AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯಲ್ಲಿ ಭಾರತ ಹೊಸ ದಾಖಲೆ; ದೇಶದಲ್ಲಿ 59 ಕೋಟಿ ಡೋಸ್ ಲಸಿಕೆ ವಿತರಣೆ

Covid-19 in India: ಕಳೆದ 24 ತಾಸುಗಳಲ್ಲಿ 61 ಲಕ್ಷ ಡೋಸ್​ಗಿಂತ ಹೆಚ್ಚಿನ ಲಸಿಕೆ ನೀಡಲಾಗಿದೆ. ದೇಶಾದ್ಯಂತ ಇಲ್ಲಿಯವರೆಗೆ 65,52,748 ಆಂದೋಲನಗಳ ಮೂಲಕ 59.55 ಕೋಟಿಗಿಂತ ಹೆಚ್ಚಿನ ಅಂದರೆ 59,55,04,593 ಡೋಸ್ ಲಸಿಕೆ ಹಾಕಲಾಗಿದೆ.

ಕೊರೊನಾ ಲಸಿಕೆಯಲ್ಲಿ ಭಾರತ ಹೊಸ ದಾಖಲೆ; ದೇಶದಲ್ಲಿ 59 ಕೋಟಿ ಡೋಸ್ ಲಸಿಕೆ ವಿತರಣೆ
ಕೊರೊನಾ ಲಸಿಕೆ
TV9 Web
| Edited By: |

Updated on: Aug 25, 2021 | 4:31 PM

Share

ನವದೆಹಲಿ: ಭಾರತದಲ್ಲಿ ಕೊರೊನಾ 3ನೇ ಅಲೆಯ ಭೀತಿ ಹೆಚ್ಚಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದ್ದು, ನಿನ್ನೆಗೆ ಅನ್ವಯವಾಗುವಂತೆ ಲಸಿಕೆ ನೀಡಿಕೆಯ ಪ್ರಮಾಣ 59 ಕೋಟಿ ಡೋಸ್ ದಾಟಿದೆ. ಕಳೆದ 24 ತಾಸುಗಳಲ್ಲಿ 61,90,930 ಡೋಸ್ ಲಸಿಕೆ ನೀಡಲಾಗಿದೆ. ಇಂದು ಬೆಳಗ್ಗೆ 7 ಗಂಟೆಗೆ ಪ್ರಕಟವಾಗಿರುವ ತಾತ್ಕಾಲಿಕ ವರದಿ ಪ್ರಕಾರ, ದೇಶಾದ್ಯಂತ ಇಲ್ಲಿಯವರೆಗೆ 65,52,748 ಆಂದೋಲನಗಳ ಮೂಲಕ 59.55 ಕೋಟಿಗಿಂತ ಹೆಚ್ಚಿನ ಅಂದರೆ 59,55,04,593 ಡೋಸ್ ಲಸಿಕೆ ಹಾಕಲಾಗಿದೆ. ದೇಶಾದ್ಯಂತ ನಡೆಯುತ್ತಿರುವ ಕೋವಿಡ್-19 ಬೃಹತ್ ಲಸಿಕೆ ಅಭಿಯಾನದ ವ್ಯಾಪ್ತಿ ಹೆಚ್ಚಿಸಲು ಮತ್ತು ಈ ಕಾರ್ಯಕ್ರಮದ ಗತಿಗೆ ವೇಗ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ.

ಕಳೆದ 24 ತಾಸುಗಳಲ್ಲಿ 61 ಲಕ್ಷ ಡೋಸ್​ಗಿಂತ ಹೆಚ್ಚಿನ ಲಸಿಕೆ ನೀಡಲಾಗಿದೆ. ಕಳೆದ 24 ತಾಸುಗಳಲ್ಲಿ 37,593 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,22,327ಕ್ಕೆ ಇಳಿಕೆಯಾಗಿದೆ. ಒಟ್ಟು ಪಾಸಿಟಿವ್ ಪ್ರಕರಣಗಳಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ 0.99%ಗೆ ಇಳಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ 2.10%ಗೆ ಇಳಿಕೆಯಾಗಿದೆ. ಸತತ 30 ದಿನಗಳಿಂದ 3% ಮಟ್ಟದಿಂದ ಕೆಳಗೆ ಇಳಿದಿದೆ.

ದೇಶಾದ್ಯಂತ ಕಳೆದ 24 ತಾಸುಗಳಲ್ಲಿ 34,169 ರೋಗಿಗಳು ಗುಣಮುಖರಾಗಿದ್ದು, ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯವರೆಗೆ ಒಟ್ಟು 3,17,54,281 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರ ಪರಿಣಾಮವಾಗಿ, ಭಾರತದ ಚೇತರಿಕೆ ದರವೀಗ 97.67%ಗೆ ಸುಧಾರಣೆ ಕಂಡಿದೆ. ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರಕಾರಗಳ ಸುಸ್ಥಿರ ಮತ್ತು ಜಂಟಿ ಸಹಭಾಗಿತ್ವದ ಪ್ರಯತ್ನಗಳ ಫಲವಾಗಿ, ದೈನಂದಿನ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಸತತ 59 ದಿನಗಳಿಂದ 50,000 ಮಟ್ಟದಿಂದ ಕೆಳಗೆ ಮುಂದುವರಿಯುತ್ತಿದೆ.

ದೇಶಾದ್ಯಂತ ಗಂಟಲು ಮತ್ತು ಮೂಗಿನ ದ್ರವ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದ್ದು, ಕಳೆದ 24 ತಾಸುಗಳಲ್ಲೇ 17,92,755 ಪರೀಕ್ಷೆಗಳನ್ನು ನಡೆಸಲಾಗಿದೆ. ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದಿಂದ ಇಲ್ಲಿಯ ತನಕ 51.11 ಕೋಟಿಗಿಂತ ಹಚ್ಚಿನ ಅಂದರೆ 51,11,84,547 ಪರೀಕ್ಷೆಗಳನ್ನು ನಡೆಸಲಾಗಿದೆ. ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿರುವ ಪರಿಣಾಮ, ವಾರದ ಪಾಸಿಟಿವಿಟಿ ದರ ಇದೀಗ 1.92%ಗೆ ಇಳಿಕೆ ಕಂಡಿದೆ. ಸತತ 61 ದಿನಗಳಿಂದ 3% ಮಟ್ಟದಿಂದ ಕೆಳಗಿದೆ. ದೈನಂದಿನ ಪಾಸಿಟಿವಿಟಿ ದರ ಪ್ರಸ್ತುತ 2.10%ಗೆ ಇಳಿಕೆ ಕಂಡಿದೆ. ಸತತ 30 ದಿನಗಳಿಂದ ಅದು 3% ಮಟ್ಟದಿಂದ ಕೆಳಗಿದ್ದು, ನಿರಂತರ 79 ದಿನಗಳಿಂದ 5% ಮಟ್ಟದ ಕೆಳಗೆ ಮುಂದುವರಿದಿದೆ.

ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ 58.07 ಕೋಟಿ ಗೂ ಹೆಚ್ಚು ಕೊರೋನಾ ಲಸಿಕೆ ಪೂರೈಕೆಯಾಗಿದೆ. ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಬಳಿ ಬಳಕೆಯಾಗದ ಮತ್ತು ಬಾಕಿ 3.62 ಕೋಟಿಗೂ ಹೆಚ್ಚು ಲಸಿಕಾ ಡೋಸ್​ಗಳು ಲಭ್ಯವಾಗಿದೆ. ದೇಶಾದ್ಯಂತ ಕೋವಿಡ್ -19 ಲಸಿಕಾ ಅಭಿಯಾನದ ವೇಗವರ್ಧನೆ ಮತ್ತು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ. 2021ರ ಜೂನ್ 21ರಿಂದ ಕೋವಿಡ್-19ರ ಹೊಸ ಸಾರ್ವತ್ರೀಕರಣದ ಲಸಿಕಾ ಅಭಿಯಾನ ಅರಂಭವಾಗಿದೆ. ಹೆಚ್ಚು ಲಸಿಕೆಗಳ ಲಭ್ಯತೆಯ ಮೂಲಕ ಲಸಿಕಾ ಅಭಿಯಾನವನ್ನು ತ್ವರಿತಗೊಳಿಸಲಾಗಿದ್ದು, ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಮುಂದಾಗಿಯೇ ಲಸಿಕೆ ಲಭ್ಯತೆ ಗೋಚರವಾಗುವಂತೆ ವ್ಯವಸ್ಥೆ ಮಾಡಿರುವ ಕಾರಣ ಉತ್ತಮ ಯೋಜನೆ ರೂಪಿಸಲು ಮತ್ತು ಲಸಿಕೆ ಪೂರೈಕೆ ಸರಪಳಿಯನ್ನು ಸುಗಮಗೊಳಿಸಲು ಸಾಧ್ಯವಾಗಿದೆ.

ದೇಶಾದ್ಯಂತ ಲಸಿಕಾ ಅಭಿಯಾನದಡಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಭಾರತ ಸರ್ಕಾರ ಉಚಿತವಾಗಿ ಲಸಿಕೆ ಒದಗಿಸುವ ಮೂಲಕ ಬೆಂಬಲ ನೀಡುತ್ತಿದೆ. ಕೋವಿಡ್-19 ಹೊಸ ಸಾರ್ವತ್ರೀಕರಣದ ಲಸಿಕಾ ಅಭಿಯಾನದಡಿ ದೇಶದಲ್ಲಿ ಲಸಿಕೆ ಉತ್ಪಾದಕರು ಉತ್ಪಾದಿಸುವ ಶೇ. 75% [ಉಚಿತವಾಗಿ] ಲಸಿಕೆಯನ್ನು ಕೇಂದ್ರ ಸರ್ಕಾರ ಖರೀದಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸುತ್ತಿದೆ. ದೇಶಾದ್ಯಂತ ನಡೆಯುತ್ತಿರುವ ಬೃಹತ್ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಇದುವರೆಗೆ 59.55 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ.

ಇದನ್ನೂ ಓದಿ: Covid 22: ಕೊವಿಡ್​ 19 ಹತೋಟಿಗೆ ಬರುವ ಮುನ್ನವೇ ಶುರುವಾಯ್ತು ಕೊವಿಡ್​ 22 ರ ಆತಂಕ; ದಯವಿಟ್ಟು ನಿರ್ಲಕ್ಷಿಸಬೇಡಿ ಎಂದ ತಜ್ಞರು

Covid Vaccine: 12 ವರ್ಷ ಮೇಲ್ಪಟ್ಟವರಿಗೆ ಶೀಘ್ರದಲ್ಲೇ ಕೊವಿಡ್ ಲಸಿಕೆ; ಆರೋಗ್ಯ ಸಮಸ್ಯೆ ಇರುವ ಮಕ್ಕಳಿಗೆ ಮೊದಲ ಆದ್ಯತೆ

(Covid-19 Vaccination India creates New Milestones with Administered over 59 Crore doses of Coronavirus Vaccine)

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ