Big News: ಮೊರಾದಾಬಾದ್​​ನ 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; ಐವರು ಸಾವು, 7 ಜನರಿಗೆ ಗಾಯ

ಈ ಘಟನೆಯಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿಯನ್ನು ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡದಿಂದ ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

Big News: ಮೊರಾದಾಬಾದ್​​ನ 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; ಐವರು ಸಾವು, 7 ಜನರಿಗೆ ಗಾಯ
ಮೊರಾದಾಬಾದ್​​ನ 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 26, 2022 | 9:35 AM

ಮೊರಾದಾಬಾದ್: ಉತ್ತರ ಪ್ರದೇಶದ (Uttar Pradesh) ಮೊರಾದಾಬಾದ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಮೊರಾದಾಬಾದ್​ನ (Moradabad) 3 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ (Fire Accident) ಕಾಣಿಸಿಕೊಂಡ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಮೊರಾದಾಬಾದ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಶೈಲೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ಘಟನೆಯಲ್ಲಿ ಐವರು ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿಯನ್ನು ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡದಿಂದ ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Viral Video: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಬೆಂಕಿಯುಗುಳುವ ಹ್ಯಾಂಡ್​ಪಂಪ್

ಸದ್ಯದ ಮಾಹಿತಿ ಪ್ರಕಾರ, ಆ ಕಟ್ಟಡದಲ್ಲಿ ವಾಸವಿದ್ದವರು ಒಂದೇ ಕುಟುಂಬದವರಾಗಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂದು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ