Covid 3rd Wave: ಹಬ್ಬಗಳಿಂದ 2 ವಾರ ಮೊದಲೇ ಭಾರತಕ್ಕೆ ಅಪ್ಪಳಿಸುತ್ತಾ ಕೊವಿಡ್ 3ನೇ ಅಲೆ?

Coronavirus Updates: ಹಬ್ಬಗಳಿಂದಾಗಿ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ರಜೆಯನ್ನು ಕಳೆಯಲು ಜನರು ರೆಸಾರ್ಟ್, ಹೋಂ ಸ್ಟೇ, ಬೇರೆ ಬೇರೆ ರಾಜ್ಯಗಳಿಗೆ ತೆರಳುವುದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗುತ್ತದೆ.

Covid 3rd Wave: ಹಬ್ಬಗಳಿಂದ 2 ವಾರ ಮೊದಲೇ ಭಾರತಕ್ಕೆ ಅಪ್ಪಳಿಸುತ್ತಾ ಕೊವಿಡ್ 3ನೇ ಅಲೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 04, 2021 | 12:03 PM

ನವದೆಹಲಿ: ಇನ್ನೇನು ಸಾಲು ಸಾಲು ಹಬ್ಬಗಳು ಬರಲಾರಂಭಿಸಿವೆ. ಇನ್ನೊಂದೆಡೆ ಕೊರೊನಾ ಮೂರನೇ ಅಲೆಯ  (Coronavirus 3rd Wave) ಭೀತಿ ಹೆಚ್ಚಾಗಿದೆ. ನವರಾತ್ರಿ (Navaratri 2021), ಈದ್ ಮಿಲಾದ್, ದೀಪಾವಳಿ (Diwali 2021) ಹೀಗೆ ಸಾಲು ಸಾಲು ಹಬ್ಬಗಳಿರುವುದರಿಂದ ಕೊವಿಡ್ 3ನೇ ಅಲೆ (Covid-19 Third Wave) 2 ವಾರ ಮುಂಚಿತವಾಗಿಯೇ ಭಾರತಕ್ಕೆ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಐಸಿಎಂಆರ್ (ICMR) ತಿಳಿಸಿದೆ. ಹೀಗಾಗಿ, ಹಬ್ಬಗಳ ಹಿನ್ನೆಲೆಯಲ್ಲಿ ರಜೆಗಳಿರುವುದರಿಂದ ಸರ್ಕಾರ ಅನುಸರಿಸಬೇಕಾದ ಕೆಲವು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಐಸಿಎಂಆರ್ ಸಲಹೆ ನೀಡಿದೆ.

ಹಬ್ಬಗಳಿಂದಾಗಿ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ರಜೆಯನ್ನು ಕಳೆಯಲು ಜನರು ರೆಸಾರ್ಟ್, ಹೋಂ ಸ್ಟೇ, ಬೇರೆ ಬೇರೆ ರಾಜ್ಯಗಳಿಗೆ ತೆರಳುವುದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗುತ್ತದೆ. ಭಾರತಕ್ಕೆ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಕೊರೊನಾ 3ನೇ ಅಲೆ ಶುರುವಾಗಲಿದೆ ಎನ್ನಲಾಗಿತ್ತು. ಆದರೆ, ಇದೀಗ 2 ವಾರ ಮುಂಚೆತವಾಗಿಯೇ 3ನೇ ಅಲೆ ಅಪ್ಪಳಿಸುವ ಎಲ್ಲ ಸಾಧ್ಯತೆಗಳು ಕಾಣುತ್ತಿವೆ.

ಭಾರತಕ್ಕೆ ಶೀಘ್ರದಲ್ಲೇ ಕೊವಿಡ್ 3ನೇ ಅಲೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಯಾವ ರೀತಿಯಲ್ಲಿ ಅಪಾಯ ಎದುರಾಗುತ್ತದೆ ಎಂದು ಊಹಿಸುವುದು ಕಷ್ಟ. ಹೀಗಾಗಿ, ನಮ್ಮ ಎಚ್ಚರಿಕೆಯಲ್ಲಿ ನಾವಿರುವುದು ಅಗತ್ಯ. ಹೀಗಾಗಿ, ಆಯಾ ರಾಜ್ಯ ಸರ್ಕಾರಗಳು, ಸ್ಥಳೀಯ ಅಧಿಕಾರಿಗಳು ಹಾಗೂ ಸ್ಥಳೀಯರು ಪ್ರವಾಸಿಗರ ಬಗ್ಗೆ ನಿಗಾ ಇಡಬೇಕು. ಹಬ್ಬಗಳಿಂದಾಗಿ ತುಸು ಬೇಗವೇ ಕೊರೊನಾ ಮೂರನೇ ಅಲೆ ಭಾರತವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಈಗಾಗಲೇ ಅಧ್ಯಯನ ಹೇಳಿದೆ. ಸಾಲು ಸಾಲು ರಜೆಗಳಿರುವುದರಿಂದ ಕೊರೊನಾ ಕೇಸುಗಳು ಹೆಚ್ಚಾಗುವ ಸಾಧ್ಯತೆ ಶೇ. 103ರಷ್ಟಿದೆ. ಇನ್ನು 4 ವಾರ ಭಾರತದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಹೀಗಾಗಿ, ರಜೆಗೆ ಪ್ರವಾಸಕ್ಕೆ ತೆರಳುವವರು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಅಧ್ಯಯನ ತಿಳಿಸಿದೆ.

ಬೇರೆ ರಾಜ್ಯ ಮತ್ತು ದೇಶಗಳಿಂದ ಮತ್ತೊಂದೆಡೆ ತೆರಳಿವವರು ತಮ್ಮ ಸಂಪರ್ಕ ವಿಳಾಸ ಮತ್ತು ದೂರವಾಣಿ ನಂಬರ್ ಅನ್ನು ರಿಜಿಸ್ಟರ್ ಮಾಡಿಸಿಕೊಳ್ಳಬೇಕು. ಇದರಿಂದ ಅವರನ್ನು ಟ್ರೇಸ್ ಮಾಡುವುದು ಸುಲಭವಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಭಾರತ ಮತ್ತೊಂದು ಅಪಾಯಕಾರಿ ಮಟ್ಟವೇರುತ್ತದೆ. ಪ್ರವಾಸಿ ತಾಣಗಳಲ್ಲಿ ಆಯಾ ಸರ್ಕಾರಗಳು ಕಟ್ಟುನಿಟ್ಟಿನ ಎಚ್ಚರ ವಹಿಸಬೇಕು ಎಂದು ಐಸಿಎಂಆರ್ ಸಲಹೆ ನೀಡಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 664 ಜನರಿಗೆ ಕೊರೊನಾ ದೃಢ; 8 ಮಂದಿ ಸಾವು

Corona 3rd Wave: ಕೊರೊನಾ 3ನೇ ಅಲೆಯ ಆತಂಕ, ಆಗಸ್ಟ್ 18ರಿಂದ ಬೆಂಗಳೂರಿನಲ್ಲಿ ಹೊಸ ರೂಲ್ಸ್ ಸಾಧ್ಯತೆ

Published On - 12:03 pm, Mon, 4 October 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ