ದೇಶದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ ಶೇ.9.54ಕ್ಕೆ ಇಳಿಕೆ; 40 ದಿನಗಳ ನಂತರ 2 ಲಕ್ಷಕ್ಕೂ ಕಡಿಮೆ ಹೊಸ ಕೇಸ್​​ಗಳು

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 25,86,782ಕ್ಕೆ ಇಳಿಮುಖವಾಗಿದೆ. ಮೇ 10ರಿಂದಲೂ ಈ ಪ್ರಮಾಣದಲ್ಲಿ ಕಡಿಮೆಯಾಗುತ್ತಲೇ ಬರುತ್ತಿದೆ.

ದೇಶದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ ಶೇ.9.54ಕ್ಕೆ ಇಳಿಕೆ; 40 ದಿನಗಳ ನಂತರ 2 ಲಕ್ಷಕ್ಕೂ ಕಡಿಮೆ ಹೊಸ ಕೇಸ್​​ಗಳು
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:May 25, 2021 | 11:01 PM

ದೇಶದಲ್ಲಿ ಪ್ರತಿದಿನ ದಾಖಲಾಗುವ ಕೊವಿಡ್​ 19 ಪಾಸಿಟಿವಿಟಿ ದರ ಶೇ.9.54ಕ್ಕೆ ಇಳಿಕೆಯಾಗಿದೆ. ಹಾಗೇ ಕಳೆದ 12ದಿನಗಳಿಂದಲೂ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿನ ಪ್ರಕರಣಕ್ಕಿಂತ, ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 25,86,782ಕ್ಕೆ ಇಳಿಮುಖವಾಗಿದೆ. ಮೇ 10ರಿಂದಲೂ ಈ ಪ್ರಮಾಣದಲ್ಲಿ ಕಡಿಮೆಯಾಗುತ್ತಲೇ ಬರುತ್ತಿದೆ. ಇನ್ನು ಕಳೆದ 24ಗಂಟೆಯಲ್ಲಿ 3,26,850 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಕೊರೊನಾದಿಂದ ಗುಣಮುಖರಾದವರ ಒಟ್ಟೂ ಸಂಖ್ಯೆ 2,40,54,861ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿದೆ. ಕಳೆದ 24ಗಂಟೆಯಲ್ಲಿ 1,96,427 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 40 ದಿನಗಳ ಹಿಂದೆ ಹೀಗೆ 2 ಲಕ್ಷಕ್ಕಿಂತ ಕಡಿಮೆ ಕೇಸ್ ದಾಖಲಾಗಿತ್ತು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇಲ್ಲಿಯವರೆಗೆ ಒಟ್ಟು 19,85,38,999 ಡೋಸ್ ಲಸಿಕೆ ನೀಡಲಾಗಿದೆ ಎಂದೂ ಮಾಹಿತಿ ನೀಡಿದೆ.

ಇದನ್ನೂ ಓದಿ: ಖಗೋಳ ವಿಜ್ಞಾನದ ಏರಿಸ್ ತರಬೇತಿಯಲ್ಲಿ ಭಾಗವಹಿಸಿದ ಭಾರತದ ವಿವಿಧ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು

ಸಂಸ್ಕರಿಸಿದ ಹಾಗೂ ಸಾವಯವ ಪ್ರಮಾಣೀಕೃತ ಹಲಸಿನ ಹಣ್ಣು ಬೆಂಗಳೂರಿನಿಂದ ಜರ್ಮನಿಗೆ ರಫ್ತು

Covid positivity rate down to 9.54 per cent in India

Published On - 10:59 pm, Tue, 25 May 21

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್