AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಗಳ ಬಳಿ 1.17 ಕೋಟಿ ಡೋಸ್ ಕೊವಿಡ್ ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಇಲಾಖೆ

ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿರುವ ಮಾಹಿತಿಯ ಪ್ರಕಾರ ಈವರೆಗೆ 25,60,08,080 (25 ಕೋಟಿ) ಡೋಸ್ ಲಸಿಕೆಗಳನ್ನು ರಾಜ್ಯಗಳಿಗೆ ಕೇಂದ್ರವು ಉಚಿತವಾಗಿ ನೀಡಿದೆ.

ರಾಜ್ಯಗಳ ಬಳಿ 1.17 ಕೋಟಿ ಡೋಸ್ ಕೊವಿಡ್ ಲಸಿಕೆ ಲಭ್ಯ: ಕೇಂದ್ರ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 11, 2021 | 6:09 PM

Share

ದೆಹಲಿ: ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,17,56,911 (1.17 ಕೋಟಿ) ಡೋಸ್ ಕೊವಿಡ್ ನಿರೋಧಕ ಲಸಿಕೆಗಳು ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಹೇಳಿದೆ. ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿರುವ ಮಾಹಿತಿಯ ಪ್ರಕಾರ ಈವರೆಗೆ 25,60,08,080 (25 ಕೋಟಿ) ಡೋಸ್ ಲಸಿಕೆಗಳನ್ನು ರಾಜ್ಯಗಳಿಗೆ ಕೇಂದ್ರವು ಉಚಿತವಾಗಿ ನೀಡಿದೆ.

ವ್ಯರ್ಥವಾಗಿರುವ ಡೋಸ್​ಗಳನ್ನೂ ಲೆಕ್ಕ ಹಾಕಿದರೆ ಈವರೆಗೆ 24,44,06,096 (24 ಕೋಟಿ) ಡೋಸ್​ ಲಸಿಕೆಗಳು ಬಳಕೆಯಾಗಿವೆ. 38 ಲಕ್ಷ ಲಸಿಕೆ ಡೋಸ್​ಗಳಿಗೆ (38,21,170) ಆರ್ಡರ್ ನೀಡಲಾಗಿದೆ. ಮುಂದಿನ ಮೂರು ದಿನಗಳ ಒಳಗೆ ರಾಜ್ಯಗಳು ಈ ಲಸಿಕೆಗಳನ್ನು ಸ್ವೀಕರಿಸಲಿವೆ.

ಮೇ 1ರಿಂದ ದೇಶದಲ್ಲಿ 3ನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿತ್ತು. ಕಳೆದ ಸೋಮವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ 18 ವರ್ಷ ಮೇಲ್ಪಟ್ಟ ಎಲ್ಲ ಭಾರತೀಯರಿಗೆ ಜೂನ್ 21ರಿಂದ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ಒದಗಿಸಲಿದೆ ಎಂದು ಘೋಷಿಸಿದ್ದರು.

ದೇಶದಲ್ಲಿ ಉತ್ಪಾದನೆಯಾಗುವ ಒಟ್ಟು ಲಸಿಕೆಯ ಶೇ 75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವು ಪಡೆದುಕೊಳ್ಳಲಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರಗಳು ಲಸಿಕೆಗಾಗಿ ವೆಚ್ಚ ಮಾಡಬೇಕಿಲ್ಲ ಎಂದು ಹೇಳಿದ್ದರು.

(Covid vaccine doses of Over 1.17 crore available with states says health ministry)

ಇದನ್ನೂ ಓದಿ: PM Modi Speech: ಭಾರತದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ: PM Narendra Modi ಕೊವಿಡ್ ವಿರುದ್ಧದ ಹೋರಾಟದಲ್ಲಿ ಲಸಿಕೆಯೇ ನಮ್ಮ ಸುರಕ್ಷಾ ಕವಚ: ನರೇಂದ್ರ ಮೋದಿ

Published On - 6:06 pm, Fri, 11 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ