AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Vaccine: ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್​ನಲ್ಲಿ ಮಾನ್ಯತೆ ಇಲ್ಲ; ನಿಯಮ ಬದಲಾವಣೆಗೆ ಭಾರತ ಒತ್ತಾಯ

Covishield Vaccination | ಕೋವಿಶೀಲ್ಡ್ 2 ಡೋಸ್ ಲಸಿಕೆ ಹಾಕಿಸಿಕೊಂಡ ಭಾರತೀಯರು ಇಂಗ್ಲೆಂಡ್​ನಲ್ಲಿ ಮತ್ತೆ 10 ದಿನ ಕ್ವಾರಂಟೈನ್ ಆಗಬೇಕಾದುದು ಕಡ್ಡಾಯ ಎಂದು ನಿಯಮ ಜಾರಿಗೆ ತರಲಾಗಿದೆ. ಇದಕ್ಕೆ ಭಾರತದಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ.

Covid Vaccine: ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್​ನಲ್ಲಿ ಮಾನ್ಯತೆ ಇಲ್ಲ; ನಿಯಮ ಬದಲಾವಣೆಗೆ ಭಾರತ ಒತ್ತಾಯ
ಕೋವಿಶೀಲ್ಡ್
TV9 Web
| Edited By: |

Updated on: Sep 21, 2021 | 5:41 PM

Share

ನವದೆಹಲಿ: ಭಾರತದಲ್ಲಿ ಈಗಾಗಲೇ ಕೇಂದ್ರ ಸರ್ಕಾರ ಉಚಿತ ಕೊವಿಡ್ ಲಸಿಕೆ ಅಭಿಯಾನ ಶುರು ಮಾಡಿದೆ. ಆದರೆ, ಭಾರತದ ಕೊವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಕೆಲವು ದೇಶಗಳಲ್ಲಿ ಮಾನ್ಯತೆ ಇಲ್ಲ ಎಂದು ಈ ಹಿಂದೆ ಹೇಳಲಾಗಿತ್ತು. ಇದೀಗ ಕೋವಿಶೀಲ್ಡ್ ಎರಡು ಡೋಸ್​ಗಳನ್ನು ಹಾಕಿಸಿಕೊಂಡರೂ ಇಂಗ್ಲೆಂಡ್​ನಲ್ಲಿ ಅದಕ್ಕೆ ಮಾನ್ಯತೆ ಇಲ್ಲ. ಕೋವಿಶೀಲ್ಡ್ 2 ಡೋಸ್ ಲಸಿಕೆ ಹಾಕಿಸಿಕೊಂಡ ಭಾರತೀಯರು ಇಂಗ್ಲೆಂಡ್​ನಲ್ಲಿ ಮತ್ತೆ 10 ದಿನ ಕ್ವಾರಂಟೈನ್ ಆಗಬೇಕಾದುದು ಕಡ್ಡಾಯ ಎಂದು ನಿಯಮ ಜಾರಿಗೆ ತರಲಾಗಿದೆ. ಇದಕ್ಕೆ ಭಾರತದಿಂದ ಭಾರೀ ಆಕ್ಷೇಪ ವ್ಯಕ್ತವಾಗಿದೆ.

ಆಸ್ಟ್ರಾಜೆನಿಕಾ ಲಸಿಕೆಯ ಭಾರತದ ಆವೃತ್ತಿಯಾದ ಕೋವಿಶೀಲ್ಡ್‌ನ ಎರಡು ಡೋಸ್ ಪಡೆದಿದ್ದರೂ ಅವರಿಗೆ ಇನ್ನೂ ಲಸಿಕೆ ನೀಡಲಾಗಿಲ್ಲ ಎಂದು ಇಂಗ್ಲೆಂಡ್​ನಲ್ಲಿ ಪರಿಗಣಿಸಲಾಗುತ್ತಿದೆ. ಇಂಗ್ಲೆಂಡ್ ಮಾತ್ರವಲ್ಲದೆ ಸ್ಕಾಟ್ಲೆಂಡ್, ಉತ್ತರ ಐರ್ಲೆಂಡ್ ದೇಶಗಳಲ್ಲಿ ಕೂಡ ಈ ಕುರಿತು ಹೊಸ ಕೊವಿಡ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ದೇಶಗಳಲ್ಲಿ ಭಾರತದ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೂ ಲಸಿಕೆಗೂ ಮಾನ್ಯತೆ ಇಲ್ಲ. ಹೀಗಾಗಿ, ಭಾರತೀಯರು ಇಂಗ್ಲೆಂಡ್​ಗೆ ಹೋದರೆ 10 ದಿನಗಳ ಕ್ವಾರಂಟೈನ್‌ ಕಡ್ಡಾಯವಾಗಿದೆ.

ಅಕ್ಟೋಬರ್ 4ರಿಂದ ಇಂಗ್ಲೆಂಡ್​ನಲ್ಲಿ ಈ ನಿಯಮ ಜಾರಿಗೆ ಬರಲಿದೆ. ಕೋವಿಶೀಲ್ಡ್ ಅನ್ನೇ ಬ್ರಿಟನ್​ನಲ್ಲಿ ಅಸ್ಟ್ರಾಜೆನಿಕಾ ಲಸಿಕೆ ಎಂಬ ಹೆಸರಿನಲ್ಲಿ ನೀಡಲಾಗುತ್ತಿದೆ. ಆದರೂ ಕೋವಿಶೀಲ್ಡ್​ಗೆ ಮಾನ್ಯತೆ ನೀಡದಿರುವುದು ಭಾರತೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಇಂಗ್ಲೆಂಡ್​ನ ಹೊಸ ನಿಯಮದ ಪ್ರಕಾರ, ಆಕ್ಸ್‌ಫರ್ಡ್- ಆಸ್ಟ್ರಾಜೆನಿಕಾ, ಫೈಜರ್- ಬಯೋಎನ್‌ಟೆಕ್‌ ಅಥವಾ ಮಾಡರ್ನಾದ ಡಬಲ್‌ ಡೋಸ್‌ ಲಸಿಕೆಯ ಎರಡೂ ಡೋಸ್‌ ಪಡೆದವರು ಅಥವಾ ಸಿಂಗಲ್ ಡೋಸ್‌ನ ಜಾನ್ಸನ್‌ ಆ್ಯಂಡ್ ಜಾನ್ಸನ್ ಲಸಿಕೆ ಪಡೆದವರನ್ನು ಮಾತ್ರ ಸಂಪೂರ್ಣವಾಗಿ ಲಸಿಕೆ ಪಡೆದವರು ಎಂದು ಪರಿಗಣಿಸಲಾಗುತ್ತದೆ.

ಆಸ್ಟ್ರೇಲಿಯಾ, ಆ್ಯಂಟಿಗುವಾ ಮತ್ತು ಬಾರ್ಬುಡಾ, ಬಾರ್ಬಡೋಸ್, ಬಹ್ರೇನ್, ಬ್ರೂನಿ, ಕೆನಡಾ, ಡೊಮಿನಿಕಾ, ಇಸ್ರೇಲ್, ಜಪಾನ್, ಕುವೈತ್, ಮಲೇಷ್ಯಾ, ನ್ಯೂಜಿಲ್ಯಾಂಡ್, ಕತಾರ್, ಸೌದಿ ಅರೇಬಿಯಾ, ಸಿಂಗಾಪುರ, ದಕ್ಷಿಣ ಕೊರಿಯಾ ಅಥವಾ ತೈವಾನ್‌ನ ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಅಡಿಯಲ್ಲಿ ಲಸಿಕೆ ಪಡೆದವರನ್ನು ಮಾತ್ರ ಸಂಪೂರ್ಣವಾಗಿ ಲಸಿಕೆ ಪಡೆದವರು ಎಂದು ಪರಿಗಣಿಸಲಾಗುತ್ತದೆ.

ಈ ಹೊಸ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿರುವ ಭಾರತದ ವಿದೇಶಾಂಗ ಇಲಾಖೆ ಇದು ತಾರತಮ್ಯ ನೀತಿ ಎಂದಿದೆ. ಈ ಬಗ್ಗೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಘಾಲ್ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಇಂಗ್ಲೆಂಡ್ ವಿದೇಶಾಂಗ ಇಲಾಖೆ ಸಚಿವರ ಜೊತೆ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಮಾತನಾಡಿದ್ದಾರೆ. ಅವರು ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವ ಕೆಲ ಭರವಸೆ ನೀಡಿದ್ದಾರೆ. ನಾವು ನಮ್ಮ ಸ್ನೇಹಿ ರಾಷ್ಟ್ರಗಳ ಲಸಿಕೆಗೆ ಮಾನ್ಯತೆ ನೀಡಿದ್ದೇವೆ. ಇವೆಲ್ಲವೂ ಪರಸ್ಪರ ಮಾನ್ಯತೆ ನೀಡುವ ಕ್ರಮಗಳು. ಒಂದು ವೇಳೆ ನಮಗೆ ತೃಪ್ತಿ ಆಗದಿದ್ದರೆ ಕ್ರಮಕ್ಕೆ ಅವಕಾಶ ಇದೆ. ನಾವು ಕೂಡ ಇಂಗ್ಲೆಂಡ್‌ನ ಲಸಿಕೆಗೆ ಮಾನ್ಯತೆ ನೀಡದಿರಲು ಸಾಧ್ಯವಿದೆ ಎನ್ನುವ ಮೂಲಕ ಇಂಗ್ಲೆಂಡ್​ಗೆ ಪರೋಕ್ಷ ಎಚ್ಚರಿಕೆ ರವಾನಿಸಿದ್ದಾರೆ.

ಸದ್ಯ ಇಂಗ್ಲೆಂಡ್‌ನಲ್ಲಿ ಕೊವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿಲ್ಲ. ಭಾರತದಲ್ಲಿ ತಯಾರಿಸುತ್ತಿರುವ ಕೊವಿಶೀಲ್ಡ್‌ಗೆ ಮಾನ್ಯತೆ ಇಲ್ಲ. ಕೊವಿಶೀಲ್ಡ್ ಪಡೆದವರನ್ನು ಲಸಿಕೆ ಪಡೆದಿಲ್ಲ ಎಂದು ಪರಿಗಣನೆ ಮಾಡಲಾಗುತ್ತಿದೆ. ಅ.4ರಿಂದ ಹೊಸ ನಿಯಮ ಜಾರಿಗೆ ತರುತ್ತಿರುವ ಇಂಗ್ಲೆಂಡ್​ನಲ್ಲಿ ಭಾರತೀಯರಿಗೆ 5-10 ದಿನ ಕ್ವಾರಂಟೈನ್ ಮಾಡಲಾಗುತ್ತದೆ. ಕೊರೊನಾ ಟೆಸ್ಟ್‌ ಮಾಡಿಸಬೇಕೆಂದು ಹೊಸ ನಿಯಮ ಜಾರಿ ಮಾಡಲಾಗಿದೆ. ಇಂಗ್ಲೆಂಡ್‌ನಲ್ಲಿ ಈ ನಿಯಮ ಬದಲಾವಣೆಗೆ ಭಾರತ ಒತ್ತಾಯ ಮಾಡಿದೆ.

ಇದನ್ನೂ ಓದಿ: Covid-19: ಕೋವಿಶೀಲ್ಡ್​ ಲಸಿಕೆಯ ಡೋಸ್​ಗಳ ನಡುವೆ ಅಂತರ ತಗ್ಗಿಸುವ ಪ್ರಸ್ತಾಪವಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ಜಾನ್ಸನ್​ ಆ್ಯಂಡ್ ಜಾನ್ಸನ್​ ಕಂಪನಿಯ ಏಕ ಡೋಸ್ ಕೊರೊನಾ​ ಲಸಿಕೆ ಅಕ್ಟೋಬರ್​ನಿಂದ ದೇಶದಲ್ಲಿ ಲಭ್ಯ; ಅಭಿಯಾನಕ್ಕೆ ಮತ್ತಷ್ಟು ಬಲ

(Covishield Vaccine UK Releases New Travel Rules 10 Day Quarantine Mandatary For Fully Vaccinated Indians)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ