Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದವರ ಜತೆಗಿದ್ದರೂ ಮಾಸ್ಕ್ ಧರಿಸಿ, ಮಾಸ್ಕ್ ಧರಿಸುವುದು ಕಡ್ಡಾಯ: ನೀತಿ ಆಯೋಗದ ಸದಸ್ಯ ಡಾ.ವಿ.ಕೆ. ಪೌಲ್

Covid 19 in India: ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿದೆ. ಈ ಮೊದಲು ದೇಶದಲ್ಲಿ 7,300 ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿತ್ತು. ಈಗ ದಿನಕ್ಕೆ 9,103 ಟನ್ ಉತ್ಪಾದಿಸಲಾಗುತ್ತಿದೆ. ಕೈಗಾರಿಕಾ ಉದ್ದೇಶಕ್ಕೆ ವೈದ್ಯಕೀಯ ಆಮ್ಲಜನಕ ನೀಡುತ್ತಿಲ್ಲ ಎಂದು ಕೇಂದ್ರ ಗೃಹ ಇಲಾಖೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕುಟುಂಬದವರ ಜತೆಗಿದ್ದರೂ ಮಾಸ್ಕ್ ಧರಿಸಿ, ಮಾಸ್ಕ್ ಧರಿಸುವುದು ಕಡ್ಡಾಯ: ನೀತಿ ಆಯೋಗದ ಸದಸ್ಯ ಡಾ.ವಿ.ಕೆ. ಪೌಲ್
ವಿ.ಕೆ.ಪೌಲ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 26, 2021 | 5:42 PM

ದೆಹಲಿ : ಕೊರೊನಾವೈರಸ್ ವ್ಯಾಪಕವಾಗಿ ಹರಡುತ್ತಿರುವ ಈ ಹೊತ್ತಲ್ಲಿ ಅನಗತ್ಯವಾಗಿ ಹೊರಗೆ ಹೋಗಬೇಡಿ. ಕುಟುಂಬದವರ ಜತೆಗಿದ್ದರೂ ಮಾಸ್ಕ್ ಧರಿಸಿ. ಮಾಸ್ಕ್ ಧರಿಸುವುದು ಕಡ್ಡಾಯ. ನಿಮ್ಮ ಮನೆಗಳಿಗ ಅತಿಥಿಗಳನ್ನು ಆಹ್ವಾನಿಸಬೇಡಿ ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ. ಪೌಲ್ ಹೇಳಿದ್ದಾರೆ . ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕೊವಿಡ್ ಪರಿಸ್ಥಿತಿ ಲಸಿಕೆಯಿಂದ ಕಡಿಮೆ ಆಗುತ್ತದೆ ಎಂದು ನಾವು ನಿರಾಳವಾಗುವಂತಿಲ್ಲ. ಲಸಿಕೆ ವಿತರಣೆ ಮತ್ತಷ್ಟು ಹೆಚ್ಚಿಸಬೇಕು ಎಂದಿದ್ದಾರೆ.  ಮಹಿಳೆಯರು ಮಹಿಳೆಯರು ಋತುಚಕ್ರದ ವೇಳೆ ಲಸಿಕೆ ಪಡೆಯಬಹುದೇ ಎಂದು ಕೇಳಿದ ಪ್ರಶ್ನೆಗೆ ಹೌದು, ಋತುಚಕ್ರದ ವೇಳೆ ಲಸಿಕೆ ಪಡೆಯಬಹುದು. ಲಸಿಕೆ ಪಡೆಯುವುದನ್ನು ಮುಂದೂಡಬಾರದು ಎಂದಿದ್ದಾರೆ .

ದೇಶೀಯ ಆಕ್ಸಿಜನ್ ಉತ್ಪಾದನೆ 9103 ಟನ್​ಗೆ ಹೆಚ್ಚಳ: ಕೇಂದ್ರ ಗೃಹ ಇಲಾಖೆ ಮಾಹಿತಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿದೆ. ಈ ಮೊದಲು ದೇಶದಲ್ಲಿ 7,300 ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿತ್ತು. ಈಗ ದಿನಕ್ಕೆ 9,103 ಟನ್ ಉತ್ಪಾದಿಸಲಾಗುತ್ತಿದೆ. ಕೈಗಾರಿಕಾ ಉದ್ದೇಶಕ್ಕೆ ವೈದ್ಯಕೀಯ ಆಮ್ಲಜನಕ ನೀಡುತ್ತಿಲ್ಲ ಎಂದು ಕೇಂದ್ರ ಗೃಹ ಇಲಾಖೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಸೋಂಕಿತ ವ್ಯಕ್ತಿಯಿಂದ ದೈಹಿಕ ಅಂತರ ಕಾಪಾಡದಿದ್ದರೆ ಸಮಸ್ಯೆಯಾಗುತ್ತದೆ. ಅಂತರ ಕಾಪಾಡಿಕೊಳ್ಳದಿದ್ದರೆ ಓರ್ವ ಸೋಂಕಿತ ವ್ಯಕ್ತಿಯಿಂದ 30 ದಿನಗಳಲ್ಲಿ 406 ಜನರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಶೇ 50ರಷ್ಟು ಅಂತರ ಕಾಪಾಡಿದರೆ ಇದರ ಪ್ರಮಾಣವನ್ನು 15 ಜನರಿಗೆ ಕಡಿಮೆ ಮಾಡಬಹುದು. ಹೀಗಾಗಿ ಎಲ್ಲರೂ 6 ಅಡಿ ದೈಹಿಕ ಅಂತರ ಕಾಪಾಡಬೇಕು. 6 ಅಡಿ ದೈಹಿಕ ಅಂತರ ಕಾಪಾಡಿದರೆ ಕೊರೊನಾ ಹರಡಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ತಿಳಿಸಿದರು. ದೇಶದಲ್ಲಿ ಈವರೆಗೆ 14.19 ಕೋಟಿ ಡೋಸ್ ಕೊವಿಡ್ ಲಸಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಭಾರತವು ಆಕ್ಸಿಜನ್ ಟ್ಯಾಂಕರ್‌ಗಳನ್ನು ವಿದೇಶದಿಂದ ಖರೀದಿ ಅಥವಾ ಗುತ್ತಿಗೆ ಆಧಾರದ ಮೇಲೆ ತರಿಸುತ್ತಿದೆ . ಆಮ್ಲಜನಕ ಟ್ಯಾಂಕರ್‌ಗಳ ಸಾಗಣೆ ಒಂದು ದೊಡ್ಡ ಸವಾಲಾಗಿದೆ. ರಿಯಲ್ ಟೈಮ್ ಟ್ರ್ಯಾಕಿಂಗ್ ಬಳಸಿ, ನಾವು ಆಮ್ಲಜನಕ ಟ್ಯಾಂಕರ್‌ಗಳ ಚಲನೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಲವ್ ಅಗರವಾಲ್ ಹೇಳಿದ್ದಾರೆ. ಭಾರತದ ಏಳು ರಾಜ್ಯಗಳಲ್ಲಿ ತಲಾ ಒಂದು ಲಕ್ಷಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಕೇರಳ, ರಾಜಸ್ಥಾನ, ಛತ್ತೀಸಗಡ, ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಅವರು ತಿಳಿಸಿದರು.

ಈ ನಡುವೆ ದೇಶೀಯ ವಿಮಾನಗಳಲ್ಲಿ ಶೇ 80ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿ ಮೇ 31ರವರೆಗೆ ಅನ್ವಯವಾಗುವಂತೆ ಡಿಜಿಸಿಎ ಮತ್ತು ನಾಗರಿಕ ವಿಮಾನಯಾನ ಸಚಿವಾಲಯಗಳು ಆದೇಶ ಹೊರಡಿಸಿವೆ.

ಅನಗತ್ಯವಾಗಿ ಭಯಪಡಬೇಡಿ ನಾವು ಆಸ್ಪತ್ರೆಗಳನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು.ಆಕ್ಸಿಜನ್ ಮಿತವಾದ ಬಳಕೆ ಮುಖ್ಯ.ಇದೀಗ ಅನಗತ್ಯ ಭಯ ಹುಟ್ಟಿಕೊಂಡಿದೆ ಎಂದು ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕದಿಂದ ಭಾರತಕ್ಕೆ ಆಕ್ಸಿಜನ್​ ನೆರವು; ಇಂದು ದೆಹಲಿ ತಲುಪಲಿದೆ 5 ಟನ್​ ಆಮ್ಲಜನಕ ಸಾಂದ್ರಕಗಳನ್ನು ಹೊತ್ತ ಏರ್​ ಇಂಡಿಯಾ

Published On - 5:41 pm, Mon, 26 April 21

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಲಾಂಗ್ ಝಳಪಿಸಿದ ವಿನಯ್-ರಜತ್ ಮೇಲೆ ಬಿತ್ತು ಕೇಸ್; ಸಂಕಷ್ಟದಲ್ಲಿ ಗೆಳೆಯರು
ಲಾಂಗ್ ಝಳಪಿಸಿದ ವಿನಯ್-ರಜತ್ ಮೇಲೆ ಬಿತ್ತು ಕೇಸ್; ಸಂಕಷ್ಟದಲ್ಲಿ ಗೆಳೆಯರು