AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15-18 ವಯಸ್ಸಿನವರಿಗೆ ಲಸಿಕೆ ನೀಡಿಕೆ; ಕೊವಿನ್​ ಪೋರ್ಟಲ್​​ನಲ್ಲಿ ನೋಂದಣಿ ಪ್ರಕ್ರಿಯೆ ಇಂದಿನಿಂದಲೇ ಪ್ರಾರಂಭ

ಜನವರಿ 3ರಿಂದ ಮತ್ತೊಂದು ಹಂತದ ಲಸಿಕೆ ಅಭಿಯಾನ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳೊಂದಿಗೆ ಸಭೆ ನಡೆಸಿದ್ದರು.

15-18 ವಯಸ್ಸಿನವರಿಗೆ ಲಸಿಕೆ ನೀಡಿಕೆ; ಕೊವಿನ್​ ಪೋರ್ಟಲ್​​ನಲ್ಲಿ ನೋಂದಣಿ ಪ್ರಕ್ರಿಯೆ ಇಂದಿನಿಂದಲೇ ಪ್ರಾರಂಭ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on:Jan 01, 2022 | 8:42 AM

Share

ಭಾರತಲ್ಲಿ ಜನವರಿ 3ರಿಂದ 15-18ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಅದಕ್ಕೆ ಸಂಬಂಧಪಟ್ಟಂತೆ ಇಂದಿನಿಂದಲೇ (ಜ.1) ಕೊವಿನ್​​ ಆ್ಯಪ್​/ವೆಬ್​ಸೈಟ್​ನಲ್ಲಿ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ. ಆನ್​ಲೈನ್ ಮೂಲಕವಾದರೂ ನೋಂದಣಿ ಮಾಡಿಕೊಳ್ಳಬಹುದು ಅಥವಾ ಕೇಂದ್ರಗಳಿಗೆ ಭೇಟಿ ನೀಡಿ, ರಿಜಿಸ್ಟರ್ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.  ಕೊವಿನ್​ ನೋಂದಣಿ ಪ್ರಕ್ರಿಯೆ ಇಂದಿನಿಂದ ಶುರುವಾಗಲಿದ್ದು, ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆ ಲಸಿಕೆ ನೀಡುವ ದಿನದಂದೇ ನಡೆಯಲಿದೆ. 

15-18ನೇ ವರ್ಷದವರು ಕೊವಿನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಲು ತಮ್ಮ ಗುರುತು ಪತ್ರಗಳನ್ನು​ ಬಳಸಬಹುದು ಎಂದು ಸರ್ಕಾರದ ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಕೊವಿನ್​ ಮುಖ್ಯಸ್ಥ ಡಾ. ಆರ್​.ಎಸ್​. ಶರ್ಮಾ ಮಾತನಾಡಿ, ಈ ವಯಸ್ಸಿನವರು ತಮ್ಮ ಆಧಾರ್​ ಕಾರ್ಡ್​ ಹೊರತು ಪಡಿಸಿ ಶಾಲಾ ಕಾಲೇಜುಗಳ ತರಗತಿಗಳ ಐಡಿ ಕಾರ್ಡ್​ನೊಂದಿಗೆ ಕೂಡ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದ್ದರು.

ಜನವರಿ 3ರಿಂದ ಮತ್ತೊಂದು ಹಂತದ ಲಸಿಕೆ ಅಭಿಯಾನ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳೊಂದಿಗೆ ಸಭೆ ನಡೆಸಿದ್ದರು. ಅಲ್ಲದೆ, ಜನವರಿ 10ರಿಂದ ಶುರುವಾಗುವ ಕೊರೊನಾ ಲಸಿಕೆ ಮುನ್ನೆಚ್ಚರಿಕಾ ಡೋಸ್​ ನೀಡಿಕೆ ಬಗ್ಗೆಯೂ ಚರ್ಚಿಸಿದ್ದರು. ಅಂದಹಾಗೆ ಈ ಮೂರನೇ ಡೋಸ್​​ನ್ನು, 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ, ಆರೋಗ್ಯ ಕಾರ್ಯಕರ್ತರು ಮತ್ತು ಕೊವಿಡ್​ ವಿರುದ್ಧ ಮುಂಚೂಣಿ ಹೋರಾಟಗಾರರಿಗೆ ನೀಡಲಾಗುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ 2021ರ ಡಿಸೆಂಬರ್​ 25ರಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿ ಎರಡು ಮಹತ್ವದ ಘೋಷಣೆ ಮಾಡಿದ್ದರು. ಅದರಲ್ಲಿ ಒಂದು 2022ರ ಜನವರಿ 3ರಿಂದ 15-18 ವರ್ಷದವರಿಗೆ ಕೊರೊನಾ ಲಸಿಕೆ ನೀಡಲಾಗುವುದು ಎಂಬುದು, ಇನ್ನೊಂದು 2022ರ ಜನವರಿ 10ರಿಂದ ಆಯ್ದ ವರ್ಗಗಳಿಗೆ ಮುನ್ನೆಚ್ಚರಿಕಾ ಡೋಸ್ ನೀಡುತ್ತೇವೆ ಎಂಬುದು.  ಇನ್ನು 15-18ನೇ ವರ್ಷದವರಿಗೆ ಲಸಿಕೆ ನೀಡಲು ಭಾರತ್​ ಬಯೋಟೆಕ್​ನ ಕೊವ್ಯಾಕ್ಸಿನ್​ ವ್ಯಾಕ್ಸಿನ್​ಗೆ ಅನುಮೋದನೆ ಸಿಕ್ಕಿದೆ.  ಹಾಗೇ, ಮಕ್ಕಳಿಗೆ ಲಸಿಕೆ ನೀಡಲು ಪ್ರತ್ಯೇಕ ಕೇಂದ್ರಗಳನ್ನು ಸ್ಥಾಪಿಸಿ ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಸೂಚನೆ ನೀಡಿದೆ.

ಇದನ್ನೂ ಓದಿ: ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ ನೈಟ್ ಕರ್ಫ್ಯೂ; 10 ಗಂಟೆಗೂ ಮೊದಲೇ ಮನೆ ಸೇರಿದ ಜನ

Published On - 8:41 am, Sat, 1 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ