AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sachin Tendulkar: ಚುನಾವಣಾ ಆಯೋಗದ ‘ನ್ಯಾಷನಲ್ ಐಕಾನ್’ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್; ಬುಧವಾರದಿಂದಲೇ ಹೊಸ ಇನ್ನಿಂಗ್ಸ್

Sachin Tendulkar will become Election Commission's National Icon; ತೆಂಡೂಲ್ಕರ್ ಹೊರತುಪಡಿಸಿ, ಆಯೋಗವು ನಟ ಪಂಕಜ್ ತ್ರಿಪಾಠಿ ಮತ್ತು ಸಾಮಾಜಿಕ ಕಾರ್ಯಕರ್ತ ಡಾ. ನಿರು ಕುಮಾರ್ ಅವರನ್ನು ಐಕಾನ್​ಗಳನ್ನಾಗಿಸಿದೆ. 2019 ರ ಲೋಕಸಭಾ ಚುನಾವಣೆಗಾಗಿ ಎಂಎಸ್ ಧೋನಿ, ನಟ ಅಮೀರ್ ಖಾನ್ ಮತ್ತು ಮೇರಿ ಕೋಮ್ ಅವರನ್ನು ತನ್ನ ರಾಷ್ಟ್ರೀಯ ಐಕಾನ್‌ಗಳಾಗಿ ಘೋಷಿಸಿತ್ತು.

Sachin Tendulkar: ಚುನಾವಣಾ ಆಯೋಗದ ‘ನ್ಯಾಷನಲ್ ಐಕಾನ್’ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್; ಬುಧವಾರದಿಂದಲೇ ಹೊಸ ಇನ್ನಿಂಗ್ಸ್
ಸಚಿನ್ ತೆಂಡೂಲ್ಕರ್
ಗಣಪತಿ ಶರ್ಮಾ
| Edited By: ರಶ್ಮಿ ಕಲ್ಲಕಟ್ಟ|

Updated on:Aug 23, 2023 | 12:23 PM

Share

ನವದೆಹಲಿ, ಆಗಸ್ಟ್ 22: ಭಾರತೀಯ ಕ್ರಿಕೆಟ್ ದಂತಕಥೆ ಹಾಗೂ ಭಾರತ ರತ್ನ ಸಚಿನ್ ತೆಂಡೂಲ್ಕರ್ (Sachin Tendulkar) ಅವರು ಮತದಾರರ ಜಾಗೃತಿ ಮತ್ತು ಮತದಾನದ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತದ ಚುನಾವಣಾ ಆಯೋಗದ (Election Commission of India) ರಾಷ್ಟ್ರೀಯ ಐಕಾನ್ (National Icon) ಆಗಿ ಬುಧವಾರ ಹೊಸ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ. ಮೂರು ವರ್ಷಗಳ ಕಾಲ ಮತದಾರರ ಜಾಗೃತಿ ರಾಯಭಾರಿಯಾಗಿ ಇರಲು ತೆಂಡೂಲ್ಕರ್ ಅವರೊಂದಿಗೆ ಬುಧವಾರ ತಿಳುವಳಿಕೆ ಪತ್ರಕ್ಕೆ ಸಹಿ ಹಾಕುವುದಾಗಿ ಭಾರತೀಯ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ.

ಈ ಸಹಯೋಗವು ಮುಂಬರುವ ಚುನಾವಣೆಗಳಲ್ಲಿ, ವಿಶೇಷವಾಗಿ 2024 ರ ಲೋಕಸಭೆ ಚುನಾವಣೆಯಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಯುವ ಜನರಲ್ಲಿ ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತೆಂಡೂಲ್ಕರ್ ವರ್ಚಸ್ಸು ಮಹತ್ವದ ಪರಿಣಾಮ ಬೀರಲಿದೆ. ಈ ಪಾಲುದಾರಿಕೆಯ ಮೂಲಕ ಸಾಮಾನ್ಯ ನಾಗರೀಕರು, ಯುವಕರು ಮತ್ತು ನಗರ ಜನಸಂಖ್ಯೆಯ ನಡುವಿನ ಮತದಾನದ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ. ಈ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ನಗರದ ಜನತೆ ಮತ್ತು ಯುವ ಜನತೆಯ ನಿರಾಸಕ್ತಿಯ ಸವಾಲುಗಳನ್ನು ಎದುರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ತೆಂಡೂಲ್ಕರ್ ಹೊರತುಪಡಿಸಿ, ಆಯೋಗವು ಸದ್ಯ ಇಬ್ಬರು ರಾಷ್ಟ್ರೀಯ ಐಕಾನ್‌ಗಳನ್ನು ಹೊಂದಿದೆ. ಅವರೆಂದರೆ, ನಟ ಪಂಕಜ್ ತ್ರಿಪಾಠಿ ಮತ್ತು ಸಾಮಾಜಿಕ ಕಾರ್ಯಕರ್ತ ಡಾ. ನಿರು ಕುಮಾರ್ ಆಗಿದ್ದಾರೆ. 2019 ರ ಲೋಕಸಭಾ ಚುನಾವಣೆಗಾಗಿ, ಚುನಾವಣಾ ಆಯೋಗವು ಕ್ರಿಕೆಟಿಗ ಎಂಎಸ್ ಧೋನಿ, ನಟ ಅಮೀರ್ ಖಾನ್ ಮತ್ತು ಮೇರಿ ಕೋಮ್ ಅವರನ್ನು ತನ್ನ ರಾಷ್ಟ್ರೀಯ ಐಕಾನ್‌ಗಳಾಗಿ ಘೋಷಿಸಿತ್ತು.

ಇದನ್ನೂ ಓದಿ: Chess World Cup 2023 Final: ಮೊದಲ ಗೇಮ್​ ಡ್ರಾನಲ್ಲಿ ಅಂತ್ಯ: ನಾಳೆ ಪಂದ್ಯ ಮುಂದುವರಿಕೆ

ಸಚಿನ್ ತೆಂಡೂಲ್ಕರ್ ಅವರು ಬುಧವಾರ ಭಾರತೀಯ ಚುನಾವಣಾ ಆಯೋಗದೊಂದಿಗೆ ರಾಷ್ಟ್ರೀಯ ಐಕಾನ್ ಆಗಿ ತಮ್ಮ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಈ ನಿಟ್ಟಿನಲ್ಲಿ ಹೊಸದಿಲ್ಲಿಯ ಆಕಾಶವಾಣಿಯ ರಂಗಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಆಯೋಗ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Tue, 22 August 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!