ಜಾಗತಿಕವಾಗಿ ಕೊರೊನಾ ಏರಿಕೆ; ಈ 5 ಅಂಶಗಳನ್ನು ಅನುಸರಿಸುವಂತೆ ಎಲ್ಲಾ ರಾಜ್ಯಗಳಿಗೆ ರಾಜೇಶ್ ಭೂಷಣ್ ಪತ್ರ

Covid 19 | Omicron: ಜಗತ್ತಿನ ಹಲವೆಡೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವ ಕಾರಣ, ಎಚ್ಚರ ತಪ್ಪಬಾರದು ಎಂದು ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಎಲ್ಲಾ ರಾಜ್ಯಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಜಾಗತಿಕವಾಗಿ ಕೊರೊನಾ ಏರಿಕೆ; ಈ 5 ಅಂಶಗಳನ್ನು ಅನುಸರಿಸುವಂತೆ ಎಲ್ಲಾ ರಾಜ್ಯಗಳಿಗೆ ರಾಜೇಶ್ ಭೂಷಣ್ ಪತ್ರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Mar 18, 2022 | 4:11 PM

ಭಾರತದಲ್ಲಿ ದೈನಂದಿನ ಕಡಿಮೆ ಕೊರೊನಾ ಪ್ರಕರಣಗಳು (Corona Cases) ದಾಖಲಾಗುತ್ತಿವೆ. ಇಂದು ಅಂದರೆ ಶುಕ್ರವಾರ 2,500 ಪ್ರಕರಣಗಳು ವರದಿಯಾಗಿದ್ದು, ಕೊರೊನಾ ಮೂರನೇ ಅಲೆಯನ್ನು ದೇಶವು ಮೆಟ್ಟಿನಿಂತಿದೆ ಎಂದು ನಿಸ್ಸಂಶಯವಾಗಿ ಹೇಳಬಹುದು. ಆದರೆ ವಿಶ್ವದ ಬೇರೆಬೇರೆ ಮೂಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿದೆ. ಇದರ್ಥ ದೇಶವು ಕೊರೊನಾ ಪ್ರಕರಣಗಳ ಏರಿಕೆಗೆ ಸಾಕ್ಷಿಯಾಗಲೂಬಹುದು! ಪ್ರಸ್ತುತ ದೇಶದಲ್ಲಿ ಸಾಮಾನ್ಯ ನಿಯಮಾವಳಿಗಳಿವೆ. ಅಲ್ಲದೇ ನಿರ್ಬಂಧಗಳಿಲ್ಲದೇ ಹಬ್ಬ- ಸಂಭ್ರಮಗಳಲ್ಲಿ ಭಾಗವಹಿಸಬಹುದಾಗಿದೆ. ಆದರೆ ಜಗತ್ತಿನ ಹಲವೆಡೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವ ಕಾರಣ, ಎಚ್ಚರ ತಪ್ಪಬಾರದು ಎಂದು ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ (Rajesh Bhushan) ಎಲ್ಲಾ ರಾಜ್ಯಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ರಾಜೇಶ್ ಭೂಷಣ್ ಪ್ರಸ್ತಾಪಿಸಿದ 5 ಅಂಶಗಳು:

ಪತ್ರದಲ್ಲಿ ರಾಜೇಶ್ ಭೂಷಣ್ ಅವರು, ಕೊರೊನಾ ಬಗ್ಗೆ ನಿರಂತರ ಗಮನ ಹರಿಸಬೇಕು ಎಂದು ಒತ್ತಿ ಹೇಳಿದ್ದಾರೆ. ತಮ್ಮ ಪತ್ರದಲ್ಲಿ ಐದು ಅಂಶಗಳನ್ನು ಸತತವಾಗಿ ಅನುಸರಿಸುವಂತೆ ಅವರು ಪ್ರತಿಪಾದಿಸಿದ್ದಾರೆ. ಅವುಗಳೆಂದರೆ ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಕೊವಿಡ್ ಮುನ್ನೆಚ್ಚರಿಕಾ ನಿಯಮಪಾಲನೆ.

ಈ ನಡುವೆ ಕೊರೊನಾ ಪ್ರಕರಣಗಳು ಜಾಗತಿಕವಾಗಿ ಏರುತ್ತಿರುವುದು ದೊಡ್ಡ ಸಮಸ್ಯೆಯನ್ನು ಮುನ್ಸೂಚಿಸುತ್ತಿದೆ ಎನ್ನುತ್ತಾರೆ ತಜ್ಞರು. ಕಾರಣ, ಹಲವು ದೇಶಗಳಲ್ಲಿ ಪರಿಕ್ಷೆಯ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಅದಾಗ್ಯೂ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿವೆ.

ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದ್ದು, ಒಂದು ತಿಂಗಳಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾದ ಬೆನ್ನಲ್ಲೇ ಈಗ ಪುನಃ ಏರಿಕೆಯಾಗುತ್ತಿದೆ. ಎಲ್ಲಾ ರಾಷ್ಟ್ರಗಳು ಎಚ್ಚರಿಕೆ ವಹಿಸಬೇಕು ಎಂದಿದೆ. ಡಬ್ಲ್ಯುಹೆಚ್​​ಒ ಹೇಳಿದಂತೆ ಚೀನಾದ ಜಿಲಿನ್ ಪ್ರಾಂತ್ಯದಲ್ಲಿ ಲಾಕ್​ಡೌನ್​ ಹೇರಲಾಗಿದೆ. ಅದಾಗ್ಯೂ ಭಾರತದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದು ಗಮನಾರ್ಹ. ವಿವಿಧ ದೇಶಗಳಲ್ಲಿ ಯಾವ ಪರಿಸ್ಥಿತಿ ಇದೆ ಎಂಬ ಮಾಹಿತಿ ಇಲ್ಲಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಸೋಂಕು ಹೆಚ್ಚಳಕ್ಕೆ ಕಾರಣಗಳೇನು?

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಸೋಂಕು ಹೆಚ್ಚಳಕ್ಕೆ ಹಲವಾರು ಅಂಶಗಳು ಕಾರಣವಾಗಿವೆ. ಅದರಲ್ಲಿ ಒಂದು ಒಮಿಕ್ರಾನ್​ನ ಪ್ರಬಲ ರೂಪಾಂತರಿ ಮತ್ತು ಅದರ BA.2 ಉಪವರ್ಗ. ಜತೆಗೆ ಕೊವಿಡ್ ಮಾರ್ಗಸೂಚಿಗಳನ್ನು ಸಡಿಲಗೊಳಿಸಿರುವುದೂ ಇದಕ್ಕೆ ಕಾರಣ ಎಂದಿದೆ ಸಂಸ್ಥೆ. ಈ ಸೋಂಕು ಹೆಚ್ಚಳವು ಮಂಜುಗಡ್ಡೆಯ ತುದಿ ಮಾತ್ರ ಎಂದಿರುವ WHO ಮುಖ್ಯಸ್ಥ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್, ಮುಂದೆ ಪರಿಸ್ಥಿತಿ ಕಠಿಣವಾಗಬಹುದು ಎನ್ನುವ ಮುನ್ಸೂಚನೆ ನೀಡಿದ್ದಾರೆ.

ಯುರೋಪ್​ನಲ್ಲಿ ಕೊರೊನಾ ಪ್ರಕರಣಗಳಲ್ಲಿ ಏರಿಕೆ:

ಮಾರ್ಚ್ 7ರಿಂದ 13ರ ನಡುವೆ ಯುರೋಪ್​ನಲ್ಲಿ ಕೊರೊನಾ ಪ್ರಕರಣಗಳಲ್ಲಿ ಶೇ.2 ಏರಿಕೆ ಕಂಡುಬಂದಿದೆ. ಫಿನ್​ಲ್ಯಾಂಡ್ ಮತ್ತು ಇಂಗ್ಲೆಂಡ್​ನಲ್ಲಿ ಪ್ರಕರಣಗಳು ತ್ವರಿತವಾಗಿ ಏರುತ್ತಿವೆ. ಒಮಿಕ್ರಾನ್​ನ BA.2 ರೂಪಾಂತರಿ ಸೋಂಕು ಹೆಚ್ಚಳಕ್ಕೆ ಕಾರಣ ಎಂದು ವೈರ್ ಸುದ್ದಿಸಂಸ್ಥೆ ವರದಿ ಮಾಡಿದೆ. ಆದರೆ ಇದು ಒಮಿಕ್ರಾನ್​ಗಿಂತ ಹಾನಿಕಾರಕವೇ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಹಾಂಗ್​ಕಾಂಗ್​ನಲ್ಲಿ ಕೊವಿಡ್ ಏರಿಕೆ:

ಹಾಂಗ್​ಕಾಂಗ್​ನಲ್ಲಿ ಬುಧವಾರ 29 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಹೇರಲಾಗಿರುವ ಮಾರ್ಗಸೂಚಿಗಳ ಬಗ್ಗೆ ಜನರಿಗೆ ಅಸಹನೆ ಇದ್ದು, ಆದಷ್ಟು ಶೀಘ್ರವಾಗಿ ಅದನ್ನು ಮರುಪರಿಶೀಲನೆ ಮಾಡುವುದಾಗಿ ಅಲ್ಲಿನ ನಾಯಕಿ ಕ್ಯಾರಿ ಲ್ಯಾಮ್ ಹೇಳಿದ್ದಾರೆ. 7.4 ಮಿಲಿಯನ್ ಜನಸಂಖ್ಯೆ ಹೊಂದಿರುವ ಹಾಂಗ್​ಕಾಂಗ್​ನಲ್ಲಿ ಅಮೇರಿಕಾ ಹಾಗೂ ಬ್ರಿಟನ್​ಗೆ ವಿಮಾನ ನಿಷೇಧ, 14 ದಿನಗಳ ಕ್ವಾರಂಟೈನ್ ಮೊದಲಾದ ನಿಯಮಗಳಿವೆ. ಇದಕ್ಕೆ ಜನರು ಅಸಹನೆ ವ್ಯಕ್ತಪಡಿಸಿದ್ದಾರೆ.

ಅಮೇರಿಕಾದಲ್ಲಿ ಮುನ್ನೆಚ್ಚರಿಕೆ:

ಅಮೇರಿಕಾದಲ್ಲಿ ಸದ್ಯ ಮಾಸ್ಕ್ ಕಡ್ಡಾಯ ಎಂಬ ನಿಯಮವನ್ನು ಸಡಿಲಿಸಲಾಗಿದೆ. ಜನರು ಕೆಲಸಕ್ಕೆ ಕಚೇರಿಗಳಿಗೆ ಹಾಜರಾಗುತ್ತಿದ್ದಾರೆ. ಆದರೆ ನಿಧಾನವಾಗಿ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ.

ಇದನ್ನೂ ಓದಿ:

Covid 19: ಜಗತ್ತಿನಲ್ಲಿ ಏರಿಕೆಯಾಗುತ್ತಿರುವ ಕೊರೊನಾ; ಒಂದು ವಾರದಲ್ಲಿ 1 ಕೋಟಿಗೂ ಹೆಚ್ಚು ಪ್ರಕರಣಗಳು ದಾಖಲು

ಮಲ ಹೊರುವ ಪದ್ಧತಿ ಇನ್ನೂ ಇದೆ, ಮತ್ತೆ ಹೇಗೆ ಸ್ವಚ್ಛ ಭಾರತ್ ಎಂದು ಮಾತಾಡುತ್ತಾರೆ: ಬರಗೂರು ರಾಮಚಂದ್ರಪ್ಪ ಆಕ್ರೋಶ

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ