COVID-19 Updates: ಭಾರತದಲ್ಲಿ ಹೊಸ ಕೊವಿಡ್ ರೂಪಾಂತರಿ ಬಿಎ 2.75 ಪತ್ತೆ; WHO ಮಾಹಿತಿ

BA 2.75 Covid Sub-Variant: ಯುರೋಪ್ ಮತ್ತು ಅಮೆರಿಕಾದಲ್ಲಿ BA.4 ಮತ್ತು BA.5 ಪ್ರಕರಣಗಳು ಕಾಣಿಸಿಕೊಂಡಿವೆ. ಭಾರತದಂತಹ ದೇಶಗಳಲ್ಲಿ BA 2.75ನ ಹೊಸ ಉಪ ವಂಶಾವಳಿಯನ್ನು ಸಹ ಪತ್ತೆಹಚ್ಚಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

COVID-19 Updates: ಭಾರತದಲ್ಲಿ ಹೊಸ ಕೊವಿಡ್ ರೂಪಾಂತರಿ ಬಿಎ 2.75 ಪತ್ತೆ; WHO ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 07, 2022 | 9:47 AM

ನವದೆಹಲಿ: ಭಾರತದಲ್ಲಿ ಕೊವಿಡ್-19 ವೈರಸ್ ಒಮಿಕ್ರಾನ್ ರೂಪಾಂತರದ (Omicron variant) ಹೊಸ ಉಪ ವಂಶಾವಳಿಯಾಗಿರುವ ಬಿಎ 2.75 ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮಾಹಿತಿ ನೀಡಿದೆ. ಕಳೆದ ಎರಡು ವಾರಗಳಲ್ಲಿ ಜಾಗತಿಕವಾಗಿ ವರದಿಯಾದ ಕೊವಿಡ್-19 ಪ್ರಕರಣಗಳು ಸುಮಾರು ಶೇ. 30ರಷ್ಟು ಹೆಚ್ಚಾಗಿದೆ ಎಂದು ಡಬ್ಲುಹೆಚ್​ಓ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಯುರೋಪ್ ಮತ್ತು ಅಮೆರಿಕಾದಲ್ಲಿ BA.4 ಮತ್ತು BA.5 ಪ್ರಕರಣಗಳು ಕಾಣಿಸಿಕೊಂಡಿವೆ. ಭಾರತದಂತಹ ದೇಶಗಳಲ್ಲಿ BA 2.75ನ ಹೊಸ ಉಪ ವಂಶಾವಳಿಯನ್ನು ಸಹ ಪತ್ತೆಹಚ್ಚಲಾಗಿದೆ. ನಾವು ಆ ಬಗ್ಗೆ ಗಮನವಿಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ BA 2.75 ಮೊದಲ ಕೇಸ್ ಪತ್ತೆಯಾದ ನಂತರ ಇನ್ನೂ 10 ದೇಶಗಳಲ್ಲಿ ಈ ಉಪ-ರೂಪಾಂತರಿ ವೈರಸ್ ತಳಿ ಪತ್ತೆಯಾಗಿದೆ.

ಇದನ್ನೂ ಓದಿ: COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ

ಜೂನ್ 27ರಿಂದ ಜುಲೈ 3ರವರೆಗೆ ಜಗತ್ತಿನಾದ್ಯಂತ 4.6 ಮಿಲಿಯನ್ ಕೊವಿಡ್ ಪ್ರಕರಣಗಳು ವರದಿಯಾಗಿವೆ. ಇದು ಹಿಂದಿನ ವಾರದಂತೆಯೇ ಇದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ವಾರದ ಕೊವಿಡ್ ಸೋಂಕಿನಿಂದ ಸಾವಿನ ಸಂಖ್ಯೆ ಶೇ. 12ರಷ್ಟು ಕಡಿಮೆಯಾಗಿದೆ. ಈ ವಾರ 8100ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ.

ಒಟ್ಟು 83 ದೇಶಗಳಲ್ಲಿ ಬಿಎ.5 ತಳಿ ಪತ್ತೆಯಾಗಿದೆ. 73 ದೇಶಗಳಲ್ಲಿ ಪತ್ತೆಯಾಗಿರುವ ಬಿಎ.4 ಜಾಗತಿಕ ಮಟ್ಟದಲ್ಲಿಯೂ ಏರಿಕೆಯಾಗುತ್ತಿದ್ದರೂ ಬಿಎ.5ರಷ್ಟು ಏರಿಕೆ ಪ್ರಮಾಣ ಹೆಚ್ಚಾಗಿಲ್ಲ. ಭೂತಾನ್, ನೇಪಾಳ ಮತ್ತು ಬಾಂಗ್ಲಾದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ಕೇಸುಗಳ ಹೆಚ್ಚಳ ಕಂಡುಬಂದಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ