Covid- 19 situation review: ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ

ಕಾಂಗ್ರೆಸ್ ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಕೋವಿಡ್ 19 ಸನ್ನಿವೇಶದ ಬಗ್ಗೆ ಪರಾಮರ್ಶೆ ನಡೆಸುವ ಸಲುವಾಗಿ ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ.

Covid- 19 situation review: ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ
ರಾಹುಲ್​ ಗಾಂಧಿ ಮತ್ತು ಸೋನಿಯಾ ಗಾಂಧಿ
Follow us
Srinivas Mata
|

Updated on: Apr 10, 2021 | 12:51 PM

ನವದೆಹಲಿ: ಕಾಂಗ್ರೆಸ್ ಪಕ್ಷದ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು (ಏಪ್ರಿಲ್ 10, 2021) ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆಗೆ ಕೋವಿಡ್- 19 ಪರಿಸ್ಥಿತಿ ಬಗ್ಗೆ ವರ್ಚುವಲ್ ಸಭೆ ನಡೆಸಲಿದ್ದಾರೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ. ರಾಜ್ಯಗಳಲ್ಲಿನ ಕೋವಿಡ್- 19 ಪರಿಸ್ಥಿತಿ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಸಲಾಗುವುದು. ಸಾರ್ವಜನಿಕರಿಗೆ ಹೇಗೆ ನೆರವಾಗಬಹುದು ಎಂಬ ಬಗ್ಗೆ ಕಾಂಗ್ರೆಸ್ ನಾಯಕತ್ವ ಸ್ಥಾನದಿಂದ ಸಲಹೆಗಳನ್ನು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿರುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮಹಾರಾಷ್ಟ್ರ, ಒಡಿಶಾ, ಆಂಧ್ರಪ್ರದೇಶ, ಪಂಜಾಬ್ಮ, ರಾಜಸ್ಥಾನ, ಉತ್ತರಪ್ರದೇಶ, ಉತ್ತರಾಖಂಡ, ಛತ್ತೀಸ್​ಗಢ, ಬಿಹಾರ ರಾಜ್ಯಗಳಲ್ಲಿ ಲಸಿಕೆಗೆ ಕೊರತೆ ಎದುರಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಕ್ಷಣದಿಂದ ಲಸಿಕೆ ರಫ್ತಿಗೆ ತಡೆ ನೀಡುವಂತೆ ಕೋರಿ ಪ್ರಧಾನಿಗೆ ಪತ್ರ ಬರೆದ ಒಂದು ದಿನದ ನಂತರ ಈ ಸಭೆ ನಡೆಯುತ್ತಿದೆ. ಇದರ ಜತೆಗೆ ಇತರ ಲಸಿಕೆಗಳಿಗೆ ವೇಗವಾಗಿ ಅನುಮತಿ ನೀಡಬೇಕು ಹಾಗೂ ಅಗತ್ಯ ಇರುವ ಎಲ್ಲರಿಗೂ ಲಸಿಕೆ ಸಿಗಬೇಕು ಎಂದು ಅವರು ಕೇಳಿದ್ದರು. “ಪ್ರಚಾರ” ಗಿಟ್ಟಿಸಿಕೊಳ್ಳುವ ಸಲುವಾಗಿ ಲಸಿಕೆಯನ್ನು ರಫ್ತು ಮಾಡುತ್ತಿದ್ದೀರಾ ಎಂದು ಪ್ರಧಾನಿಯನ್ನು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದರು.

ಏಪ್ರಿಲ್ 11ರಿಂದ 14ರ ತನಕ ಲಸಿಕೆ ಹಬ್ಬವನ್ನು ಆಯೋಜಿಸುವಂತೆ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದರು. ಲಸಿಕೆ ಕೊರತೆ ಮಧ್ಯೆ ಕೋವಿಡ್- 19 ಪ್ರಕರಣಗಳು ಹೆಚ್ಚುತ್ತಿರುವುದು ಬಹಳ ಗಂಭೀರವಾದ ವಿಚಾರ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಇದೇ ವೇಗದಲ್ಲಿ ಭಾರತದಲ್ಲಿ ಲಸಿಕೆ ಹಾಕುತ್ತಾ ಸಾಗಿದರೆ ಜನಸಂಖ್ಯೆಯ ಶೇ 75ರಷ್ಟು ಮಂದಿಗೆ ಲಸಿಕೆ ಹಾಕುವುದಕ್ಕೆ ವರ್ಷಗಳು ಬೇಕಾಗುತ್ತವೆ. ಇದರಿಂದ ಭಾರತದ ಆರ್ಥಿಕತೆ ಮೇಲೆ ಕೆಟ್ಟ ಪರಿಣಾಮ ಆಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕೊವಿಡ್ ಲಸಿಕೆಗೆ ಹೆಚ್ಚಿದ ಬೇಡಿಕೆ; ಕೊವ್ಯಾಕ್ಸ್ ಮೂಲಕ ಎಲ್ಲ ದೇಶಗಳಿಗೆ ಲಸಿಕೆ ಪೂರೈಕೆ: ವಿಶ್ವ ಆರೋಗ್ಯ ಸಂಸ್ಥೆ

(Covid- 19 situation meeting will be chaired by Congress interim president Sonia Gandhi with Congress-ruled state chief ministers today.)

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ