ದೇಶದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ.12.45ಕ್ಕೆ ಕುಸಿತ: ಲವ್ ಅಗರ್ವಾಲ್

ಬ್ಲ್ಯಾಕ್ ಫಂಗಸ್ ಸೋಂಕಿನ ಚಿಕಿತ್ಸೆಯಲ್ಲಿ ಬಳಸುವ ಅಂಫೋಟೆರಿಸಿನ್ ಬಿ ಡ್ರಗ್ಸ್ ಉತ್ಪಾದಿಸುವ ಕಂಪನಿಗಳು ತಮ್ಮ ಉತ್ಪಾದನೆಯನ್ನು ಹೆಚ್ಚಿಸುತ್ತಿವೆ. ಅಂಪೋಟೆರಿಸಿನ್ ಬಿ ಡ್ರಗ್ಸ್ ಲಸಿಕೆಯನ್ನು ಉತ್ಪಾದಿಸಲು ಐದು ಹೊಸ ಕಂಪನಿಗಳಿಗೆ ಅನುಮತಿ ನೀಡಲಾಗಿದೆ.

ದೇಶದಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ.12.45ಕ್ಕೆ ಕುಸಿತ: ಲವ್ ಅಗರ್ವಾಲ್
ಲವ್ ಅಗರ್ವಾಲ್
Follow us
guruganesh bhat
|

Updated on:May 22, 2021 | 6:02 PM

ದೆಹಲಿ: ದೇಶದಲ್ಲಿ ಮೇ 10ರಂದು ಶೇ.24.8ರಷ್ಟಿದ್ದ ಪಾಸಿಟಿವಿಟಿ ದರ ಮೇ 22ರವರೆಗೆ ಶೇ.12.45ರಷ್ಟು ಕುಸಿದಿದೆ ಎಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್​ ತಿಳಿಸಿದರು. ದೇಶದ‌ 382 ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಈಗಳು ಶೇ.10ಕ್ಕಿಂತ ಹೆಚ್ಚಿದೆ. 8 ರಾಜ್ಯಗಳಲ್ಲಿ ಲಕ್ಷಕ್ಕಿಂತ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳಿವೆ. ಈ ರಾಜ್ಯಗಳ ಕುರಿತು ಹೆಚ್ಚಿನ ಮುಂಜಾಗೃತೆ ವಹಿಸಲಾಗಿದೆ ಎಂದು ಅವರು ವಿವರಿಸಿದರು. ಕೊರೊನಾ ನಿಯಂತ್ರಣಕ್ಕೆ ‌ಚೆನ್ನೈ ಪಾಲಿಕೆಯಿಂದ ಉತ್ತಮ ಕ್ರಮ ಕೈಗೊಳ್ಳಲಾಗಿದ್ದು ಇತರ ಮಹಾನಗರ ಪಾಲಿಕೆಗಳು ಸಹ ಚೆನ್ನೈ ಮಾದರಿಯನ್ನು ಅನುಸರಿಬಹುದು ಎಂದರು.

ವ್ಯಾಕ್ಸಿನ್ ಪಾಸ್​ಪೋರ್ಟ್​ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯಲ್ಲಿಯೇ ಒಮ್ಮತ ಮೂಡಿಲ್ಲ. ಇದರ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಈಗ ಪ್ರಯಾಣಕ್ಕೆ ಕೇವಲ ಕೊರೊನಾ ಟೆಸ್ಟಿಂಗ್ ನೆಗೆಟಿವ್ ರಿಪೋರ್ಟ್​ನ್ನು ಮಾತ್ರ ವಿದೇಶಗಳು ಕೇಳುತ್ತಿವೆ ಎಂದು ಅವರು ತಿಳಿಸಿದರು.

ಬ್ಲ್ಯಾಕ್ ಫಂಗಸ್ ಸೋಂಕಿನ ಚಿಕಿತ್ಸೆಯಲ್ಲಿ ಬಳಸುವ ಅಂಫೋಟೆರಿಸಿನ್ ಬಿ ಡ್ರಗ್ಸ್ ಉತ್ಪಾದಿಸುವ ಕಂಪನಿಗಳು ತಮ್ಮ ಉತ್ಪಾದನೆಯನ್ನು ಹೆಚ್ಚಿಸುತ್ತಿವೆ. ಅಂಪೋಟೆರಿಸಿನ್ ಬಿ ಡ್ರಗ್ಸ್ ಲಸಿಕೆಯನ್ನು ಉತ್ಪಾದಿಸಲು ಐದು ಹೊಸ ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ದೇಶದಲ್ಲಿ ಇದುವರೆಗೂ 4.29 ಕೋಟಿ ಜನರಿಗೆ ಎರಡನೇ ಡೋಸ್ ಕೊವಿಡ್ ಲಸಿಕೆ ನೀಡಲಾಗಿದೆ 14.12 ಕೋಟಿ ಜನರಿಗೆ ಮೊದಲ‌‌ ಡೋಸ್ ಕೊವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಇದೇ ವೇಳೆ ಮಾತನಾಡಿದ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ದೇಶದಲ್ಲಿ ಮಕ್ಕಳಿಗೂ ಕೊರೊನಾ ಸೋಂಕು ತಗಲುತ್ತಿದೆ. ಆದರೆ ಕೊವಿಡ್ ತಗುಲಿದ ಹೆಚ್ಚಿನ ಮಕ್ಕಳಲ್ಲಿ ಸೋಂಕಿನ ಯಾವುದೇ ಲಕ್ಷಣ ಕಾಣಿಸಿಲ್ಲ. ಹೆಚ್ಚಿನ ಸಾವು ಸಹ ಸಂಭವಿಸುವ ಸಾಧ್ಯತೆಯಿಲ್ಲ. ಕೊವಿಡ್ ತಗುಲಿದ ಮಕ್ಕಳಿಗೆ ಸೋಂಕಿನ ಹೆಚ್ಚಿನ ಗುಣಲಕ್ಷಣ ಇರದಿದ್ದಲ್ಲಿ ಕಡ್ಡಾಯವಾಗಿ ಆಸ್ಪತ್ರೆಗೆ ಸೇರಿಸುವ ಅಗತ್ಯವಿಲ್ಲ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್‌ ತಿಳಿಸಿದರು.

ಭಾರತ ಮತ್ತು ಇತರ ದೇಶಗಳಲ್ಲಿ ವಿಡ್ ಸೋಂಕು ತಗುಲಿದ ಶೇಕಡಾ 3ರಿಂದ 4ರಷ್ಟು ಪ್ರಮಾಣದ ಮಕ್ಕಳನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ 10ರಿಂದ 12 ವರ್ಷದ ಮಕ್ಕಳನ್ನು ಈ ಸಂದರ್ಭದಲ್ಲಿ ಹೆಚ್ಚು ಗಮನಿಸಬೇಕಾದ ಅಗತ್ಯವಿದ್ದು, ಈ ವಯೋಮಾನದ ಮಕ್ಕಳು ಎಲ್ಲೆಂದರಲ್ಲಿ ತಿರುಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಪಾಲಕರು ಮಕ್ಕಳ ಮೇಲೆ ವಿಶೇಷ ಗಮನವಿರಿಸಬೇಕು ಎಂದು ಅವರು ಸೂಚಿಸಿದರು.

ಕೊರೊನಾ ಸೋಂಕಿಗೂ ಮೊದಲೇ ಬ್ಲ್ಯಾಕ್ ಫಂಗಸ್‌ ಸೋಂಕು ಇತ್ತು. ಹೆಚ್ಚಾಗಿ ಡಯಾಬಿಟಿಸ್ ಇರುವವರಿಗೆ ಬ್ಲ್ಯಾಕ್ ಫಂಗಸ್ ಸೋಂಕು ತಗಲುವ ಸಾರ್ಧಯತೆಗಳು ಹೆಚ್ಚಿವೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಸ್ಥಿರವಾಗುತ್ತಿದೆ. ಪಾಸಿಟಿವಿಟಿ ಪ್ರಮಾಣ, ಸಕ್ರಿಯ ಕೇಸ್ ಸಂಖ್ಯೆ ಕುಸಿತವಾಗುತ್ತಿದೆ. ಯಾವುದೇ ರಾಜ್ಯಕ್ಕೆ ಕೊವಿಡ್ ಲಸಿಕೆ ಕೊರತೆಯಾದರೆ ತುರ್ತಾಗಿ ಪೂರೈಸುತ್ತೇವೆ ಎಂದ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ಕೊವಿಡ್ ಚಿಕಿತ್ಸೆ ವೇಳೆ ಅನಗತ್ಯವಾಗಿ ಸ್ಟಿರಾಯ್ಡ್‌ ಅನ್ನು ಬಳಸಬಾರದು ಎಂದು ಸಹ ವಿವರಿಸಿದರು.

ಇದನ್ನೂ ಓದಿ: Radhika Apte: ಕೊವಿಡ್​ ಲಸಿಕೆ ಪಡೆದ ನಟಿ ರಾಧಿಕಾ ಆಪ್ಟೆ; ಸುತ್ತಿಬಳಸಿ ಕಾಲೆಳೆದ ನಟ ವಿಜಯ್​ ವರ್ಮಾ

ಜೊಮ್ಯಾಟೊದ 1.5 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಕೊವಿಡ್​ ಲಸಿಕೆ ಉಚಿತ; ಸಿಇಒ ದೀಪಿಂದರ್​ ಗೋಯಲ್ ಘೋಷಣೆ

(Covid Positivity Rate Decreases at 12.45 percent says Union health ministry joint secretary Luv Agarwal)

Published On - 6:00 pm, Sat, 22 May 21

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್