ರಾಜತಾಂತ್ರಿಕರನ್ನು ಹೆದರಿಸುವ ಹೇಡಿತನದ ಪ್ರಯತ್ನ; ಕೆನಡಾದ ಹಿಂದೂ ದೇವಾಲಯದ ದಾಳಿಗೆ ಪಿಎಂ ಮೋದಿ ಖಂಡನೆ

ಹಿಂದೂ ದೇವಾಲಯದ ಮೇಲೆ ಉದ್ದೇಶಪೂರ್ವಕ ದಾಳಿ ನಡೆಸಲಾಗಿದೆ. ಇದು ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನವಾಗಿದೆ. ಈ ಮೂಲಕ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ರಾಜತಾಂತ್ರಿಕರನ್ನು ಹೆದರಿಸುವ ಹೇಡಿತನದ ಪ್ರಯತ್ನ; ಕೆನಡಾದ ಹಿಂದೂ ದೇವಾಲಯದ ದಾಳಿಗೆ ಪಿಎಂ ಮೋದಿ ಖಂಡನೆ
ಪ್ರಧಾನಿ ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on: Nov 04, 2024 | 8:57 PM

ನವದೆಹಲಿ: “ಉಗ್ರವಾದಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ ಹಿಂಸಾಚಾರದ ಕೃತ್ಯಗಳನ್ನು ಭಾರತ ಸರ್ಕಾರ ಖಂಡಿಸುತ್ತದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಕೆನಡಾದಲ್ಲಿನ ದೇವಾಲಯಗಳ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸಿ ಪೋಸ್ಟ್ ಮಾಡಿದ್ದಾರೆ. ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನ್ ಧ್ವಜಗಳನ್ನು ಹಿಡಿದ ಜನರ ಗುಂಪೊಂದು ದಾಳಿ ಮಾಡಿತ್ತು. ಇದನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಖಂಡಿಸಿದ್ದಾರೆ. ಇಂತಹ ಕೃತ್ಯಗಳು ಭಾರತದ ಸಂಕಲ್ಪವನ್ನು ದುರ್ಬಲಗೊಳಿಸುವುದಿಲ್ಲ ಎಂದು ಹೇಳಿದ್ದಾರೆ.

ಬ್ರಾಂಪ್ಟನ್‌ನಲ್ಲಿರುವ ದೇವಸ್ಥಾನಕ್ಕೆ ಭಾರತೀಯ ಕಾನ್ಸುಲರ್ ಅಧಿಕಾರಿಗಳ ಭೇಟಿಯ ಸಂದರ್ಭದಲ್ಲಿ ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಪಿಎಂ ನರೇಂದ್ರ ಮೋದಿ ಅವುಗಳನ್ನು “ಉದ್ದೇಶಪೂರ್ವಕ ದಾಳಿ” ಮತ್ತು “ನಮ್ಮ ರಾಜತಾಂತ್ರಿಕರನ್ನು ಬೆದರಿಸುವ ಹೇಡಿತನದ ಪ್ರಯತ್ನಗಳು” ಎಂದು ಟೀಕಿಸಿದ್ದಾರೆ. “ಕೆನಡಾದ ಸರ್ಕಾರವು ಈ ಕೃತ್ಯಕ್ಕೆ ನ್ಯಾಯ ದೊರಕಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರತ್ಯೇಕತಾವಾದಿಗಳಿಗೆ ಶಿಕ್ಷೆಯಾಗಬೇಕು; ಕೆನಡಾದಲ್ಲಿ ಹಿಂದೂ ದೇವಾಲಯದ ದಾಳಿಗೆ ಭಾರತ ಟೀಕೆ

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಘಟನೆಯ ದೃಶ್ಯಾವಳಿಗಳು, ಖಲಿಸ್ತಾನದ ಬೆಂಬಲಿಗರು ಮತ್ತು ಇತರರು ಭಾರತದ ರಾಷ್ಟ್ರಧ್ವಜವನ್ನು ಬೀಸುತ್ತಿರುವುದನ್ನು ಒಳಗೊಂಡಂತೆ ಪ್ರತಿಭಟನಾಕಾರರ ಗುಂಪುಗಳು ಹಿಂದೂ ಸಭಾ ಮಂದಿರದ ದೇವಾಲಯದ ಮೈದಾನದಲ್ಲಿ ಘರ್ಷಣೆಯನ್ನು ಉಂಟುಮಾಡಿದವು.

ಈ ಹಿಂಸಾಚಾರವನ್ನು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಕೂಡ ಖಂಡಿಸಿದ್ದಾರೆ. ಭಾರತದಿಂದ ಭಯೋತ್ಪಾದಕ ಎಂದು ಹೆಸರಿಸಲಾದ ಖಲಿಸ್ತಾನಿ ನಾಯಕ ಹರ್ದೀಪ್ ನಿಜ್ಜರ್ ಹತ್ಯೆಯಲ್ಲಿ ದೆಹಲಿಯ ಏಜೆಂಟರು ಭಾಗಿಯಾಗಿದ್ದಾರೆ ಎಂಬ ಕೆನಡಾದ ಆಧಾರರಹಿತ ಹೇಳಿಕೆಗಳ ನಂತರ ಭಾರತದೊಂದಿಗೆ ಕೆನಡಾದ ಸಂಬಂಧವು ಹದಗೆಟ್ಟಿದೆ. 2023ರಲ್ಲಿ ವ್ಯಾಂಕೋವರ್‌ನಲ್ಲಿ 45 ವರ್ಷದ ಕೆನಡಾದ ಪ್ರಜೆಯಾಗಿದ್ದ ಖಲಿಸ್ತಾನ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯನ್ನು ಭಾರತ ಆಯೋಜಿಸಿದೆ ಎಂದು ಕೆನಡಾ ಆರೋಪಿಸಿದ ನಂತರ ಎರಡೂ ದೇಶಗಳ ನಡುವಿನ ಸಂಬಂಧ ಹಳಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ