ಕೊವಿಡ್ ಪಿಡುಗು ಆರಂಭವಾದ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಶೂನ್ಯ ಕೊವಿಡ್

ದೆಹಲಿಯಲ್ಲಿ ಪ್ರಸ್ತುತ 10 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣವು 0.00 ಆಗಿದೆ ಎಂದು ಬುಲೆಟಿನ್ ಹೇಳಿದೆ.

ಕೊವಿಡ್ ಪಿಡುಗು ಆರಂಭವಾದ ನಂತರ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಶೂನ್ಯ ಕೊವಿಡ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 17, 2023 | 7:58 AM

ದೆಹಲಿ: ಕಳೆದ 24 ಗಂಟೆಗಳಲ್ಲಿ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಒಂದೂ ಹೊಸ ಕೊವಿಡ್-19 (Covid 19) ಪ್ರಕರಣಗಳು ವರದಿಯಾಗಿಲ್ಲ. ಕಳೆದ ಮಾರ್ಚ್ 2020ರಿಂದ ಪ್ರತಿದಿನ ವರದಿಯಾಗುತ್ತಿದ್ದ ಪ್ರಕರಣಗಳು ಇದೀಗ ಶೂನ್ಯಕ್ಕಿಳಿದಿರುವುದು ಆರೋಗ್ಯ ಇಲಾಖೆ (Health Department) ಅಧಿಕಾರಿಗಳಲ್ಲಿ ಮತ್ತು ಜನಸಾಮಾನ್ಯರಿಗೆ ನೆಮ್ಮದಿ ಮೂಡಿಸಿದೆ. ದೆಹಲಿ ಆರೋಗ್ಯ ಇಲಾಖೆಯು ಸೋಮವಾರ ಹೊರಡಿಸಿರುವ ಆರೋಗ್ಯ ಮಾಹಿತಿಯಲ್ಲಿ (Health Bulletin) ಈ ಅಂಶ ಉಲ್ಲೇಖವಾಗಿದೆ.

ದೆಹಲಿಯಲ್ಲಿ ಪ್ರಸ್ತುತ 10 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣವು 0.00 ಆಗಿದೆ ಎಂದು ಬುಲೆಟಿನ್ ಹೇಳಿದೆ. ಬುಲೆಟಿನ್ ಪ್ರಕಾರ 9 ಕೊವಿಡ್ ರೋಗಿಗಳು ಕಳೆದ 24 ಗಂಟೆಗಳಲ್ಲಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಚೇತರಿಸಿಕೊಂಡವರ ರೋಗಿಗಳ ಸಂಖ್ಯೆಯು 19,80,781ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್​ನಿಂದ ಯಾರೊಬ್ಬರೂ ಮೃತಪಟ್ಟಿಲ್ಲ. ದೆಹಲಿಯಲ್ಲಿ ಈವರೆಗೆ ಕೊವಿಡ್​ನಿಂದ 26,522 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಪ್ರಸ್ತುತ ನಡೆಯುತ್ತಿರುವ ಲಸಿಕಾಕರಣ ಅಭಿಯಾನವು ಯಶಸ್ವಿಯಾಗಿದೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊವಿಡ್ ಲಸಿಕೆಗಳನ್ನು ಈವರೆಗೆ ಜನರಿಗೆ ಈ ಪೈಕಿ 15 ಮಂದಿ ಮೊದಲ ಡೋಸ್, 32 ಮಂದಿ 2ನೇ ಡೋಸ್ ಮತ್ತು 103 ಮಂದಿ 3ನೇ (ಮುಂಜಾಗ್ರತಾ) ಡೋಸ್ ಪಡೆದುಕೊಂಡಿದ್ದಾರೆ. ದೆಹಲಿಯಲ್ಲಿ ಈವರೆಗೆ 3,73,70,636 (3.73 ಕೋಟಿ) ಮಂದಿಗೆ ಲಸಿಕೆ ನೀಡಿದಂತೆ ಆಗಿದೆ.

ಕಳೆದ 24 ಗಂಟೆಗಳಲ್ಲಿ 931 ಕೊವಿಟ್ ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಒಟ್ಟು ತಪಾಸಣೆ ಮಾಡಿದ ಕೊವಿಡ್ ಮಾದರಿಗಳ ಸಂಖ್ಯೆಯು 4,06,50,119 ಗೆ (4.06 ಕೋಟಿ) ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯನ್ನು ಈವರೆಗೆ ಮೂರು ಕೊವಿಡ್ ಅಲೆಗಳು ಬಾಧಿಸಿವೆ. ಈ ಪೈಕಿ ಏಪ್ರಿಲ್-ಮೇ 2021ರಲ್ಲಿ ಕಾಣಿಸಿಕೊಂಡಿದ್ದ 2ನೇ ಕೊವಿಡ್ ಅಲೆಯು ಮಾರಣಾಂತಿಕ ಎಂದು ವಿಶ್ಲೇಷಿಸಲಾಗಿತ್ತು. ಈ ಸಂದರ್ಭದಲ್ಲಿ ಕೊರೊನಾ ವೈರಾಣುಗಳ ಡೆಲ್ಟಾ ರೂಪಾಂತರಿ ಜನರನ್ನು ಬಾಧಿಸಿತ್ತು.

ಇದನ್ನೂ ಓದಿ: ಬೆಂಗಳೂರಿಗೆ ಸದ್ಯಕ್ಕೆ ಕೊರೊನಾ ಆತಂಕ ಇಲ್ಲ: ನೆಮ್ಮದಿಯ ಫಲಿತಾಂಶ ಕೊಟ್ಟ ಒಳಚರಂಡಿ ನೀರಿನ ಮಾದರಿ ಪರಿಶೀಲನೆ

Published On - 7:58 am, Tue, 17 January 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್