ರಾಜಸ್ಥಾನ: ದೇವಸ್ಥಾನದ ಆವರಣದಲ್ಲಿ ಗೋವಿನ ಬಾಲ ಪತ್ತೆ

|

Updated on: Aug 27, 2024 | 10:50 AM

ರಾಜಸ್ಥಾನದ ದೇವಸ್ಥಾನವೊಂದರ ಆವರಣದಲ್ಲಿ ಗೋವಿನ ಬಾಲ ಪತ್ತೆಯಾಗಿದ್ದು, ತೀವ್ರ ಆಕ್ರೋಶವನ್ನು ಹುಟ್ಟುಹಾಕಿದೆ. ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಭಾನುವಾರ ಸಂಜೆ 5 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಸೋಮವಾರ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ್ದವು.

ರಾಜಸ್ಥಾನ: ದೇವಸ್ಥಾನದ ಆವರಣದಲ್ಲಿ ಗೋವಿನ ಬಾಲ ಪತ್ತೆ
ಪ್ರತಿಭಟನೆ
Follow us on

ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ.

ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಭಾನುವಾರ ಸಂಜೆ 5 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ್ದವು.

ಧಾರ್ಮಿಕ ಸ್ಥಳದ ಮುಂದೆ ಗೋವಿನ ಬಾಲ ಪತ್ತೆಯಾದ ಘಟನೆ ಮತ್ತು ಅದರ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಮಾತನಾಡಿ ಪ್ರತಿಭಟನೆ ಅಂತ್ಯಗೊಳಿಸಿದ್ದರು.

ಮತ್ತಷ್ಟು ಓದಿ: Viral Video: ಅತ್ಯಾಚಾರ ಎಸಗಲು ಮುಂದಾದ ಕಾಮಾಂಧನನ್ನು ಕೊಂಬಿನಿಂದ ತಿವಿದು ಬಿಸಾಕಿದ ಹಸು; ವಿಡಿಯೋ ವೈರಲ್

ಘಟನೆಯ ಹಿಂದಿರುವವರನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ವಾತಾವರಣ ಶಾಂತಿಯುತವಾಗಿದೆ.
ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ , ಸ್ಥಳೀಯ ಸಂಸದ ದಾಮೋದರ್ ಅಗರ್‌ವಾಲ್ ಅವರೊಂದಿಗೆ ಹಲವರು ಘಟನಾ ಸ್ಥಳಕ್ಕೆ ಆಗಮಿಸಿ, ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಧರಣಿ ನಡೆಸಿದರು.

ನಾವು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಿದೆವು, ಆದರೆ ಯುವಕರಲ್ಲಿ ತುಂಬಾ ಕೋಪವಿತ್ತು, ಅವರು ಕಲ್ಲು ತೂರಾಟವನ್ನು ಪ್ರಾರಂಭಿಸಿದರು. ನಗರದಲ್ಲಿ ಸಮಸ್ಯೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಕಲ್ಲು ತೂರಾಟ ನಡೆಸಿದ ಜನರ ವಾಹನಗಳನ್ನು ವಶಪಡಿಸಿಕೊಂಡಿದ್ದೇವೆ.

ನಾವು ಪರಿಸ್ಥಿತಿಯನ್ನು ಸಾಮಾನ್ಯಗೊಳಿಸಲು ಪ್ರಯತ್ನಿಸುತ್ತಿದ್ದೇವೆ ಮತ್ತು ಮಾರುಕಟ್ಟೆಯನ್ನು ಮುಚ್ಚಲು ಬಿಡುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವಂದನಾ ಖೋರ್ವಾಲ್ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ