ಮಹಾರಾಷ್ಟ್ರದಲ್ಲಿ ಕೊವಿಡ್ ನಿರ್ಬಂಧ, ಮಾಸ್ಕ್ ಕಡ್ಡಾಯ ಮತ್ತೆ ಜಾರಿ ಸಾಧ್ಯತೆ; ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ

ಕೊವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಮತ್ತು ಜನರು ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ನಿರ್ಬಂಧಗಳನ್ನು ವಿಧಿಸಬೇಕಾಗಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊವಿಡ್ ನಿರ್ಬಂಧ, ಮಾಸ್ಕ್ ಕಡ್ಡಾಯ ಮತ್ತೆ ಜಾರಿ ಸಾಧ್ಯತೆ; ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ
ಉದ್ಧವ್ ಠಾಕ್ರೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 03, 2022 | 8:16 AM

ಮುಂಬೈ: ಭಾರತದಲ್ಲಿ ಕೊರೊನಾವೈರಸ್​ ಕೇಸುಗಳ (Covid-19 Cases) ಸಂಖ್ಯೆ ಕೊಂಚ ಕಡಿಮೆಯಾಗಿದ್ದರಿಂದ ಆಫೀಸುಗಳಲ್ಲಿನ ವರ್ಕ್​ ಫ್ರಂ ಹೋಂ ಆಯ್ಕೆಯನ್ನು ಹಲವು ಕಂಪನಿಗಳಲ್ಲಿ ಸ್ಥಗಿತಗೊಳಿಸಲಾಗಿದೆ. ಎಂದಿನಂತೆ ಉದ್ಯೋಗಿಗಳು ಕಚೇರಿಗೆ ಹೋಗಿ ಕೆಲಸ ಮಾಡತೊಡಗಿದ್ದಾರೆ. ಹಾಗೇ, ಹಲವು ರಾಜ್ಯಗಳಲ್ಲಿ ಕೊರೊನಾ ನಿಯಮಗಳನ್ನು (Coronavirus Rules) ಸಡಿಲಗೊಳಿಸಲಾಗಿದೆ. ಆದರೆ, ಇದರ ನಡುವೆ ಮುಂಬೈನಲ್ಲಿ ಕೊವಿಡ್-19 ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡುಬಂದಿದೆ. ಕಳೆದ ಕೆಲವು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಹೊಸ ಕೊರೊನಾವೈರಸ್ ಸೋಂಕಿನ ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಮಳೆಗಾಲದಲ್ಲಿ ಕೊವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಬಹುದು ಎಂದು ಮಹಾರಾಷ್ಟ್ರದ ಉನ್ನತ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಗುರುವಾರ 1,045 ಹೊಸ ಕೊವಿಡ್ ಸೋಂಕಿನ ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 4,559ಕ್ಕೆ ಏರಿಕೆಯಾಗಿದೆ.

ಕೊವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಮತ್ತು ಜನರು ಮಾರ್ಗಸೂಚಿಗಳನ್ನು ಅನುಸರಿಸದಿದ್ದರೆ ಮಹಾರಾಷ್ಟ್ರದಲ್ಲಿ ಮತ್ತೆ ಕೋವಿಡ್ ನಿರ್ಬಂಧಗಳನ್ನು ವಿಧಿಸಬೇಕಾಗಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಸಿದ್ದಾರೆ. ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಜನರ ಮೇಲೆ ಮತ್ತೆ ಕೊರೊನಾ ನಿರ್ಬಂಧಗಳನ್ನು ಹೇರಬಾರದು ಎಂದರೆ ಎಲ್ಲರೂ ತಪ್ಪದೆ ಮಾಸ್ಕ್ ಧರಿಸಬೇಕು, ಕೊವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಮತ್ತು ಶಿಸ್ತನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಠಾಕ್ರೆ ಹೇಳಿದ್ದಾರೆ.

ಇದನ್ನೂ ಓದಿ: ಮುಂಬೈಯಲ್ಲಿ 739 ಹೊಸ ಕೊವಿಡ್ ಪ್ರಕರಣ ಪತ್ತೆ; ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 1,081ಕ್ಕೆ ಏರಿಕೆ

ಕಳೆದ ಒಂದೂವರೆ ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳು 7 ಪಟ್ಟು ಹೆಚ್ಚಾಗಿದೆ ಎಂದು ಸಿಎಂ ಉದ್ಧವ್ ಠಾಕ್ರೆ ಎಚ್ಚರಿಸಿದರು. ಮಹಾರಾಷ್ಟ್ರ ಸರ್ಕಾರವು ಹದಿನೈದು ದಿನಗಳ ಕಾಲ ಪರಿಸ್ಥಿತಿಯ ಮೇಲೆ ನಿಗಾ ಇಡಲಿದೆ. ಇದರ ನಡುವೆ, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಾತನಾಡಿ, ರಾಜ್ಯದಲ್ಲಿ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಮತ್ತೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಪರಿಸ್ಥಿತಿ ಕೈ ಮೀರದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ