ಭಾರತದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯರಿಂದ ತುರ್ತು ಸಭೆ
ದೇಶದಲ್ಲಿ ಕೊರೊನಾ(Corona) ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಭೆ ನಡೆಸಲಿದ್ದಾರೆ. ಲಸಿಕಾಕರಣದ ಕುರಿತು ಜೂನ್ 13 ರಂದು ಮನ್ಸುಖ್ ಮಂಡವೀಯಾ ಅವರು ವಿಡಿಯೋ ಕಾನ್ಫರೆನ್ಸ್ ನಡೆಸಿ ಮನೆಮನೆಗೂ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
ನವದೆಹಲಿ: ದೇಶದಲ್ಲಿ ಕೊರೊನಾ(Corona) ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಭೆ ನಡೆಸಲಿದ್ದಾರೆ. ಲಸಿಕಾಕರಣದ ಕುರಿತು ಜೂನ್ 13 ರಂದು ಮನ್ಸುಖ್ ಮಂಡವೀಯಾ ಅವರು ವಿಡಿಯೋ ಕಾನ್ಫರೆನ್ಸ್ ನಡೆಸಿ ಮನೆಮನೆಗೂ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಕೊರೊನಾ ಸೋಂಕು ಇನ್ನೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸಭೆ, ಸಮಾರಂಭಗಳಲ್ಲಿ ಭಾಗವಹಿಸದೇ ಇರುವುದರಿಂದ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಬಹುದಾಗಿದೆ. ಕೆಲವು ರಾಜ್ಯ, ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣವನ್ನು ಕಡಿಮೆಗೊಳಿಸಲಾಗಿದ್ದು, ಕೋವಿಡ್ ಪರೀಕ್ಷೆಗೆ ವೇಗ ನೀಡುವಂತೆ ಮಾಂಡವೀಯ ತಿಳಿಸಿದ್ದಾರೆ.
ದೇಶದಲ್ಲಿ ಕೊರೊನಾ (Corona)ಪ್ರಕರಣಗಳ ಸಂಖ್ಯೆ ದಿನೇ ದಿನೆ ಉಲ್ಬಣಗೊಳ್ಳುತ್ತಿದ್ದು, ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 38 ಮಂದಿ ಮೃತಪಟ್ಟಿರುವ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 83,990 ಇದ್ದು ಪಾಸಿಟಿವಿಟಿ ದರ ಶೇ.2.03ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 14,91,941 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,96,62,11,973 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.
ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 524941ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 10,972ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42736027ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 3260 ಪ್ರಕರಣಗಳು ದಾಖಲಾಗಿವೆ. 24639 ಸಕ್ರಿಯ ಪ್ರಕರಣಗಳಿವೆ. ಮುಂಬೈನಲ್ಲಿ 13,501 ಪ್ರಕರಣಗಳಿವೆ. ಥಾಣೆಯಲ್ಲಿ 5621 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನದಲ್ಲಿ ಮುಂಬೈನಲ್ಲಿ 1648 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು ಮೂವರು ಮೃತಪಟ್ಟಿದ್ದಾರೆ. ಇದುವರೆಗೆ 79,45,022 ಪ್ರಕರಣಗಳಿದ್ದು, 1,47,892 ಮಂದಿ ಸಾವನ್ನಪ್ಪಿದ್ದಾರೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:07 am, Thu, 23 June 22