AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯೊಂದಿಗೆ ಕಾಂಗ್ರೆಸ್, ಸಿಪಿಎಂ ಮಾಡಿಕೊಂಡಿರುವ ಅಪವಿತ್ರ ಸಂಬಂಧವನ್ನು ಮುರಿಯುತ್ತೇನೆ: ಮಮತಾ ಬ್ಯಾನರ್ಜಿ

ನಾವು ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿ (ಮಹಾಜೋತ್) ರಚಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಬಂಗಾಳದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲು ಪ್ರಯತ್ನಿಸುತ್ತಿವೆ. ಬಂಗಾಳದಲ್ಲಿ ನಾನು ಈ ಅಪವಿತ್ರ ಸಂಬಂಧವನ್ನು ಮುರಿಯುತ್ತೇನೆ ಎಂದು ಸೋಮವಾರ ಪಂಚಾಯತ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಹೇಳಿದ್ದಾರೆ.

ಬಿಜೆಪಿಯೊಂದಿಗೆ ಕಾಂಗ್ರೆಸ್, ಸಿಪಿಎಂ ಮಾಡಿಕೊಂಡಿರುವ ಅಪವಿತ್ರ ಸಂಬಂಧವನ್ನು ಮುರಿಯುತ್ತೇನೆ: ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
ರಶ್ಮಿ ಕಲ್ಲಕಟ್ಟ
|

Updated on:Jun 26, 2023 | 7:50 PM

ಕೂಚ್ ಬೆಹಾರ್ (ಪಶ್ಚಿಮ ಬಂಗಾಳ): ಪಾಟ್ನಾದಲ್ಲಿ ನಡೆದ  ಪ್ರತಿಪಕ್ಷಗಳ ಮಹಾ ಸಭೆಯ ನಂತರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಸಿಪಿಐ(ಎಂ) ಮತ್ತು ಕಾಂಗ್ರೆಸ್‌ನ (Congress) ಪಾತ್ರವನ್ನು ಟೀಕಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಮಹಾ ವಿರೋಧ ಪಕ್ಷದ ಮೈತ್ರಿಯನ್ನು ರಚಿಸಲು ಪ್ರಯತ್ನಿಸಿದರೂ, ರಾಜ್ಯದಲ್ಲಿನ ಬಿಜೆಪಿ (BJP) ವಿರುದ್ಧ ಈ ಎರಡು ಪಕ್ಷಗಳು ನಿಲ್ಲದೇ ಇರುವುದು, ನಮ್ಮ ಪ್ರಯತ್ನಗಳಿಗೆ ಬೆಲೆ ಇಲ್ಲದಂತೆ ಮಾಡುತ್ತದೆ. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ನಿರ್ಣಾಯಕ ಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರ ನಿರ್ಧರಿಸಿದ್ದವು. ಇದರ ನಡುವೆ ಎಎಪಿ, ಸುಗ್ರೀವಾಜ್ಞೆ ವಿಷಯಗಳಲ್ಲಿ ಕಾಂಗ್ರೆಸ್ ಸಾರ್ವಜನಿಕವಾಗಿ ಬೆಂಬಲಿಸುವವರೆಗೆ ಭವಿಷ್ಯದಲ್ಲಿ ಇಂಥಾ ಸಭೆಗಳ ಭಾಗವಾಗುವುದು ಕಷ್ಟ ಎಂದು ಹೇಳಿತ್ತು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಹತ್ತಕ್ಕೂ ಹೆಚ್ಚು ರಾಜಕೀಯ ಪಕ್ಷಗಳು ಬ್ಯಾನರ್ಜಿ ಸೇರಿದಂತೆ 32 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು.

ನಾವು ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿ (ಮಹಾಜೋತ್) ರಚಿಸಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಬಂಗಾಳದಲ್ಲಿ ಬಿಜೆಪಿಯೊಂದಿಗೆ ಕೆಲಸ ಮಾಡಲು ಪ್ರಯತ್ನಿಸುತ್ತಿವೆ. ಬಂಗಾಳದಲ್ಲಿ ನಾನು ಈ ಅಪವಿತ್ರ ಸಂಬಂಧವನ್ನು ಮುರಿಯುತ್ತೇನೆ ಎಂದು ಸೋಮವಾರ ಪಂಚಾಯತ್ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಹೇಳಿದ್ದಾರೆ.

ಕಳೆದ ಹತ್ತು ದಿನಗಳಲ್ಲಿ ಇದು ಎರಡನೇ ಬಾರಿಗೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಮತ್ತು ಸಿಪಿಐ(ಎಂ) ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ. ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ, “ಬಿಜೆಪಿ ವಿರುದ್ಧದ ಹೋರಾಟದಲ್ಲಿ ಟಿಎಂಸಿಯ ವಿಶ್ವಾಸಾರ್ಹತೆ ಯಾವಾಗಲೂ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ” ಎಂದು ಹೇಳಿದರು.

ಬಿಜೆಪಿ ವಿರುದ್ಧದ ಹೋರಾಟದಲ್ಲಿ ಇಷ್ಟು ವರ್ಷಗಳಲ್ಲಿ ಟಿಎಂಸಿ ವಹಿಸಿದ ಪಾತ್ರ ನಮಗೆಲ್ಲರಿಗೂ ತಿಳಿದಿದೆ. ಚೌಧರಿ ಹೇಳಿಕೆಗೆ ದನಿಗೂಡಿಸಿದ ಸಿಪಿಐ(ಎಂ), ಬಿಜೆಪಿ ವಿರುದ್ಧ ಹೋರಾಡುವ ಮಾರ್ಗಗಳ ಕುರಿತು ಕಮ್ಯುನಿಸ್ಟರು ಮತ್ತು ಕಾಂಗ್ರೆಸ್‌ಗೆ ಉಪನ್ಯಾಸ ನೀಡುವ ಕೊನೆಯ ವ್ಯಕ್ತಿ ಮಮತಾ ಬ್ಯಾನರ್ಜಿಯಾಗಬೇಕು ಎಂದಿದೆ.

ಇದನ್ನೂ ಓದಿ: ಪ್ರವಾಸದಿಂದ ಹಿಂದಿರುಗಿದ ಪ್ರಧಾನಿ ಮೋದಿಗೆ ಮಣಿಪುರ ಪರಿಸ್ಥಿತಿ ಬಗ್ಗೆ ಅಮಿತ್ ಶಾ ವಿವರಣೆ

ಏತನ್ಮಧ್ಯೆ, ರಾಜ್ಯದಲ್ಲಿ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಜೊತೆ ಯಾವುದೇ ರೀತಿಯ ತಿಳುವಳಿಕೆಯನ್ನು ಹೊಂದಿದೆ ಎಂಬ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಸಿಪಿಐ (ಎಂ), ಕಾಂಗ್ರೆಸ್ ಮತ್ತು ಟಿಎಂಸಿ ಒಂದೇ ದೋಣಿಯಲ್ಲಿವೆ. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಹೋರಾಟ ನಡೆಸುತ್ತಿದೆ ಎಂದು ಬಿಜೆಪಿ ನಾಯಕ ರಾಹುಲ್ ಸಿನ್ಹಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Mon, 26 June 23