AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ರಾಸ್ ಹೈಕೋರ್ಟ್​​ನ ಗೋಹತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ರಾಜ್ಯದಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.

ಮದ್ರಾಸ್ ಹೈಕೋರ್ಟ್​​ನ ಗೋಹತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ಸುಪ್ರೀಂ ಕೋರ್ಟ್Image Credit source: Getty Images
ಪ್ರಸನ್ನ ಹೆಗಡೆ
|

Updated on: Jul 01, 2026 | 12:22 PM

Share

ನವದೆಹಲಿ/ಚೆನ್ನೈ, ಜುಲೈ 01: ರಾಜ್ಯದಲ್ಲಿ ಗೋಹತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿಯನ್ನು ಮೀರಿ ನೀಡಲಾಗಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರ ವಿಭಾಗೀಯ ಪೀಠವು, ಕಾಯ್ದೆಯಡಿ ಅನುಮತಿಸಲಾದ ಸಂದರ್ಭಗಳನ್ನು ಹೊರತುಪಡಿಸಿ, ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಅಥವಾ ಕರುವಿನ ಹತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಸರ್ಕಾರದ ವಾದವೇನು?

ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ಸೆಕ್ಷನ್ 4ರ ಪ್ರಕಾರ, 10 ವರ್ಷ ಮೇಲ್ಪಟ್ಟ, ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಅಯೋಗ್ಯವೆಂದು ಸಂಬಂಧಪಟ್ಟ ಪ್ರಾಧಿಕಾರದಿಂದ ಪ್ರಮಾಣೀಕರಿಸಲ್ಪಟ್ಟ ಹಸುವನ್ನು ಮಾತ್ರ ವಧೆ ಮಾಡಲು ಅವಕಾಶವಿದೆ. ಆದರೆ ಹೈಕೋರ್ಟ್ ಈ ಕಾನೂನು ಚೌಕಟ್ಟನ್ನು ಮೀರಿ ಸಂಪೂರ್ಣ ನಿಷೇಧ ಹೇರಿರುವುದು ಕಾನೂನು ವ್ಯಾಪ್ತಿಯನ್ನು ಮೀರಿದ ಕ್ರಮ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಕಾಣಿಕೆ ಕಳ್ಳತನ ಪ್ರಕರಣ; ಹೇಗಿತ್ತು ಗೊತ್ತಾ ಆರೋಪಿಗಳ ಕಳ್ಳಾಟ? ಸ್ಫೋಟಕ ಮಾಹಿತಿ ರಿವೀಲ್​​

ಹೈಕೋರ್ಟ್​​ ಆದೇಶ ಏನು?

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ, ಅದನ್ನು ತಡೆಯುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ವೇಳೆ ಭಾರತ ಸಂವಿಧಾನದ ವಿಧಿ 48ನ್ನು ಉಲ್ಲೇಖಿಸಿದ್ದ ಹೈಕೋರ್ಟ್, ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಕ್ರೀದ್ ಸಂದರ್ಭದಲ್ಲಿ ಗೋಹತ್ಯೆ ಮಾಡುವುದು ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನೂ ಉಲ್ಲೇಖಿಸಿತ್ತು.

ಬಹಳಷ್ಟು ಮುಸ್ಲಿಮರು ಬಕ್ರೀದ್ ದಿನ ಗೋವನ್ನು ಬಲಿ ನೀಡುವುದಿಲ್ಲ. ಗೋವನ್ನು ಬಲಿ ನೀಡುವುದು ಇಸ್ಲಾಂ ಧರ್ಮದ ಕಡ್ಡಾಯ ಆಚರಣೆಯಲ್ಲ. ಬಕ್ರೀದ್ ಸಂದರ್ಭದಲ್ಲಿ ಯಾವುದೇ ಪ್ರಾಣಿಯನ್ನು ಬಲಿ ನೀಡಬಹುದು; ಅದಕ್ಕೆ ಗೋಹತ್ಯೆಯೇ ಏಕೈಕ ಮಾರ್ಗವಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದಿನ ತೀರ್ಪಿನಲ್ಲಿ ಹೇಳಿರುವುದನ್ನು ಹೈಕೋರ್ಟ್ ತಿಳಿಸಿತ್ತು. ಆದರೀಗ ಹೈಕೋರ್ಟ್​​ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ