AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜೋತ್​ ಸಿಂಗ್​ ಸಿಧು ಪತ್ನಿಗೆ ಸ್ತನ ಕ್ಯಾನ್ಸರ್, ಶಸ್ತ್ರಚಿಕಿತ್ಸೆ ಬಳಿಕ ಚಿತ್ರದೊಂದಿಗೆ ಭಾವನಾತ್ಮಕ ಪೋಸ್ಟ್​

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ನವಜೋತ್​ ಸಿಂಗ್ ಸಿಧು
Follow us
ನಯನಾ ರಾಜೀವ್
|

Updated on: Apr 05, 2024 | 3:31 PM

ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು(Navjot Singh Sidhu) ತಮ್ಮ ಪತ್ನಿಯ ಆರೋಗ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಡೇಟ್‌ಗಳನ್ನು ಹಂಚಿಕೊಂಡಿದ್ದಾರೆ. ಸಿಧು ಪತ್ನಿ ನವಜೋತ್​ ಕೌರ್ ಸ್ತನ ಕ್ಯಾನ್ಸರ್(​Navjot Kaur)ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಚಿತ್ರವೊಂದನ್ನು ಹಂಚಿಕೊಂಡು ಭಾವನಾತ್ಮಕ ಪೋಸ್ಟ್​ ಮಾಡಿದ್ದಾರೆ.

ಅಪರೂಪದ ಕಾಯಿಲೆಯಾದ ಮೆಟಾಸ್ಟಾಸಿಸ್​ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ರೋಗದಿಂದ ಪೀಡಿತ ಚರ್ಮವನ್ನು ತೆಗೆದುಹಾಕಲಾಯಿತು ಮತ್ತು ಫ್ಲಾಪ್ ಬಳಸಿ ಮರುನಿರ್ಮಾಣ ಮಾಡಲಾಯಿತು ಎಂದು ಬರೆದುಕೊಂಡಿದ್ದಾರೆ. ಆಕೆಯ ಸಂಕಲ್ಪ ಬಲವಾಗಿದೆ, ಯಾವಾಗಲೂ ಮುಖದಲ್ಲಿ ನಗು ಇರುತ್ತದೆ, ಡಾ. ರೂಪಿಂದರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಹಾರೈಸಿದ್ದಾರೆ ಎಂದು ಸಿಧು ಹೇಳಿದ್ದಾರೆ.

ನವಜೋತ್​ ಕೌರ್ ಕ್ಯಾನ್ಸರ್​ನಿಂದ ಬಳಲುತ್ತಿರುವ ಬಗ್ಗೆ ಕಳೆದ ವರ್ಷ ಏಪ್ರಿಲ್ ತಿಂಗಳಿನಲ್ಲಿ ಮಾಹಿತಿ ಬಹಿರಂಗವಾಗಿತ್ತು. ನನ್ನ ಪಿಇಟಿ ಸ್ಕ್ಯಾನ್ ಪ್ರಕಾರ, ನಾನು ಕ್ಯಾನ್ಸರ್ ಮುಕ್ತ ಎಂದು ಘೋಷಿಸಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದು ಕೌರ್ ಬರೆದುಕೊಂಡಿದ್ದರು.

ಮತ್ತಷ್ಟು ಓದಿ: Navjot Singh Sidhu: ಕಾಂಗ್ರೆಸ್​​ ತೊರೆದು ಬಿಜೆಪಿ ಸೇರಲಿದ್ದಾರೆ ನವಜೋತ್ ಸಿಂಗ್ ಸಿಧು: ವರದಿ

ಏಪ್ರಿಲ್ 4 ರಂದು, ಸಿಧು ತಮ್ಮ ಪತ್ನಿ ಎರಡನೇ ಬಾರಿಗೆ ಸ್ತನ ಕ್ಯಾನ್ಸರ್ಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದರು. ಸುಮಾರು ಮೂರು ಗಂಟೆಗಳ ಕಾಲ ನಡೆದ ಈ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

ಇಲ್ಲಿಯವರೆಗೆ 6 ಬಾರಿ ಕಿಮೋಥೆರಪಿಗೆ ಒಳಗಾಗಿದ್ದಾರೆ. ಇದಕ್ಕೂ ಮುನ್ನ ಅವರು ಆಪರೇಷನ್‌ಗೆ ಒಳಗಾಗಿದ್ದರು. ನವಜೋತ್ ಕೌರ್ ಚಿಕಿತ್ಸೆಗಾಗಿ ಸಿಧು ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ

ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ

ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ

ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು

ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್

ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ

ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ