ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕ್ರೆಡಿಟ್ ಕಾಂಗ್ರೆಸ್​ಗೆ ಸಲ್ಲಬೇಕು: ಮಲ್ಲಿಕಾರ್ಜುನ ಖರ್ಗೆ

ಲೋಕಸಭೆಯಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿ ಬಿಲ್ ಮಂಡಿಸಲಾಗಿದೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಬಿಲ್ ಮಂಡನೆ ನಂತರ ತಮ್ಮ ಸಾಧನೆ ಎಂದು ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದರೆ, ಇತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ ಕಾಂಗ್ರೆಸ್ ನಾಯಕರು ಮೀಸಲಾತಿ ಕ್ರೆಡಿಟ್ ಕಾಂಗ್ರೆಸ್​ ಪಕ್ಷಕ್ಕೆ ಸಲ್ಲುತ್ತದೆ ಎಂದು ಹೇಳುತ್ತಿದ್ದಾರೆ.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕ್ರೆಡಿಟ್ ಕಾಂಗ್ರೆಸ್​ಗೆ ಸಲ್ಲಬೇಕು: ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆImage Credit source: ANI
Follow us
TV9 Web
| Updated By: Rakesh Nayak Manchi

Updated on: Sep 19, 2023 | 3:59 PM

ನವದೆಹಲಿ, ಸೆ.19: ಲೋಕಸಭೆಯಲ್ಲಿ ಶೇ.33 ರಷ್ಟು ಮಹಿಳಾ ಮೀಸಲಾತಿ ಬಿಲ್ (Womens Reservation Bill) ಮಂಡಿಸಲಾಗಿದೆ. ಈ ಬಗ್ಗೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ. ಬಿಲ್ ಮಂಡನೆ ನಂತರ ತಮ್ಮ ಸಾಧನೆ ಎಂದು ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದರೆ, ಇತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೇರಿದಂತೆ ಕಾಂಗ್ರೆಸ್ ನಾಯಕರು ಮೀಸಲಾತಿ ಕ್ರೆಡಿಟ್ ಕಾಂಗ್ರೆಸ್​ ಪಕ್ಷಕ್ಕೆ ಸಲ್ಲುತ್ತದೆ ಎಂದು ಹೇಳುತ್ತಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, 2010 ರಲ್ಲಿ ನಾವು ಮಹಿಳಾ ಮೀಸಲಾತಿ ಬಿಲ್ ಮಂಡಿಸಿದ್ದೆವು. ಹೀಗಾಗಿ ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದಿದ್ದಾರೆ. ಮಹಿಳಾ ಮೀಸಲಾತಿ ಬಿಲ್​ನಲ್ಲಿ ಒಬಿಸಿ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿದರು. ಇದಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಅನಿವಾರ್ಯವಾಗಿ ಬಿಲ್​ಗೆ ತಡೆ: ಹೆಚ್​ಕೆ ಪಾಟೀಲ್

ಯಾವಾಗ ಮಹಿಳಾ ಮೀಸಲಾತಿ ಮಸೂದೆ ದೇಶದಲ್ಲಿ ಚರ್ಚೆ ಪ್ರಾರಂಭವಾಯಿತು ಎಂಬುದು ದೇಶದ ಜನರಿಗೆ ಗೊತ್ತಿದೆ ಎಂದು ಹೇಳಿದ ಕಾನೂನು ಸಚಿವ ಹೆಚ್​ಕೆ ಪಾಟೀಲ್, ಯಾರಿಗೆ ಕ್ರೆಡಿಟ್ ಕೊಡಬೇಕು ಅಂತಾ ದೇಶದ ಜನರಿಗೆ ಗೊತ್ತಿದೆ ಎಂದರು.

ಗದಗದಲ್ಲಿ ಮಾತನಾಡಿದ ಅವರು, ಒಂದು ಹಂತದಲ್ಲಿ ಮೀಸಲಾತಿ ಮಸೂದೆ ರಾಜಸಭೆಯಲ್ಲಿ ಪಾಸ್ ಆಗಿತ್ತು. ಆದರೆ ಅನಿವಾರ್ಯವಾಗಿ ಅದಕ್ಕೆ ತಡೆ ಮಾಡಲಾಯಿತು. ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ರಾಜಕೀಯ ಬದ್ಧತೆ ಹಲವಾರು ಬಾರಿ ವ್ಯಕ್ತ ಮಾಡಿದೆ. ನಮ್ಮ ರಾಜಕೀಯ ಇಚ್ಛಾಶಕ್ತಿಯನ್ನ ಅಭ್ಯಕ್ತಗೊಳಿಸುತ್ತಿದ್ದೇವೆ ಎಂದರು.

ಇದನ್ನೂ ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಮಹಿಳಾ ಮೀಸಲಾತಿ ಮಾಡಬೇಕು. ಅದಕ್ಕೆ ನಾವೇನು ಶ್ರಮ ಪಡಬೇಕಿತ್ತು ಶ್ರಮ ಪಡುತ್ತೇವೆ. ನಮ್ಮ ದೇಶದ ಚಿಂತನೆ ಇತ್ತು. ನಮ್ಮ ಪಕ್ಷ ಮುಂದೇ ತಂದಿತ್ತು. ಅದನ್ನು ಮುಂದುವರಿಕೊಂಡು ಹೋಗುತ್ತಿದ್ದಾರೆ. ಅದು ಒಳ್ಳೆಯ ಬೆಳವಣಿಗೆ ಎಂದರು.

ಮೀಸಲಾತಿ ಮಂಡನೆ ಮೂಲ ದೇವೇಗೌಡ ಎಂದ ಕುಮಾರಸ್ವಾಮಿ

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಹೇಳಿದರು. ಅಲ್ಲದೆ, ಇದರ ಮೂಲ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಎಂದರು.

ದೇವೇಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12 ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. 27 ವರ್ಷಗಳ ನಂತರ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ ಎಂದರು.

ಮೀಸಲಾತಿ ನಮ್ಮದೇ ಕೂಸು ಎಂದ ಮುನಿಯಪ್ಪ

ಕೋಲಾರದಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಯುಪಿಎ ಸರ್ಕಾರ ಇದ್ದಾಗ ನಾವೇ ಮಾಡಿದ್ದೆವು, ಇದು ನಮ್ಮ ಕೂಸು. ಆದರೆ ಆಗ ಕೆಲವರ ವಿರೋಧ ಇದ್ದ ಕಾರಣ ಅನುಮೋದನೆ ಆಗಲಿಲ್ಲ. ಹತ್ತು ವರ್ಷಗಳ ಹಿಂದೆಯೇ ಚಿಂತನೆ ಮಾಡಿದ್ದೆವು, ಈಗ ಇವರು ಮಾಡುತ್ತಿರುವದರಲ್ಲಿ ವಿಶೇಷ ಏನೂ ಇಲ್ಲ. ಆ ಕಾಲದಲ್ಲೇ ನಾವು ಮಾಡಿದ್ದೆವು, ಈಗ ಅವರು ಮಾಡುವುದಾರೆ ಸ್ವಾಗತ ಮಾಡುತ್ತೇವೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು