AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 16 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಮನೆಗಳು ನೆಲಸಮ

ಆ ಯುವತಿ ಮತ್ತು ಆಕೆಯ ಸ್ನೇಹಿತ ತಮ್ಮನ್ನು ರಕ್ಷಿಸುವಂತೆ ಬೇಡಿಕೊಂಡರೂ ಆರೋಪಿಗಳು ಬಿಡಲಿಲ್ಲ. ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ ನಂತರ, ಅವರು ಅವಳನ್ನು ಥಳಿಸಿದ್ದಾರೆ.

Crime News: 16 ವರ್ಷದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಮನೆಗಳು ನೆಲಸಮ
ಪ್ರಾತಿನಿಧಿಕ ಚಿತ್ರImage Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on: Sep 19, 2022 | 1:26 PM

Share

ನವದೆಹಲಿ: 16 ವರ್ಷದ ಯುವತಿಯನ್ನು ನಾಲ್ವರು ಪುರುಷರು ಮತ್ತು ಇಬ್ಬರು ಅಪ್ರಾಪ್ತರು ಥಳಿಸಿ ಸಾಮೂಹಿಕ ಅತ್ಯಾಚಾರವೆಸಗಿದ ನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಪ್ರಕರಣದ 6 ಆರೋಪಿಗಳ ಪೈಕಿ ಮೂವರನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಡಳಿತವು ಅವರಿಗೆ ಸಂಬಂಧಿಸಿದ ಅಕ್ರಮ ಕಟ್ಟಡಗಳ ನೆಲಸಮ ಮಾಡುತ್ತಿದೆ.

ಬಿಜೆಪಿ ನೇತೃತ್ವದ ಸರ್ಕಾರಗಳು ಅನೇಕ ರಾಜ್ಯಗಳಲ್ಲಿ ಅಪರಾಧಗಳಲ್ಲಿ ಆರೋಪಿಗಳ ವಿರುದ್ಧ ಬುಲ್ಡೋಜರ್ ಕ್ರಮವನ್ನು ಆಶ್ರಯಿಸುತ್ತಿವೆ. ರೇವಾ ಜಿಲ್ಲಾ ಕೇಂದ್ರದಿಂದ ಸುಮಾರು 70 ಕಿಮೀ ದೂರದಲ್ಲಿರುವ ನೈಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಈ ಘಟನೆ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಅನಿಲ್ ಸೋಂಕರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪಿಟಿಐ ವರದಿಯ ಪ್ರಕಾರ, ಅತ್ಯಾಚಾರಕ್ಕೊಳಗಾದ ಯುವತಿ ಶನಿವಾರ ಮಧ್ಯಾಹ್ನ ತನ್ನ ಗೆಳೆಯನೊಂದಿಗೆ ದೇವಸ್ಥಾನಕ್ಕೆ ಹೋಗಿದ್ದರು. ಆಗ ಅಲ್ಲಿಗೆ ಬಂದ ಇಬ್ಬರು ಅಪ್ರಾಪ್ತರು ಸೇರಿದಂತೆ 6 ಆರೋಪಿಗಳು ಆಕೆಯನ್ನು ಎತ್ತಿಕೊಂಡು, ಆ ಯುವತಿಯನ್ನು ಆಕೆಯ ಸ್ನೇಹಿತನ ಮುಂದೆಯೇ ಎಳೆದುಕೊಂಡು ಹೋಗಿದ್ದರು. ನದಿಯ ಬಳಿ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಬಾಲಕಿಗೆ ಮಾದಕವಸ್ತು ನೀಡಿ ಹೋಟೆಲ್ ಕೊಠಡಿಯಲ್ಲಿ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಆ ಯುವತಿ ಮತ್ತು ಆಕೆಯ ಸ್ನೇಹಿತ ತಮ್ಮನ್ನು ರಕ್ಷಿಸುವಂತೆ ಬೇಡಿಕೊಂಡರೂ ಆರೋಪಿಗಳು ಬಿಡಲಿಲ್ಲ. ಹುಡುಗಿಯ ಮೇಲೆ ಅತ್ಯಾಚಾರ ಮಾಡಿದ ನಂತರ, ಅವರು ಅವಳನ್ನು ಥಳಿಸಿದ್ದಾರೆ. ನಂತರ ಆಕೆಯ ಮೊಬೈಲ್ ಫೋನ್ ಮತ್ತು ಉಂಗುರವನ್ನು ಕಿತ್ತುಕೊಂಡಿದ್ದಾರೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ.

“ಮೂರು ಆರೋಪಿಗಳನ್ನು ಬಂಧಿಸಲಾಗಿದೆ. ಇತರರನ್ನು ಪತ್ತೆಹಚ್ಚಲು ಹುಡುಕಾಟ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಯುವತಿಯ ಆರೋಗ್ಯ ಹದಗೆಟ್ಟಿದ್ದರಿಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ