Covid Vaccine: ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊವಿಡ್ ಲಸಿಕೆ ರವಾನೆ

ಭಾರತವು ಇಂದು 5,00,000 ಡೋಸ್ ಕೊವಿಡ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು.

Covid Vaccine: ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊವಿಡ್ ಲಸಿಕೆ ರವಾನೆ
ಕೊರೊನಾ ಲಸಿಕೆ ಸಾಂಕೇತಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 01, 2022 | 3:00 PM

ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್​ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ, ವೈದ್ಯಕೀಯ ಸಲಕರಣೆಗಳನ್ನು ರವಾನಿಸಲಾಗಿದೆ.

ಭಾರತವು ಇಂದು 5,00,000 ಡೋಸ್ ಕೊವಿಡ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿದೆ. ಕಾಬೂಲ್‌ನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು. ಯುದ್ಧ ಪೀಡಿತ ದೇಶಕ್ಕೆ ಮುಂಬರುವ ವಾರಗಳಲ್ಲಿ ಮತ್ತೆ 5 ಲಕ್ಷ ಡೋಸ್‌ ಲಸಿಕೆಗಳನ್ನು ಪೂರೈಸಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಇದಕ್ಕೂ ಮೊದಲು, ಡಿಸೆಂಬರ್ 11ರಂದು, ಭಾರತವು ವಿಶ್ವ ಆರೋಗ್ಯ ಸಂಸ್ಥೆ (WHO) ಮೂಲಕ 1.6 ಮೆಟ್ರಿಕ್ ಟನ್ ಜೀವರಕ್ಷಕ ಔಷಧಗಳನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿತ್ತು. ಔಷಧಿಗಳನ್ನು ದೆಹಲಿಯಿಂದ ರಿಟರ್ನ್ ಕಾಮ್ ಏರ್ ವಿಮಾನದ ಮೂಲಕ ಕಳುಹಿಸಲಾಯಿತು. ಕಾಬೂಲ್‌ನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ಲಸಿಕೆಗಳನ್ನು ಹಸ್ತಾಂತರಿಸಲಾಯಿತು.

ಮುಂಬರುವ ವಾರಗಳಲ್ಲಿ ನಾವು ಅಫ್ಘಾನಿಸ್ತಾನಕ್ಕೆ ಗೋಧಿ ಪೂರೈಕೆ ಮತ್ತು ಉಳಿದ ವೈದ್ಯಕೀಯ ಸಹಾಯವನ್ನು ಮಾಡುತ್ತೇವೆ. ಆಹಾರ ಧಾನ್ಯಗಳು, ಒಂದು ಮಿಲಿಯನ್ ಡೋಸ್ ಕೋವಿಡ್ ಲಸಿಕೆ ಮತ್ತು ಅಗತ್ಯ ಜೀವ ಉಳಿಸುವ ಔಷಧಿಗಳ ಮೂಲಕ ಅಫ್ಘಾನ್ ಜನರಿಗೆ ಮಾನವೀಯ ನೆರವು ನೀಡಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೊವಿಶೀಲ್ಡ್ ಕೊವಿಡ್ ಲಸಿಕೆಯ ಸಂಪೂರ್ಣ ಅನುಮೋದನೆಗಾಗಿ  ಅರ್ಜಿ ಸಲ್ಲಿಸಿದ ಸೆರಮ್ ಇನ್‌ಸ್ಟಿಟ್ಯೂಟ್ 

ಜನವರಿ 3 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭ; ಮಕ್ಕಳ ವ್ಯಾಕ್ಸಿನೇಷನ್‌ ಕುರಿತು ಮಾರ್ಗಸೂಚಿ ಬಿಡುಗಡೆ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು