AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಂಟ್​ಲೈನ್​ ವಾರಿಯರ್ಸ್​ ಅಲ್ಲದಿದ್ದರೂ ಕೊವಿಡ್​ ಲಸಿಕೆಗೆ ಹೆಸರು ನೋಂದಣಿ; ಪ್ರಕ್ರಿಯೆಯನ್ನೇ ತಡೆಹಿಡಿಯಲು ರಾಜ್ಯಸರ್ಕಾರಗಳಿಗೆ ಸೂಚನೆ

ಕೊವಿಡ್ ಲಸಿಕೆ ಪಡೆಯಲು ಹೆಸರು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ. ಇದರಿಂದಾಗಿ ಸದ್ಯ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್​ಲೈನ್​ ವಾರಿಯರ್ಸ್​ಗಳಿಗೂ ಲಸಿಕೆ ಪಡೆಯಲು ಅವಕಾಶ ಸಿಗುವುದಿಲ್ಲ ಎನ್ನಲಾಗುತ್ತಿದೆ.

ಫ್ರಂಟ್​ಲೈನ್​ ವಾರಿಯರ್ಸ್​ ಅಲ್ಲದಿದ್ದರೂ ಕೊವಿಡ್​ ಲಸಿಕೆಗೆ ಹೆಸರು ನೋಂದಣಿ; ಪ್ರಕ್ರಿಯೆಯನ್ನೇ ತಡೆಹಿಡಿಯಲು ರಾಜ್ಯಸರ್ಕಾರಗಳಿಗೆ ಸೂಚನೆ
ಕೊರೊನಾ ಲಸಿಕೆ
Skanda
| Edited By: |

Updated on: Apr 04, 2021 | 8:17 AM

Share

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಆತಂಕ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಹೇಗಾದರೂ ಸರಿ ಮತ್ತೊಮ್ಮೆ ಕೊರೊನಾ ಹೊಡೆತಕ್ಕೆ ಸಿಲುಕಲೇಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸತೊಡಗಿವೆ. ಏತನ್ಮಧ್ಯೆ ಕೊರೊನಾ ಲಸಿಕೆ ವಿತರಣೆಯನ್ನೂ ಹೆಚ್ಚಿಸಲು ನಿರ್ಧರಿಸಿವೆ. ಆದರೆ, ಸದ್ಯ ನಡೆದ ಬೆಳವಣಿಗೆಗಳಿಂದ ಕೊರೊನಾ ಲಸಿಕೆ ಪಡೆಯಲು ಹೆಸರು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್‌ಗೆ ನಿರ್ಬಂಧ ವಿಧಿಸಲಾಗಿದೆ.

ಕೊವಿಡ್ ಲಸಿಕೆ ಪಡೆಯಲು ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್‌ ಹೆಸರು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ. ಇದರಿಂದಾಗಿ ಸದ್ಯ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್​ಲೈನ್​ ವಾರಿಯರ್ಸ್​ಗಳಿಗೆ ಲಸಿಕೆ ಪಡೆಯಲು ಅವಕಾಶ ಸಿಗುವುದಿಲ್ಲ ಎನ್ನಲಾಗುತ್ತಿದೆ. ಫ್ರಂಟ್​ಲೈನ್​ ವಾರಿಯರ್ಸ್​ ಹೆಸರಲ್ಲಿ ಬೇರೆಯವರು ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದ ಕಾರಣ ಪ್ರಕ್ರಿಯೆಯನ್ನು ತಡೆಯಲಾಗಿದೆ ಎಂಬ ಮಾಹಿತಿ ಲಭಿಸಿದೆ.

ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್ ಹೆಸರಿನಲ್ಲಿ ಜನರು ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುತ್ತಿದ್ದ ಪರಿಣಾಮ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಬಂದಿರುವ ಸೂಚನೆಯ ಅನುಸಾರ ಮುಂದಿನ ತೀರ್ಮಾನ ಕೈಗೊಳ್ಳುವ ತನಕವೂ ಲಸಿಕೆಗೆ ಹೆಸರು ನೋಂದಣಿ ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೊರೊನಾ ತಡೆಗೆ ದೆಹಲಿಯಲ್ಲಿ ನಡೆಯಿತು ಧನ್ವಂತರಿ ಮಹಾಯಾಗ! 

ವ್ಯಾಕ್ಸಿನ್ ವಿಚಾರದಲ್ಲಿ ಸರ್ಕಾರದ ಲೆಕ್ಕಾಚಾರ ಉಲ್ಟಾ.. ಹೆಲ್ತ್ ವಾರಿಯರ್ಸ್‌ಗೆ ಬಂದ ವ್ಯಾಕ್ಸಿನ್ ಫ್ರಂಟ್‌ಲೈನ್ ವಾರಿಯರ್ಸ್‌ಗೆ

(Covid 19 Vaccine name registration to be stopped as per Health ministry order)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!