ ನೀಡುವ ಪ್ರಮಾಣ ಹೆಚ್ಚಾಗಬೇಕು. ಮಾರ್ಚ್​ 30ರ ಮುಂಜಾನೆಯವರೆಗೆ ಒಟ್ಟು 6.11 ಲಕ್ಷ ಲಸಿಕೆ ಡೋಸ್​ಗಳನ್ನು ನೀಡಲಾಗಿದೆ.

7) ರಾಜ್ಯಗಳಲ್ಲಿ ಲಭ್ಯವಿರುವ ಖಾಸಗಿ ವೈದ್ಯಕೀಯ ವ್ಯವಸ್ಥೆಯನ್ನೂ ಲಸಿಕೆ ನೀಡಲು ಬಳಸಿಕೊಳ್ಳಬೇಕು. ಕಾಯುವ ಸ್ಥಳ, ಲಸಿಕೆ ನೀಡುವ ಮತ್ತು ಗಮನಿಸುವ ಕೊಠಡಿಗಳು ಇರಬೇಕು. ಆಸ್ಪತ್ರೆಗಳಲ್ಲಿ ಸುಸಜ್ಜಿತ ಕೋಲ್ಡ್​ಚೈನ್​ ವ್ಯವಸ್ಥೆ ಬೇಕು. ಲಸಿಕೆ ತೆಗೆದುಕೊಂಡ ವ್ಯಕ್ತಿಯ ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆ ಅಂಥ ಸ್ಥಳಗಳಲ್ಲಿ ಇರಬೇಕು ಎಂದು ತಿಳಿಸಿದರು.

8) ಕೊರೊನಾ ಸೋಂಕು ನಿಯಂತ್ರಣಕ್ಕೆ ನೀಡುವ ಇನ್ನೂ 7 ಲಸಿಕೆಗಳು ವಿವಿಧ ಹಂತಗಳ ಕ್ಲಿನಿಕಲ್ ಟ್ರಯಲ್ಸ್​ನಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು. ಪ್ರಸ್ತುತ ಭಾರತದಲ್ಲಿ ಕೋವಿಶೀಲ್ಡ್​ ಮತ್ತು ಕೊವ್ಯಾಕ್ಸಿನ್ ಲಸಿಕೆಗಳನ್ನು ಮಾತ್ರ ವಿತರಿಸಲಾಗುತ್ತಿದೆ.

9) ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳು ಬ್ರಿಟನ್, ಬ್ರಿಜಿಲ್​ ರೂಪಾಂತರಿ ಕೊರೊನಾ ವೈರಾಣುಗಳ ವಿರುದ್ಧವೂ ಯಶಸ್ವಿಯಾಗಿ ಹೋರಾಡಬಲ್ಲ ಸಾಮರ್ಥ್ಯ ಹೊಂದಿವೆ.

10) ನಿನ್ನೆ (ಮಾರ್ಚ್ 29) 68,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿವೆ. ಮಂಗಳವಾರ ಮುಂಜಾನೆ 56,000 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 5.5 ಲಕ್ಷ ಮುಟ್ಟಿದೆ.

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯ ಹೊಸರೂಪ ಜನರಿಗೆ ತಲೆನೋವು ತಂದಿದೆ

ಇದನ್ನೂ ಓದಿ: ಕೊವಿಡ್​-19 ಲಸಿಕೆ ಕಳಿಸಿದ ಭಾರತ ಸರ್ಕಾರಕ್ಕೆ ಶುಕ್ರಿಯಾ ಎಂದ ಭೂತಾನ್​ನ ಪುಟ್ಟ ಬಾಲಕಿಗೆ ಮನಸೋತ ನೆಟ್ಟಿಗರು; ಎರಡೂ ದೇಶಗಳ ಸ್ನೇಹಕ್ಕೊಂದು ಸಾಕ್ಷಿ

Published On - 8:20 pm, Tue, 30 March 21

ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ