Covishield Price: ಕೋವಿಶೀಲ್ಡ್ ಲಸಿಕೆ 300 ರೂಪಾಯಿಗೆ ರಾಜ್ಯ ಸರ್ಕಾರಗಳಿಗೆ ಒದಗಿಸಲು ಸೇರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಮ್ಮತಿ
ಕೊರೊನಾ ಸೋಂಕು ನಿರೋಧಕ ಲಸಿಕೆ ಕೋವಿಶೀಲ್ಡ್ನ ಪ್ರತಿ ಬಾಟಲಿಯನ್ನು (ವಯಲ್) ₹ 300ಕ್ಕೆ ರಾಜ್ಯ ಸರ್ಕಾರಕ್ಕೆ ಒದಗಿಸಲು ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನವಾಲಾ ಒಪ್ಪಿಕೊಂಡಿದ್ದಾರೆ.
ಮುಂಬೈ: ಆಕ್ಸ್ಫರ್ಡ್ ವಿಶ್ವವಿದ್ಯಾಲಯ, ಆಸ್ಟ್ರಾಜೆನೆಕಾ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಕೊರೊನಾ ಸೋಂಕು ನಿರೋಧಕ ಲಸಿಕೆ ಕೋವಿಶೀಲ್ಡ್ನ ಪ್ರತಿ ಡೋಸ್ ₹ 300ಕ್ಕೆ ರಾಜ್ಯ ಸರ್ಕಾರಕ್ಕೆ ಒದಗಿಸಲು ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಧಾರ್ ಪೂನಾವಾಲಾ ಒಪ್ಪಿಕೊಂಡಿದ್ದಾರೆ.
ಕಂಪನಿಯು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇರುವ ಸಂಪನ್ಮೂಲದಲ್ಲಿಯೇ ಹೆಚ್ಚಿನ ಸಂಖ್ಯೆಯ ಲಸಿಕೆ ಬಾಟಲಿಗಳನ್ನು ಖರೀದಿಸಲು ರಾಜ್ಯಗಳಿಗೆ ಅನುಕೂಲ ಮಾಡಿಕೊಡಲೆಂದು ‘ಉದಾರ’ ಮನೋಭಾವದಿಂದ ಕಂಪನಿಯು ಲಸಿಕೆಯ ಬೆಲೆಯಲ್ಲಿ ಶೇ 25ರಷ್ಟು ರಿಯಾಯ್ತಿ ನೀಡಲು ನಿರ್ಧರಿಸಿದೆ. ಪ್ರತಿ ಡೋಸ್ ಇನ್ನು ಮುಂದೆ ರಾಜ್ಯ ಸರ್ಕಾರಗಳಿಗೆ ₹ 300ಕ್ಕೆ ಲಭ್ಯವಾಗಲಿದೆ ಎಂದು ಹೇಳಿದೆ.
ದೇಶದ ಅತಿದೊಡ್ಡ ಲಸಿಕೆ ಉತ್ಪಾದಕಾ ಕಂಪನಿಯಾಗಿರುವ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಈ ಹಿಂದೆ ರಾಜ್ಯ ಸರ್ಕಾರಗಳಿಗೆ ಕೋವಿಶೀಲ್ಡ್ನ ಪ್ರತಿ ಡೋಸ್ ₹ 400ಕ್ಕೆ ಒದಗಿಸಲು ಒಪ್ಪಿಕೊಂಡಿತ್ತು. ಖಾಸಗಿ ಆಸ್ಪತ್ರೆಗಳಿಗೆ ಈ ದರ ₹ 600 ಆಗಿರುತ್ತದೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಆಕ್ಸ್ಫರ್ಡ್-ಆಸ್ಟ್ರಜೆನೆಕಾ ಲಸಿಕೆಯ ಭಾರತೀಯ ಆವೃತ್ತಿಯಾಗಿರುವ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ನೀಡಲಾಗುತ್ತಿದೆ. ಇದರ ಜೊತೆಗೆ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನೂ ಭಾರತದಲ್ಲಿ ನೀಡಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ಕೋವ್ಯಾಕ್ಸಿನ್ ₹ 600ಕ್ಕೆ ಸಿಗುತ್ತಿದೆ. ಖಾಸಗಿ ಆಸ್ಪತ್ರೆಗಳು ₹ 1200 ಪಾವತಿಸಿ ಪಡೆದುಕೊಳ್ಳುತ್ತಿವೆ.
As a philanthropic gesture on behalf of @SerumInstIndia, I hereby reduce the price to the states from Rs.400 to Rs.300 per dose, effective immediately; this will save thousands of crores of state funds going forward. This will enable more vaccinations and save countless lives.
— Adar Poonawalla (@adarpoonawalla) April 28, 2021
(Covishield prices for states reduced to Rs 300 per dose says Adar Poonawalla)
ಇದನ್ನೂ ಓದಿ: ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರ 6-8 ವಾರಗಳಿಷ್ಟಿರಬೇಕು ಎಂದ ಕೇಂದ್ರ ಸರ್ಕಾರ
ಇದನ್ನೂ ಓದಿ: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ಪಡೆಯಲು ನೋಂದಣಿ ಆರಂಭ; ಕ್ರ್ಯಾಷ್ ಆಯ್ತು ಕೊವಿನ್ ಪೋರ್ಟಲ್
Published On - 5:59 pm, Wed, 28 April 21