Coronavirus: ವಿಶ್ವದಲ್ಲಿ ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ದೇಶಗಳ ಪಟ್ಟಿಯಲ್ಲಿ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ಭಾರತ

Covid 19 in India: ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 3,19,18,601ಆಗಿದ್ದು, ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಭಾರತದಲ್ಲಿ ಒಟ್ಟು ಕೊವಿಡ್ ರೋಗಿಗಳ ಸಂಖ್ಯೆ 1,35,27,717ಕ್ಕೇರಿದ್ದು ಎರಡನೇ ಸ್ಥಾನದಲ್ಲಿದೆ.

Coronavirus: ವಿಶ್ವದಲ್ಲಿ ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ದೇಶಗಳ ಪಟ್ಟಿಯಲ್ಲಿ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ಭಾರತ
ಗುರುಗ್ರಾಮದಲ್ಲಿ ಕೊರೊನಾ ಟೆಸ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 12, 2021 | 4:44 PM

ದೆಹಲಿ: ಅತೀ ಹೆಚ್ಚು ಕೊವಿಡ್ 19 ರೋಗಿಗಳಿರುವ ದೇಶಗಳ ಪಟ್ಟಿಯಲ್ಲಿ ಬ್ರೆಜಿಲ್ ದೇಶವನ್ನು ಹಿಂದಿಕ್ಕಿ ಭಾರತ ಎರಡನೇ ಸ್ಥಾನಕ್ಕೇರಿದೆ.ವರ್ಲ್ಡೊ ಮೀಟರ್ ಅಂಕಿ ಅಂಶಗಳ ಪ್ರಕಾರ ಜಗತ್ತಿನಲ್ಲಿ ಕೊವಿಡ್ ರೋಗಿಗಳ ಸಂಖ್ಯೆ 13,67,33,512 (13.67 ಕೋಟಿ)  ಆಗಿದೆ. ಇಲ್ಲಿಯವರೆಗೆ 1,04,982 ಹೊಸ ಪ್ರಕರಣಗಳು ವರದಿ ಆಗಿದ್ದು ಸಾವಿನ ಸಂಖ್ಯೆ 29,51,400ಕ್ಕೇರಿದೆ. ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ 3,19,18,601ಆಗಿದ್ದು, ಅತೀ ಹೆಚ್ಚು ಕೊವಿಡ್ ರೋಗಿಗಳಿರುವ ದೇಶಗಳ ಪಟ್ಟಿಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಭಾರತದಲ್ಲಿ ಒಟ್ಟು ಕೊವಿಡ್ ರೋಗಿಗಳ ಸಂಖ್ಯೆ 1,35,27,717ಕ್ಕೇರಿದ್ದು ಎರಡನೇ ಸ್ಥಾನದಲ್ಲಿದೆ.

ಭಾರತದ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 1,68,912 ಹೊಸ ಕೊವಿಡ್ ಪ್ರಕರಣ ಪತ್ತೆಯಾಗಿದ್ದು 904 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ 12,01,009 ಸಕ್ರಿಯ ಪ್ರಕರಣಗಳಿದ್ದು ಸಾವಿನ ಸಂಖ್ಯೆ 12,01,009ಕ್ಕೇರಿದೆ. ಇಲ್ಲಿಯವರೆಗೆ 10,45,28,565 ಮಂದಿಗೆ ಕೊವಿಡ್ ಲಸಿಕೆ ನೀಡಲಾಗಿದೆ.

ಮೂರನೇ ಸ್ಥಾನದಲ್ಲಿದೆ ಬ್ರೆಜಿಲ್ ಈವರೆಗೆ 2ನೇ ಸ್ಥಾನದಲ್ಲಿದ್ದ ಬ್ರೆಜಿಲ್ ಸೋಮವಾರ ಮೂರನೇ ಸ್ಥಾನಕ್ಕೆ ಇಳಿದಿದ್ದು, ಇಲ್ಲಿ ಕೊವಿಡ್ ರೋಗಿಗಳ ಸಂಖ್ಯೆ 1,34,82,023 ಆಗಿದೆ. ನಾಲ್ಕನೇ ಸ್ಥಾನದಲ್ಲಿರುವ ಫ್ರಾನ್ಸ್​ನಲ್ಲಿ 50,21,865 ಕೊವಿಡ್ ಪ್ರಕರಣಗಳಿದ್ದು, 45,89,209 ಪ್ರಕರಣಗಳಿರುವ ರಷ್ಯಾ ಐದನೇ ಸ್ಥಾನದಲ್ಲಿದೆ. 6ನೇ ಸ್ಥಾನದಲ್ಲಿರುವ ಬ್ರಿಟನ್ ನಲ್ಲಿ 43,69,775, ಏಳನೇ ಸ್ಥಾನದಲ್ಲಿರುವ ಟರ್ಕಿಯಲ್ಲಿ 38,49,011, ಎಂಟನೇ ಸ್ಥಾನದಲ್ಲಿರುವ ಇಟಲಿಯಲ್ಲಿ 37,69,814, ಒಂಭತ್ತನೇ ಸ್ಥಾನದಲ್ಲಿರುವ ಸ್ಪೇನ್​ನಲ್ಲಿ 33,47,512 ಮತ್ತು 30,12,158 ಕೊವಿಡ್ ಪ್ರಕರಣಗಳೊಂದಿಗೆ ಜರ್ಮಿನಿ 10ನೇ ಸ್ಥಾನದಲ್ಲಿದೆ.

ಕಳೆದ 11 ದಿನಗಳಲ್ಲಿ ಪುಣೆಯಲ್ಲಿ ಸಾವಿಗೀಡಾದವರ ಸಂಖ್ಯೆ 446 ಮಹಾರಾಷ್ಟ್ರದಲ್ಲಿ ಕೊವಿಡ್ ಎರಡನೇ ಅಲೆ ಪರಿಣಾಮ ಇಲ್ಲಿನ ಪುಣೆ ಜಿಲ್ಲೆಯಲ್ಲಿ ಕಳೆದ 11 ದಿನಗಳಲ್ಲಿ 446ಮಂದಿ ಸಾವಿಗೀಡಾಗಿದ್ದಾರೆ. ಅಂದರೆ ಸರಾಸರಿ ದಿನವೊಂದಕ್ಕೆ 41 ಮರಣ ಇಲ್ಲಿ ಸಂಭವಿಸಿದೆ. ಕಳೆದ ತಿಂಗಳಿನಿಂದಲೇ ಇಲ್ಲಿ ವೆಂಟಿಲೇಟರ್ ಇರುವ ಐಸಿಯು ಬೆಡ್​ಗಳ ಕೊರತೆ ಕಂಡು ಬಂದಿದ್ದು ರೋಗಿಗಳು ಸಂಕಷ್ಟಕ್ಕೀಡಾಗಿದ್ದಾರೆ.

ಕೊವಿಡ್​ನಿಂದ ಮುಂಬೈ ಪೊಲೀಸ್ ಸಿಬ್ಬಂದಿ ಮೃತ ಸೋಮವಾರ ಮುಂಬೈಯಲ್ಲಿ ಕೊವಿಡ್​ನಿಂದ ಸಬ್ ಇನ್ಸ್​ಪೆಕ್ಟರ್ ಮೃತಪಟ್ಟಿದ್ದಾರೆ. ದೇಶದಲ್ಲಿ ಕೊವಿಡ್ ಎರಡನೇ ಅಲೆಯಿಂದಾಗಿ ಮುಂಬೈ ಪೊಲೀಸ್ ಪಡೆಯಲ್ಲಿ ಸಂಭವಿಸಿದ ಮೊದಲ ಮರಣ ಇದಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇಲ್ಲಿನ ವಕೋಲ ಪೊಲೀಸ್ ಠಾಣೆಯಲ್ಲಿ ಎಸ್.ಐ ಆಗಿದ್ದ ಮೋಹನ್ ದಗಾಡೆ (52) ಅವರು ಬಾಂದ್ರಾ- ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಕೊವಿಡ್ ಕೇಂದ್ರದಲ್ಲಿ ಏಪ್ರಿಲ್ 3ರಂದು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು. ಸೋಮವಾರ ಬೆಳಗ್ಗೆ ದಗಾಡೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಕೊವಿಡ್ ನಿಯಂತ್ರಣ ಕ್ರಮ ಕೈಗೊಳ್ಳುವಲ್ಲಿ ಮೂರು ರಾಜ್ಯಗಳು ವಿಫಲ ಪಂಜಾಬ್, ಮಹಾರಾಷ್ಟ್ರ ಮತ್ತು ಛತ್ತೀಸಗಡದಲ್ಲಿ ಕೊವಿಡ್ ರೋಗಿಗಳ ಸಂಖ್ಯೆ ಏರುತ್ತಲೇ ಇದ್ದು ಇಲ್ಲಿನ ಪರಿಸ್ಥಿತಿಯ ಬಗ್ಗೆ ಅಧ್ಯಯನ ಮಾಡಲು ಕೇಂದ್ರ ಸರ್ಕಾರ ತಜ್ಞರ ತಂಡವನ್ನು ಕಳುಹಿಸಿತ್ತು. ಈ ತಂಡವು ಮಹಾರಾಷ್ಟ್ರದ 30, ಛತ್ತೀಸಗಡದ 11 ಮತ್ತು ಪಂಜಾಬ್​ನ 9 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದೆ. ತಂಡಗಳ ವರದಿ ಪ್ರಕಾರ ಈ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆ ಸರಿಯಾಗಿಲ್ಲ, ಆರ್​ಟಿ -ಪಿಸಿಆರ್ ಪರೀಕ್ಷೆಗಳ ಸೌಕರ್ಯಗಳು ಇಲ್ಲ. ಆರೋಗ್ಯ ಕಾರ್ಯಕರ್ತರ ಕೊರತೆ ಇದೆ. ಒಂದು ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆಯೂ ನಡೆದಿದೆ. ಈ ರಾಜ್ಯಗಳು ಕೊವಿಡ್ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರ ನಿಯೋಜಿಸಿದ ತಜ್ಞರ ತಂಡ ಹೇಳಿದೆ.

ಮಹಾರಾಷ್ಟ್ರದಲ್ಲಿ 10 ಮತ್ತು 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮಹಾರಾಷ್ಟ್ರ ಸರ್ಕಾರ ಮುಂದೆ ಹಾಕಿದೆ. 10ನೇ ತರಗತಿ ಪರೀಕ್ಷೆ ಜೂನ್ ವೇಳೆ ಹಾಗೂ 12ನೇ ತರಗತಿ ಪರೀಕ್ಷೆಗಳು ಮೇ ಅಂತ್ಯದ ವೇಳೆ ನಡೆಸುವ ಬಗ್ಗೆ ಶಿಕ್ಷಣ ಸಚಿವರಾದ ವರ್ಷಾ ಗಾಯಕ್​ವಾಡ್ ಮಾಹಿತಿ ನೀಡಿದ್ದಾರೆ. ಕೊರೊನಾ ಪರಿಸ್ಥಿತಿಯನ್ನು ಅವಲಂಬಿಸಿ ಪರೀಕ್ಷಾ ದಿನಾಂಕ ಘೋಷಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ:  ಕೊವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಮಾತ್ರ ಸಾಕಾಗುವುದಿಲ್ಲ; ಹೊಸ ರೂಪಾಂತರಿ ವೈರಸ್ ಆಟವೇ ಬೇರೆ 

Coronavirus India Update: ಕಳೆದ 24 ಗಂಟೆಗಳಲ್ಲಿ 1.68 ಲಕ್ಷ ಹೊಸ ಕೊವಿಡ್ ಪ್ರಕರಣ; ಸುಪ್ರೀಂಕೋರ್ಟ್​ನ ಶೇ 50ರಷ್ಟು ಸಿಬ್ಬಂದಿಗೆ ಸೋಂಕು

( Covid 19 India surpassed Brazil tally as Worlds second worst hit country in the world)

Published On - 4:41 pm, Mon, 12 April 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ