ದೆಹಲಿ ಮಾರ್ಕೆಟ್​​ನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ; 19 ವರ್ಷದ ಯುವಕನ ಸಜೀವ ದಹನ

ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಂಗಡಿಯ 2ನೇ ಮಹಡಿಯಲ್ಲಿ ಸುಟ್ಟು ಕರಕಲಾದ ಆತನ ಶವ ಪತ್ತೆಯಾಗಿದೆ. ಗಾಂಧಿನಗರದ ಬಟ್ಟೆ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಸಂಭವಿಸಿದ ಈ ಬೆಂಕಿ ದುರಂತ ಈಗ ನಿಯಂತ್ರಣಕ್ಕೆ ಬಂದಿದೆ.

ದೆಹಲಿ ಮಾರ್ಕೆಟ್​​ನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ; 19 ವರ್ಷದ ಯುವಕನ ಸಜೀವ ದಹನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 06, 2022 | 4:08 PM

ನವದೆಹಲಿ: ನವದೆಹಲಿಯ ಗಾಂಧಿನಗರ ಮಾರುಕಟ್ಟೆಯ ಬೆಂಕಿ ಅವಘಡದಲ್ಲಿ (Fire Accident) 19 ವರ್ಷದ ಯುವಕ ಸಜೀವ ದಹನವಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಯುವಕ ಸುಟ್ಟು ಕರಕಲಾದ ಘಟನೆ ಇಂದು ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತಪಟ್ಟ ಯುವಕನನ್ನು ಶೆಹ್ನವಾಜ್ ಎಂದು ಗುರುತಿಸಲಾಗಿದ್ದು, ಅವರು ಬೆಂಕಿ ಹೊತ್ತಿಕೊಂಡ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಬೆಂಕಿಯ ಧಗೆಯಿಂದ ತಪ್ಪಿಸಿಕೊಳ್ಳಲಾಗದೆ ಅವರು ದುರಂತ ಅಂತ್ಯ ಕಂಡಿದ್ದಾರೆ.

ಅದೇ ಬಟ್ಟೆ ಅಂಗಡಿಯಲ್ಲಿ ಕಳೆದ 12 ವರ್ಷಗಳಿಂದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಹಾಗೂ ಮೃತ ಯುವಕನ ಅಣ್ಣನಾಗಿರುವ ಅಫ್ತಾಬ್ ನಿನ್ನೆ ಸಂಜೆ ತನ್ನ ಇತರ 4ರಿಂದ 5 ಉದ್ಯೋಗಿಗಳೊಂದಿಗೆ ಅಂಗಡಿಯತ್ತ ಬರುವಾಗ ಅಂಗಡಿಯೊಳಗೆ ಭಾರೀ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಅವರು ಬೇರೆ ಅಂಗಡಿಗೆ ಹೋಗಿ ವಾಪಾಸ್ ಬರುವಷ್ಟರಲ್ಲಿ ಈ ದುರಂತ ಸಂಭವಿಸಿತ್ತು. ತಕ್ಷಣ ಅಕ್ಕಪಕ್ಕದವರಿಗೆ ವಿಷಯ ತಿಳಿಸಿ, ತನ್ನ ಮಾಲೀಕರಿಗೂ ಅವರು ಫೋನ್ ಮಾಡಿದ್ದರು.

ಇದನ್ನೂ ಓದಿ: Viral Video: ರಾವಣನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆ ನಡೆಯಿತು ಅಚ್ಚರಿಯ ಘಟನೆ; ವೈರಲ್ ವಿಡಿಯೋ ಇಲ್ಲಿದೆ

ಅಫ್ತಾಬ್ ತಕ್ಷಣ ಮಾಲೀಕರಿಗೆ ಕರೆ ಮಾಡಿದ್ದರಿಂದ ಅವರು ಕೂಡ ಸ್ಥಳಕ್ಕೆ ಆಗಮಿಸಿದರು. ಆದರೆ, ತನ್ನ ಸಹೋದರ ಶೆಹ್ನವಾಜ್ ಅಂಗಡಿಯೊಳಗೆ ಸಿಕ್ಕಿಬಿದ್ದಿದ್ದಾನೆ ಎಂಬುದು ಅಫ್ತಾಬ್​ಗೆ ನಂತರ ಗೊತ್ತಾಯಿತು. ವರದಿಗಳ ಪ್ರಕಾರ, ಅವರಿಗೆ ಶೆಹ್ನವಾಜ್ ಒಳಗಿನಿಂದ ಬಾಗಿಲು ಬಡಿಯುವುದು ಕೇಳಿಸಿದೆ. ಆಗ ಅಲ್ಲಿದ್ದವರು ಶೆಹ್ನವಾಜ್‌ಗೆ ಮೇಲೆ ಓಡಿ ಹೋಗಲು ಹೇಳಿದರೂ ಆತನಿಗೆ ಅದು ಕೇಳಲಿಲ್ಲ. ಕೊನೆಗೆ ಅಲ್ಲಿದ್ದವರು ಸೇರಿ ಅಂಗಡಿಯ ಬೀಗ ಒಡೆಯಲು ಪ್ರಯತ್ನಿಸಿದರು. ಆದರೂ ಒಳಗೆ ಹೋಗಲು ಆಗಲಿಲ್ಲ.

ಕೊನೆಗೆ ಇಂದು ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಅಂಗಡಿಯ 2ನೇ ಮಹಡಿಯಲ್ಲಿ ಸುಟ್ಟು ಕರಕಲಾದ ಆತನ ಶವ ಪತ್ತೆಯಾಗಿದೆ. ಗಾಂಧಿನಗರದ ಬಟ್ಟೆ ಮಾರುಕಟ್ಟೆಯ ಅಂಗಡಿಯೊಂದರಲ್ಲಿ ಸಂಭವಿಸಿದ ಈ ಬೆಂಕಿ ದುರಂತ ಈಗ ನಿಯಂತ್ರಣಕ್ಕೆ ಬಂದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ