Cow Dung: ಗೋವಿನ ಸಗಣಿಯಿಂದ ಮಾಡಿದ ಮನೆಯ ಮೇಲೆ ಪರಮಾಣು ವಿಕರಣದ ಪರಿಣಾಮವಿಲ್ಲ: ಗುಜರಾತ್ ನ್ಯಾಯಾಲಯ

ಗೋವಿನ ಸಗಣಿಯಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ಪ್ರಭಾವಿತವಾಗುವುದಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ ಎಂದು ಗುಜರಾತ್ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Cow Dung: ಗೋವಿನ ಸಗಣಿಯಿಂದ ಮಾಡಿದ ಮನೆಯ ಮೇಲೆ ಪರಮಾಣು ವಿಕರಣದ ಪರಿಣಾಮವಿಲ್ಲ: ಗುಜರಾತ್ ನ್ಯಾಯಾಲಯ
ಗೋವುಗಳು
Follow us
ನಯನಾ ರಾಜೀವ್
|

Updated on: Jan 24, 2023 | 10:17 AM

ಗೋವಿನ ಸಗಣಿಯಿಂದ ಮಾಡಿದ ಮನೆಗಳು ಪರಮಾಣು ವಿಕಿರಣದಿಂದ ಪ್ರಭಾವಿತವಾಗುವುದಿಲ್ಲ ಎಂದು ವಿಜ್ಞಾನವು ಸಾಬೀತುಪಡಿಸಿದೆ ಎಂದು ಗುಜರಾತ್ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಗೋವಿನ ಸಗಣಿಯಿಂದ ಮಾಡಿದ ಮನೆಯ ಮೇಲೆ ಪರಮಾಣು ವಿಕಿರಣದ ಪರಿಣಾಮವಾಗುವುದಿಲ್ಲ, ಗೋಹತ್ಯೆ ನಿಲ್ಲಿಸಿದರೆ, ಪ್ರಪಂಚದ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳುತ್ತವೆ ಎಂದು ಹೇಳಿದ್ದಾರೆ. ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಯುವಕನಿಗೆ ಗುಜರಾತ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್‌ನ ತಾಪಿ ಜಿಲ್ಲಾ ನ್ಯಾಯಾಲಯವು ಮಹಾರಾಷ್ಟ್ರದಿಂದ ಅಕ್ರಮವಾಗಿ ದನಗಳನ್ನು ತಂದಿದ್ದ 22 ವರ್ಷದ ಯುವಕನನ್ನು ತಪ್ಪಿತಸ್ಥ ಎಂದು ಘೋಷಿಸಿದೆ.

ಶಿಕ್ಷೆಯ ತೀರ್ಪು ಪ್ರಕಟಿಸಿದ ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಮೀರ್ ವಿನೋದಚಂದ್ರ ವ್ಯಾಸ್, ಗೋವು ಕೇವಲ ಪ್ರಾಣಿಯಲ್ಲ, ಅದು ತಾಯಿ. ಯಾವ ದಿನ ಹಸುವಿನ ರಕ್ತವು ಭೂಮಿಯ ಮೇಲೆ ಬೀಳುವುದಿಲ್ಲವೋ ಅಂದಿನಿಂದ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಭೂಮಿಯ ಕಲ್ಯಾಣವಾಗುತ್ತದೆ ಎಂದಿದ್ದಾರೆ.

ವಾಸ್ತವವಾಗಿ ಮೊಹಮ್ಮದ್ ಅಮೀನ್ ಅವರನ್ನು ಆಗಸ್ಟ್ 27, 2020 ರಂದು 16 ಕ್ಕೂ ಹೆಚ್ಚು ಹಸುಗಳು ಮತ್ತು ಅದರ ಕರುಗಳೊಂದಿಗೆ ಅಕ್ರಮವಾಗಿ ಬಂಧಿಸಲಾಯಿತು. ಎಲ್ಲ ಜಾನುವಾರುಗಳನ್ನು ಟ್ರಕ್‌ನಲ್ಲಿ ತುಂಬಿಸಲಾಗಿದ್ದು, ಅವುಗಳಿಗೆ ಕುಳಿತುಕೊಳ್ಳಲು, ತಿನ್ನಲು ಮತ್ತು ಕುಡಿಯಲು ಸರಿಯಾದ ವ್ಯವಸ್ಥೆ ಇರಲಿಲ್ಲ.

ಅಂದಿನಿಂದ, ಅಮೀನ್ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದರು. ನ್ಯಾಯಾಧೀಶರು ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ನ್ಯಾಯಾಧೀಶರು ತಮ್ಮ ಆದೇಶದಲ್ಲಿ, ಹಸುವಿನ ಧಾರ್ಮಿಕ ಅಂಶಗಳನ್ನು ಮಾತ್ರವಲ್ಲದೆ ಅದರ ಆರ್ಥಿಕ, ಸಾಮಾಜಿಕ, ವೈಜ್ಞಾನಿಕ ಮತ್ತು ಆರೋಗ್ಯ ಪ್ರಯೋಜನಗಳನ್ನು ಪರಿಗಣಿಸುವ ಅಗತ್ಯವನ್ನು ಸೂಚಿಸಿದರು.

ಈಗ ಯಾಂತ್ರೀಕೃತ ಕಸಾಯಿಖಾನೆಗಳು ಗೋವುಗಳನ್ನು ಕೊಲ್ಲಲು ಬಂದಿವೆ ಎಂದು ನ್ಯಾಯಾಧೀಶರು ಹೇಳಿದರು. ಅವುಗಳನ್ನು ಹತ್ಯೆ ಮಾಡಲಾಗುತ್ತಿದ್ದು, ಅವುಗಳ ಜೀವಕ್ಕೆ ದೊಡ್ಡ ಅಪಾಯವಿದೆ. ಆದೇಶದಲ್ಲಿ, ಮಾಂಸಾಹಾರಿಗಳು ಮಾಂಸವನ್ನು ಸೇವಿಸುತ್ತಾರೆ ಮತ್ತು ಇದಕ್ಕಾಗಿ ಹಸುವಿನ ಮಾಂಸವನ್ನು ಸಹ ಬಳಸಲಾಗುತ್ತಿದೆ. ಹಸುವಿನ ಉತ್ಪನ್ನಗಳು ಮಾನವ ಜೀವನಕ್ಕೆ ತುಂಬಾ ಉಪಯುಕ್ತವಾಗಿವೆ. ಈ ಉತ್ಪನ್ನಗಳೆಂದರೆ ಹಾಲು, ಮೊಸರು, ತುಪ್ಪ, ಹಸುವಿನ ಸಗಣಿ ಮತ್ತು ಗೋಮೂತ್ರ.

ಬಾರ್ ಮತ್ತು ಬೆಂಚ್ ವರದಿಯ ಪ್ರಕಾರ, ನವೆಂಬರ್‌ನಲ್ಲಿ ನೀಡಲಾದ ಆದೇಶದಲ್ಲಿ, ತ್ರಿದೇವ (ಬ್ರಹ್ಮ, ವಿಷ್ಣು, ಮಹೇಶ್) ಗೋವುಗಳಿಗಿಂತ ಭಿನ್ನವಾಗಿಲ್ಲ ಎಂದು ನ್ಯಾಯಾಧೀಶರು ಹೇಳಿದ್ದಾರೆ. ಧರ್ಮವೂ ಹಸುವಿನಿಂದಲೇ ಹುಟ್ಟಿದ್ದು, ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ಗೋಹತ್ಯೆ ಇಂದಿಗೂ ನಿಂತಿಲ್ಲ, ಅದಕ್ಕೆ ವ್ಯತಿರಿಕ್ತವಾಗಿ ಅದು ಉತ್ತುಂಗಕ್ಕೇರುತ್ತಿದೆ.

ಜನರು ಗೋವಿನ ಪ್ರಾಮುಖ್ಯತೆಯನ್ನು ಅರಿತುಕೊಳ್ಳಲು, ನ್ಯಾಯಾಧೀಶರು ಕೆಲವು ಸಂಸ್ಕೃತ ಶ್ಲೋಕಗಳನ್ನು ಉಲ್ಲೇಖಿಸಿದರು ಮತ್ತು ಧರ್ಮವು ಗೋವಿನಿಂದ ಹುಟ್ಟಿದೆ ಎಂದು ಹೇಳಿದರು ಏಕೆಂದರೆ ಧರ್ಮವು ಗೋವಿನ ಮಗನಾದ ವೃಷಭ (ಗೂಳಿ) ರೂಪದಲ್ಲಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಮತ್ತು ಹತ್ಯೆ ಮಾಡುತ್ತಿರುವುದು ನೋವಿನ ಸಂಗತಿಯಾಗಿದ್ದು, ಭಾರತದಲ್ಲಿ ಈಗಾಗಲೇ ಶೇ 75 ರಷ್ಟು ಗೋವುಗಳು ಕಣ್ಮರೆಯಾಗಿವೆ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ