AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಟೀಂ ಇಂಡಿಯಾ ಹೀನಾಯ ಸೋಲು: ಪ್ರಾಣತೆತ್ತ ಇಬ್ಬರು ಯುವಕರು

ತಿರುಪತಿ ಜಿಲ್ಲೆ ಗ್ರಾಮಾಂತರ ಮಂಡಲ ದುರ್ಗಾ ಸಮುದ್ರದ ಜ್ಯೋತಿ ಕುಮಾರ್ ಎಂಬಾತ ಬಿಟೆಕ್ ಮಾಡಿಕೊಂಡು, ಸ್ಥಳೀಯವಾಗಿ ಕಂಪ್ಯೂಟರ್ ಸೆಂಟರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಭಾನುವಾರ ತನ್ನ ಸ್ನೇಹಿತರೊಂದಿಗೆ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದರು. ಆದರೆ ಬ್ಯಾಟಿಂಗ್ ವೇಳೆ ಭಾರತ ತೀವ್ರ ನಿರಾಶೆಯ ಆಟವಾಡಿತು. ಬೌಲರ್‌ಗಳಾದರೂ ತಮ್ಮ ಸಾಮರ್ಥ್ಯ ತೋರಿ ಪಂದ್ಯ ಗೆಲ್ಲಲಿ ಎಂದು ಫ್ಯಾನ್ಸ್​ ಹಾರೈಸಿದ್ದರು. ಆದರೆ

ODI World Cup 2023: ಟೀಂ ಇಂಡಿಯಾ ಹೀನಾಯ ಸೋಲು: ಪ್ರಾಣತೆತ್ತ ಇಬ್ಬರು ಯುವಕರು
ತಿರುಪತಿಯಲ್ಲಿ ಯುವಕ ಹೃದಯಾಘಾತಕ್ಕೆ ಬಲಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2023 | 12:54 PM

Share

ತಿರುಪತಿ, ನವೆಂಬರ್ 20: ಏಕದಿನ ವಿಶ್ವಕಪ್‌ನಲ್ಲಿ (ODI World Cup 2023) ಟೀಂ ಇಂಡಿಯಾ ಸೋಲು ಎಲ್ಲರಲ್ಲೂ ನಿರಾಸೆ ಮೂಡಿಸಿದೆ. ಇದರಿಂದ ಕೋಟಿ ಕೋಟಿ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಭಾನುವಾರ ನಡೆದ ಪಂದ್ಯವನ್ನು ಕೋಟ್ಯಂತರ ವೀಕ್ಷಕರು ವೀಕ್ಷಿಸಿದರು. ಲಕ್ಷಾಂತರ ಜನರು ಕ್ರೀಡಾಂಗಣದಲ್ಲಿ ನೇರಪ್ರಸಾರ ವೀಕ್ಷಿಸಿದರು. ಆದರೆ ಭಾರೀ ನಿರೀಕ್ಷೆಯೊಂದಿಗೆ ಅಖಾಡಕ್ಕೆ ಬಂದಿದ್ದ ಟೀಂ ಇಂಡಿಯಾ (Team India) ಸೋಲನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಮೈದಾನದಲ್ಲಿ ಲೈವ್ ವೀಕ್ಷಿಸುತ್ತಿದ್ದ ಅಭಿಮಾನಿಗಳು (Fan) ಹಾಗೂ ಟಿವಿಗೆ ಅಂಟಿಕೊಂಡವರು ತೀವ್ರ ನಿರಾಸೆ ಅನುಭವಿಸಿದ್ದಾರೆ. ಹೀಗಿರುವಾಗ ತಿರುಪತಿಯಲ್ಲಿ (Tirupati) ಘೋರ ದುರಂತವೊಂದು ನಡೆದಿದೆ. ಟೀಂ ಇಂಡಿಯಾ ಸೋಲನ್ನು ಸಹಿಸಲಾಗದೆ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಕ್ರಿಕೆಟ್ ನೋಡುತ್ತಲೇ ಕ್ರಿಕೆಟ್ ಅಭಿಮಾನಿಯೊಬ್ಬ ಸಾವನ್ನಪ್ಪಿರುವ ಘಟನೆ ಹೃದಯವಿದ್ರಾವಕವಾಗಿದೆ. ಇನ್ನು ಅತ್ತ ದೂರದ ಪಶ್ಚಿಮ ಬಂಗಾಲದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲುತ್ತಿದ್ದಂತೆ ಬಂಕುರಾದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕ್ರಿಕೆಟ್​ ಸೋಲು: ತಿರುಪತಿಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಯುವಕ 

ತಿರುಪತಿ ಜಿಲ್ಲೆ ಗ್ರಾಮಾಂತರ ಮಂಡಲ ದುರ್ಗಾ ಸಮುದ್ರದ ಜ್ಯೋತಿ ಕುಮಾರ್ ಎಂಬಾತ ಬಿಟೆಕ್ ಮಾಡಿಕೊಂಡು, ಸ್ಥಳೀಯವಾಗಿ ಕಂಪ್ಯೂಟರ್ ಸೆಂಟರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಭಾನುವಾರ ತನ್ನ ಸ್ನೇಹಿತರೊಂದಿಗೆ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದರು. ಆದರೆ ಬ್ಯಾಟಿಂಗ್ ವೇಳೆ ಭಾರತ ತೀವ್ರ ನಿರಾಶೆಯ ಆಟವಾಡಿತು. ಬೌಲರ್‌ಗಳಾದರೂ ತಮ್ಮ ಸಾಮರ್ಥ್ಯ ತೋರಿ ಪಂದ್ಯ ಗೆಲ್ಲಲಿ ಎಂದು ಫ್ಯಾನ್ಸ್​ ಹಾರೈಸಿದ್ದರು.

ಆದರೆ ಆ ಬಳಿಕ ಪಂದ್ಯ ನಡೆಯುತ್ತಿದ್ದಂತೆ ಜ್ಯೋತಿ ಕುಮಾರ್ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸಂಜೆ ಆರು ಗಂಟೆಗೆ ಎರಡನೇ ಇನ್ನಿಂಗ್ಸ್ ಶುರುವಾದ ಮೇಲೆ.. ಆಸ್ಟ್ರೇಲಿಯದ 3 ವಿಕೆಟ್ ಗಳು ಬೇಗ ಪತನವಾದಾಗ.. ಪಂದ್ಯ ಗೆಲ್ಲತ್ತೇವೆ ಎಂದು ಟೀಂ ಇಂಡಿಯಾ ಅಭಿಮಾನಿಗಳು ಅಂದುಕೊಂಡರು. ಆದರೆ ಆ ಬಳಿಕ ನಮ್ಮ ಬೌಲರ್‌ಗಳು ಸತತ ರನ್‌ ನೀಡುತ್ತಿದ್ದರಿಂದ ಜ್ಯೋತಿ ಕುಮಾರ್‌ ಮತ್ತೇ ತೀವ್ರವಾಗಿ ಆತಂಕಗೊಂಡಿದ್ದರು.

Also Read: ದ್ರಾವಿಡ್​ಗೂ ಆ ಕೊರತೆ ನೀಗಿಸಲು ಸಾಧ್ಯವಾಗಲಿಲ್ಲ! ನಿರಾಸೆಯೊಂದಿಗೆ ಜವಬ್ದಾರಿ ಮುಗಿಸಿದ್ರಾ ‘ದಿ ವಾಲ್’?

ಆಸ್ಟ್ರೇಲಿಯದ ಗೆಲುವು ಮತ್ತು ಭಾರತದ ಸೋಲಿನ ನಂತರ ಆಟಗಾರರು ಕಣ್ಣೀರು ಸುರಿಸುವುದನ್ನು ಅವರು ಸಹಿಸಲಿಲ್ಲ. ಈ ಸಂದರ್ಭದಲ್ಲಿ ಜ್ಯೋತಿ ಕುಮಾರ್ ಏಕಾಏಕಿ ಕುಸಿದು ಬಿದ್ದರು. ಕೂಡಲೇ ಆತನ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮಗನ ಹಠಾತ್ ಸಾವಿನಿಂದ ಪಾಲಕರು ಕಂಬನಿ ಮಿಡಿದಿದ್ದಾರೆ. ಸದ್ಯದಲ್ಲೇ ಆತನಿಗೆ ಮದುವೆ ಮಾಡಿಸಲು ಬಯಸಿದ್ದೆವು. ಆದರೆ ತಮ್ಮ ಮಗು ಬಾರದ ಲೋಕ ಸೇರಿಕೊಳ್ಳುತ್ತಾನೆ ಎಂದು ಊಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಸೋಲು ಆ ಯುವಕನ ಜೀವವನ್ನೇ ತೆಗೆದುಕೊಂಡಿತು. ಈ ಪಂದ್ಯ ನೋಡದೇ ಇದ್ದಿದ್ದರೆ ಬದುಕುತ್ತಿದ್ದ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ. ಅನಾವಶ್ಯಕವಾಗಿ ಜೀವ ಕಳೆದು ಹೋಯಿತು ಎಂದು ಅವರು ಮರುಗಿದ್ದಾರೆ.

ಬಂಗಾಳದ ಯುವ ಕ್ರಿಕೆಟ್ ಅಭಿಮಾನಿ ಆತ್ಮಹತ್ಯೆ:

ಭಾರತ ಐಸಿಸಿ ವಿಶ್ವಕಪ್ 2023 ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಬಂಕುರಾದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಕುರಾದ ಬೆಲಿಯತೋರ್‌ನ ರಾಹುಲ್ ಲೋಹರ್ (23) ಕ್ರಿಕೆಟ್‌ನ ದೊಡ್ಡ ಅಭಿಮಾನಿ. ಇಡೀ ದೇಶದ ಜೊತೆಗೆ ರೋಹಿತ್ ಸಾರಥ್ಯದ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಲಿ ಎಂದು ಹಾರೈಸಿದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ರಾಹುಲ್ ಭಾರತದ ಎಲ್ಲ ಪಂದ್ಯಗಳನ್ನೂ ವೀಕ್ಷಿಸಿದ್ದ. ಭಾನುವಾರವೂ ಆತ ಕೆಲಸಕ್ಕೆ ಹೋಗಿರಲಿಲ್ಲ. ಬೆಲಿಯತೋರ್ ಸಿನಿಮಾ ಹಾಲ್ ಪ್ರೊಜೆಕ್ಟರ್ ನಲ್ಲಿ ಆಟ ನೋಡಲು ಸ್ನೇಹಿತರೊಂದಿಗೆ ಹೋಗಿದ್ದ. ಭಾರತದ ಸೋಲನ್ನು ಕಂಡ ತನ್ನ ಕನಸು ಭಗ್ನಗೊಂಡ ನೋವಿನೊಂದಿಗೆ ತವರಿಗೆ ಮರಳಿದ್ದ. ಬಳಿಕ ರಾತ್ರಿ 11 ಗಂಟೆ ಸುಮಾರಿಗೆ ರಾಹುಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ಹೇಳಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:25 am, Mon, 20 November 23

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​