Sitaram Yechury: ಸಿಪಿಐ ನಾಯಕ ಸೀತಾರಾಂ ಯೆಚೂರಿ ಸ್ಥಿತಿ ಗಂಭೀರ, ವೆಂಟಿಲೇಟರ್ನಲ್ಲಿ ಚಿಕಿತ್ಸೆ
ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಉಸಿರಾಟದ ಬೆಂಬಲದಲ್ಲಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.
ನವದೆಹಲಿ: ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ಗೆ ದಾಖಲಾಗಿದ್ದ ಸಿಪಿಐ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ಹೇಳಿಕೆಯಲ್ಲಿ ತಿಳಿಸಿದೆ.
“ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಅವರ ಆರೋಗ್ಯ ಸ್ಥಿತಿ ಈ ಸಮಯದಲ್ಲಿ ಗಂಭೀರವಾಗಿದೆ” ಎಂದು ಎಕ್ಸ್ನಲ್ಲಿನ ಹೇಳಿಕೆಯಲ್ಲಿ ಸಿಪಿಐಎಂ ತಿಳಿಸಿದೆ.
ಇದನ್ನೂ ಓದಿ: Crime News: ಟಿವಿ ವಾಲ್ಯೂಮ್ ಯಾಕಿಷ್ಟು ಜೋರಾಗಿದೆ? ಎಂದ ವ್ಯಕ್ತಿಯ ಕತ್ತು ಕತ್ತರಿಸಿ ಕೊಲೆ
ತೀವ್ರ ಜ್ವರದಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣದಿಂದ ಸೀತಾರಾಂ ಯೆಚೂರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.
Comrade Sitaram Yechury’s health condition pic.twitter.com/NDPl8HE8K0
— CPI (M) (@cpimspeak) September 10, 2024
ಮೊದಲು ಅವರು ಚಿಕಿತ್ಸೆಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ತೋರಿಸಿದರು. ಅವರನ್ನು ಅಬ್ಸರ್ವೇಷನ್ನಲ್ಲಿಡಲಾಗಿತ್ತು. ಆದರೆ ಗುರುವಾರ ಸೀತಾರಾಮ್ ಯೆಚೂರಿ ಅವರ ಆರೋಗ್ಯ ಹದಗೆಟ್ಟ ನಂತರ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Viral: ನವಜಾತ ಶಿಶು ಮತ್ತು ಪತ್ನಿಯನ್ನು ಆಸ್ಪತ್ರೆಯಿಂದ ಕರೆತರಲು ತನ್ನ ಮೊದಲ ಮಗುವನ್ನೇ ಮಾರಾಟ ಮಾಡಿದ ತಂದೆ
ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಏಮ್ಸ್‌ನಲ್ಲಿ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಯೆಚೂರಿ ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:50 pm, Tue, 10 September 24