ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಆತಂಕ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಹೇಗಾದರೂ ಸರಿ ಮತ್ತೊಮ್ಮೆ ಕೊರೊನಾ ಹೊಡೆತಕ್ಕೆ ಸಿಲುಕಲೇಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸತೊಡಗಿವೆ. ಏತನ್ಮಧ್ಯೆ ಕೊರೊನಾ ಲಸಿಕೆ ವಿತರಣೆಯನ್ನೂ ಹೆಚ್ಚಿಸಲು ನಿರ್ಧರಿಸಿವೆ. ಆದರೆ, ಸದ್ಯ ನಡೆದ ಬೆಳವಣಿಗೆಗಳಿಂದ ಕೊರೊನಾ ಲಸಿಕೆ ಪಡೆಯಲು ಹೆಸರು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಗೆ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್‌ಗೆ ನಿರ್ಬಂಧ ವಿಧಿಸಲಾಗಿದೆ.
ಕೊವಿಡ್ ಲಸಿಕೆ ಪಡೆಯಲು ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್ ಹೆಸರು ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ಬಂದಿದೆ. ಇದರಿಂದಾಗಿ ಸದ್ಯ ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್ಗಳಿಗೆ ಲಸಿಕೆ ಪಡೆಯಲು ಅವಕಾಶ ಸಿಗುವುದಿಲ್ಲ ಎನ್ನಲಾಗುತ್ತಿದೆ. ಫ್ರಂಟ್‌ಲೈನ್ ವಾರಿಯರ್ಸ್ ಹೆಸರಲ್ಲಿ ಬೇರೆಯವರು ಹೆಸರು ನೋಂದಣಿ ಮಾಡಿಕೊಳ್ಳುತ್ತಿದ್ದ ಕಾರಣ ಪ್ರಕ್ರಿಯೆಯನ್ನು ತಡೆಯಲಾಗಿದೆ ಎಂಬ ಮಾಹಿತಿ ಲಭಿಸಿದೆ.
ಆರೋಗ್ಯ ಕಾರ್ಯಕರ್ತರು ಹಾಗೂ ಫ್ರಂಟ್‌ಲೈನ್ ವಾರಿಯರ್ಸ್ ಹೆಸರಿನಲ್ಲಿ ಜನರು ಲಸಿಕೆ ಪಡೆಯಲು ನೋಂದಣಿ ಮಾಡಿಕೊಳ್ಳುತ್ತಿದ್ದ ಪರಿಣಾಮ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಆರೋಗ್ಯ, ಕುಟುಂಬ ಕಲ್ಯಾಣ ಸಚಿವಾಲಯದಿಂದ ರಾಜ್ಯ ಸರ್ಕಾರಗಳಿಗೆ ಬಂದಿರುವ ಸೂಚನೆಯ ಅನುಸಾರ ಮುಂದಿನ ತೀರ್ಮಾನ ಕೈಗೊಳ್ಳುವ ತನಕವೂ ಲಸಿಕೆಗೆ ಹೆಸರು ನೋಂದಣಿ ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ.
ಇದನ್ನೂ ಓದಿ:
ಕೊರೊನಾ ತಡೆಗೆ ದೆಹಲಿಯಲ್ಲಿ ನಡೆಯಿತು ಧನ್ವಂತರಿ ಮಹಾಯಾಗ!
(Covid 19 Vaccine name registration to be stopped as per Health ministry order)