AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗದ ಸ್ಥಳದಲ್ಲಿಯೇ ಕೋವಿಡ್ ಲಸಿಕೆ ನೀಡಲು ಕೇಂದ್ರದ ಅನುಮತಿ: ಭಾನುವಾರದಿಂದ ಜಾರಿ ಸಾಧ್ಯತೆ

ಭಾರತದಲ್ಲಿ ಉದ್ಯೋಗಿಗಳಿಗೆ ಅವರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಕೊರೊನಾ ವೈರಸ್​ ಸೋಂಕು ತಡೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಉದ್ಯೋಗದ ಸ್ಥಳದಲ್ಲಿಯೇ ಕೋವಿಡ್ ಲಸಿಕೆ ನೀಡಲು ಕೇಂದ್ರದ ಅನುಮತಿ: ಭಾನುವಾರದಿಂದ ಜಾರಿ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 07, 2021 | 5:51 PM

Share

ಭಾರತದಲ್ಲಿ ಉದ್ಯೋಗಿಗಳಿಗೆ ಅವರು ಕೆಲಸ ಮಾಡುವ ಸ್ಥಳಗಳಲ್ಲಿಯೇ ಕೊರೊನಾ ವೈರಸ್​ ಸೋಂಕು ತಡೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಭಾನುವಾರದಿಂದ ಲಸಿಕೆ ನೀಡಬಹುದು. ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

‘ಯಾವುದೇ ಸಂಸ್ಥೆಯುಲ್ಲಿ ಕೆಲಸ ಮಾಡುವ 100ಕ್ಕಿಂತ ಹೆಚ್ಚು ಅರ್ಹ ಉದ್ಯೋಗಿಗಳು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬಂದರೆ ಅಂಥ ಸ್ಥಳಗಳಲ್ಲಿ ಲಸಿಕೆ ಹಾಕಲು ಅಗತ್ಯ ಸೌಕರ್ಯ ಕಲ್ಪಿಸಿಕೊಂಡು, ಲಸಿಕೆ ಹಾಕಬಹುದು’ ಎಂದು ಕೇಂದ್ರ ಸರ್ಕಾರ ಹೇಳಿದೆ.

‘ಮುಂದಿನ ಭಾನುವಾರ (ಏಪ್ರಿಲ್ 11) ಈ ಯೋಜನೆಯನ್ನು ಆರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಲಸಿಕೆಯು ಎಲ್ಲರಿಗೂ ಸುಲಭವಾಗಿ ಸಿಗಬೇಕು, ಗುಣಮಟ್ಟದಲ್ಲಿ ರಾಜಿಯಾಗಬಾರದು ಮತ್ತು ನಾಗರಿಕರಿಗೆ ಉತ್ತಮ ಸೇವೆ ಸಿಗಬೇಕು ಎಂಬು ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ’ ಎಂದು ಹೆಸರು ಹೇಳಲು ಇಚ್ಛಿಸದ ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರ ಹೇಳಿಕೆಯನ್ನು ದಿ ಹಿಂದೂ ಮತ್ತು ಎನ್​ಡಿಟಿವಿ ಜಾಲತಾಣಗಳು ಉಲ್ಲೇಖಿಸಿವೆ.

ಕೇಂದ್ರ ಅರೋಗ್ಯ ಕಾರ್ಯದರ್ಶಿಯು ಮುಖ್ಯಕಾರ್ಯದರ್ಶಿಗೆ ಕಳಿಸಿರುವ ಪತ್ರದಲ್ಲಿ ಈ ಸಂಬಂಧ ಮಾಹಿತಿ ಇದೆ. ‘ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳ ನೆರವಿನೊಂದಿಗೆ ಲಸಿಕೆ ಅಭಿಯಾನಕ್ಕೆ ಹೊಸ ವೇಗ ನೀಡಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ, ಕಾರ್ಮಿಕರು ಇರುವ ಸ್ಥಳಗಳಲ್ಲಿ 100ಕ್ಕಿಂತ ಹೆಚ್ಚಿನ ಸಂಖ್ಯೆಯ ಅರ್ಹ ಉದ್ಯೋಗಿಗಳು ಲಸಿಕೆ ಪಡೆದುಕೊಳ್ಳಲು ಇಚ್ಛೆ ವ್ಯಕ್ತಪಡಿಸಿದರೆ ಅಂತಲ್ಲಿಯೂ ಕೋವಿಡ್ ಲಸಿಕಾ ಕೇಂದ್ರಗಳ ನೆರವಿನಿಂದ ಲಸಿಕಾ ಅಭಿಯಾನ ನಡೆಸಲಾಗುವುದು’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕವೂ ಸೇರಿದಂತೆ ದೇಶದ ವಿವಿಧೆಡೆ ಕೊರೊನಾ ಸೋಂಕು ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. 45 ವರ್ಷ ದಾಟಿದ ಎಲ್ಲರೂ ಲಸಿಕೆ ಪಡೆಯಬಹುದಾಗಿದೆ. ವಯೋಮಿತಿ ಸಡಿಲಿಕೆಗೆ ದೇಶದಾದ್ಯಂತ ಈಗಾಗಲೇ ವ್ಯಾಪಕ ಒತ್ತಾಯ ಕೇಳಿಬಂದಿದೆ. ಯುವಜನರು ಮತ್ತು ಮಕ್ಕಳಲ್ಲಿಯೂ ಸೋಂಕು ಹೆಚ್ಚಾಗುತ್ತಿರುವುದು ಕಂಡುಬಂದಿದೆ.

(Covid vaccinations to be allowed in workplaces states asked to prepare for launch by Sunday)

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದ ಪವರ್​ಸ್ಟಾರ್​ ಪುನೀತ್​; ಅಭಿಮಾನಿಗಳಿಗೆ ಬಂತು ಹೊಸ ಸ್ಫೂರ್ತಿ

ಇದನ್ನೂ ಓದಿ: ಯುವಜನತೆಗೆ ಯಾಕೆ ಕೊರೊನಾ ಲಸಿಕೆ ಕೊಡ್ತಿಲ್ಲ, ಮೊದಲು ಅವರಿಗೆ ಕೊಡಿ: ಕೇಂದ್ರಕ್ಕೆ ತಿವಿದ ಕಾಂಗ್ರೆಸ್​ ಸಂಸದ ಮನೀಶ್ ತಿವಾರಿ

Published On - 5:35 pm, Wed, 7 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ