ಕೊವಿಡ್ ಲಸಿಕೆಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ; ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಕಳೆದ ವರ್ಷ ಕೊವಿಡ್-19 ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.

ಕೊವಿಡ್ ಲಸಿಕೆಗೆ ಸಂಬಂಧಿಸಿದ ಸಾವಿಗೆ ನಾವು ಜವಾಬ್ದಾರರಲ್ಲ; ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ಸ್ಪಷ್ಟನೆ
ಕೊವಿಡ್ ಲಸಿಕೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 29, 2022 | 10:58 AM

ನವದೆಹಲಿ: ಕೊವಿಡ್ ಲಸಿಕೆಯಿಂದ (Covid Vaccination) ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ (Supreme Court) ತಿಳಿಸಿದೆ. ಒಂದುವೇಳೆ ಕೊವಿಡ್ ಲಸಿಕೆಯಿಂದಾಗಿ ಸಾವು ಸಂಭವಿಸಿದರೆ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡುವ ಮೂಲಕ ಪರಿಹಾರವನ್ನು ಪಡೆಯುವುದೊಂದೇ ಪರಿಹಾರವಾಗಿದೆ ಎಂದು ಕೇಂದ್ರ ಸರ್ಕಾರ (Central Government) ಸ್ಪಷ್ಟಪಡಿಸಿದೆ.

ಕಳೆದ ವರ್ಷ ಕೊವಿಡ್-19 ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು ಯುವತಿಯರ ಪೋಷಕರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ. ಕಳೆದ ವಾರ ಆ ಅರ್ಜಿಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೊವಿಡ್ ಲಸಿಕೆಗಳ ಬಳಕೆಯಿಂದ ಸಂಭವಿಸುವ ಸಾವುಗಳಿಗೆ ಪರಿಹಾರವನ್ನು ನೀಡಲು ರಾಜ್ಯವನ್ನು ಅಥವಾ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುವುದು ಕಾನೂನುಬದ್ಧವಾಗಿ ಸಮರ್ಥನೀಯವಲ್ಲ ಎಂದು ಹೇಳಿತ್ತು.

ಇದನ್ನೂ ಓದಿ: Nasal Covid Vaccine: ಭಾರತ್ ಬಯೋಟೆಕ್​ನ ನಾಸಲ್ ಕೋವಿಡ್ ಲಸಿಕೆಗೆ ಅನುಮೋದನೆ

2022ರ ನವೆಂಬರ್ 19ರವರೆಗೆ ದೇಶದಲ್ಲಿ ನೀಡಲಾದ ಕೊವಿಡ್-19 ಲಸಿಕೆಗಳ 219.86 ಕೋಟಿ ಡೋಸ್‌ಗಳಲ್ಲಿ 92,114 ಎಇಎಫ್‌ಐಗಳು ವರದಿಯಾಗಿವೆ ಎಂದು ಅಫಿಡವಿಟ್ ಹೇಳಿತ್ತು. ಮೊದಲ ಅರ್ಜಿದಾರರಾದ ರಚನಾ ಗಂಗೂ ಅವರ ಮಗಳು ಕಳೆದ ವರ್ಷ ಮೇ 29ರಂದು ಕೋವಿಶೀಲ್ಡ್​ನ ಮೊದಲ ಡೋಸ್ ಅನ್ನು ಹಾಕಿಸಿಕೊಂಡಿದ್ದರು. ಅದಾಗಿ 1 ತಿಂಗಳೊಳಗೆ ಜೂನ್ 19ರಂದು ಅವರು ನಿಧನರಾಗಿದ್ದರು.

ಇತರ ಅರ್ಜಿದಾರರಾದ ವೇಣುಗೋಪಾಲನ್ ಗೋವಿಂದನ್ ಅವರ ಮಗಳು ಎಂಎಸ್ಸಿ ವಿದ್ಯಾರ್ಥಿನಿಯಾಗಿದ್ದು, ಜೂನ್ 18ರಂದು ಕೋವಿಶೀಲ್ಡ್​ನ ಮೊದಲ ಡೋಸ್ ಅನ್ನು ಪಡೆದಿದ್ದರು. ಕಳೆದ ವರ್ಷ ಜುಲೈ 10ರಂದು ಅವರು ನಿಧನರಾಗಿದ್ದರು. ಮೊದಲ ಅರ್ಜಿದಾರರ ಮಗಳಿಗೆ ಥ್ರಂಬೋಸಿಸ್ ಮತ್ತು ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಇತ್ತು ಎಂದು ಅಫಿಡವಿಟ್ ಹೇಳಿದೆ. ಇದು ಜಾಗತಿಕವಾಗಿ ವರದಿಯಾದ ಕೋವಿಡ್ -19 ಲಸಿಕೆಗಳಿಗೆ ಸಂಬಂಧಿಸಿದ ಅಪರೂಪದ ಎಇಎಫ್‌ಐ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್