Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಮದ್ರಾಸ್​ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು: ವಿದ್ಯಾರ್ಥಿಗಳಿಗೆ ಇನ್ನು ಕೊರೊನಾ ಪರೀಕ್ಷೆ ಕಡ್ಡಾಯ

ಆಡುಗೆಯವರಿಂದಲೇ ಸೋಂಕು ಹರಡಿರಬಹುದಾದ ಸಾಧ್ಯತೆ ಹೆಚ್ಚಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದ್ದರಿಂದ ಐಐಟಿ ಸಿಬ್ಬಂದಿ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲು ಪ್ರಾರಂಭಿಸಿದ್ದಾರೆ.

ಐಐಟಿ ಮದ್ರಾಸ್​ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು: ವಿದ್ಯಾರ್ಥಿಗಳಿಗೆ ಇನ್ನು ಕೊರೊನಾ ಪರೀಕ್ಷೆ ಕಡ್ಡಾಯ
IIT ಮದ್ರಾಸ್​
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 16, 2020 | 6:35 PM

ಚೆನ್ನೈ: ಐಐಟಿಯ ಮತ್ತೆ ಎಂಟು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ತನಕ ಒಟ್ಟು ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ 191ಕ್ಕೆ ಏರಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಸರ್ಕಾರದ ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್, ‘ಈ ಹಿಂದೆ ಕೊರೊನಾ ದೃಢಪಟ್ಟಿದ್ದ ಅಣ್ಣಾ ವಿಶ್ವವಿದ್ಯಾಲಯದ ಆರು ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ಆದರೆ ವಿದ್ಯಾರ್ಥಿನಿಲಯಗಳಲ್ಲಿ ಸೋಂಕು ಹರಡುವ ವೇಗ ಹೆಚ್ಚಾಗಿರುವ ಕಾರಣ, ಐಐಟಿಯ ಎಲ್ಲಾ ವಿಭಾಗಗಳು, ಪ್ರಯೋಗಾಲಯಗಳು, ಗ್ರಂಥಾಲಯಗಳಿಗೆ ರಜೆ ನೀಡಲಾಗಿದೆ.’ ಎಂದು ತಿಳಿಸಿದ್ದಾರೆ.

ತಮಿಳುನಾಡು ಸರ್ಕಾರ ಈಗಾಗಲೇ 1,000 ವಿದ್ಯಾರ್ಥಿಗಳು ಮತ್ತು ಅಡುಗೆಯವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಆಡುಗೆಯವರಿಂದಲೇ ಸೋಂಕು ಹರಡಿರಬಹುದಾದ ಸಾಧ್ಯತೆ ಹೆಚ್ಚಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದ್ದರಿಂದ ಐಐಟಿ ಸಿಬ್ಬಂದಿ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲು ಪ್ರಾರಂಭಿಸಿದ್ದಾರೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಅಧ್ಯಾಪಕರು-ವಿದ್ಯಾರ್ಥಿಗಳು ಮನೆಯಿಂದಲೇ ಆನ್​ಲೈನ್​ ಮೂಲಕ ತರಗತಿಗಳಲ್ಲಿ ಪಾಲ್ಗೊಳ್ಳಬೇಕೆಂದು ಐಐಟಿ ಸಲಹೆ ನೀಡಿದೆ.

‘ಸಾಂಕ್ರಾಮಿಕ ರೋಗತಜ್ಞರು ನೀಡಿರುವ ಪ್ರಾಥಮಿಕ ವರದಿಯಂತೆ, 778 ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯದಲ್ಲಿದ್ದು ಅವರೆಲ್ಲರೂ ಒಂದೇ ಭೋಜನಾಲಯದಲ್ಲಿ ಊಟ ಮಾಡುತ್ತಿದ್ದರು. ಅಲ್ಲಿಯ 16 ಜನರಿಗೆ ಸೋಂಕು ದೃಢಪಟ್ಟಿದೆ. ಬಹುಶಃ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿರುವುದಕ್ಕೆ ಇದೇ ಕಾರಣ ಇರಬಹುದು’ ಎಂದು ರಾಧಾಕೃಷ್ಣನ್ ಅಭಿಪ್ರಾಯಿಸಿದ್ದಾರೆ.

ಅಲ್ಲದೆ ಉಳಿದ ಕ್ಯಾಂಪಸ್ಸುಗಳ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಿಶೇಷವಾಗಿ ಗಮನಿಸಲಾಗುತ್ತಿದೆ. ಒಂದೇ ಭೋಜನಾಲಯದಲ್ಲಿ ಊಟ ಮಾಡುತ್ತಿದ್ದವರಿಗೆ ಕಡ್ಡಾಯವಾಗಿ ಆರ್​ಟಿ-ಪಿಸಿಆರ್ ಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ. ಐಐಟಿಯಲ್ಲಿ ಜಾರಿ ಮಾಡಿರುವಂತೆ ಪೊಟ್ಟಣಗಳ ಮೂಲಕ ವಿದ್ಯಾರ್ಥಿಗಳಿಗೆ ಆಹಾರ ವಿತರಿಸುವ ವ್ಯವಸ್ಥೆಯನ್ನು ಉಳಿದೆಡೆಯೂ ಜಾರಿ ಮಾಡಬೇಕು ಎಂದು ಉನ್ನತ ಅಧಿಕಾರಿಗಳು ಸಲಹೆ ನೀಡಿದ್ದಾರೆ.