Crime News: ಉತ್ತರ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 6 ಜನ ಸಾವು, 15 ಮಂದಿಗೆ ಗಾಯ

ಲಕ್ನೋ-ಬಹ್ರೈಚ್ ಹೆದ್ದಾರಿಯಲ್ಲಿ ಇಂದು (ಬುಧವಾರ) ಬೆಳಗ್ಗೆ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

Crime News: ಉತ್ತರ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 6 ಜನ ಸಾವು, 15 ಮಂದಿಗೆ ಗಾಯ
ಉತ್ತರ ಪ್ರದೇಶದಲ್ಲಿ ಅಪಘಾತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 30, 2022 | 9:12 AM

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್‌ನ (Bahraich) ತಪ್ಪೆ ಸಿಪಾಹ್ ಪ್ರದೇಶದಲ್ಲಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಹೆದ್ದಾರಿಯಲ್ಲಿ ಈ ಅಪಘಾತ (Accident) ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಲಕ್ನೋ-ಬಹ್ರೈಚ್ ಹೆದ್ದಾರಿಯಲ್ಲಿ ಇಂದು (ಬುಧವಾರ) ಬೆಳಗ್ಗೆ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 15 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಎಲ್ಲಾ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

ಇಂದು ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮಂಜಿನಿಂದಾಗಿ ವೇಗವಾಗಿ ಬಂದ ಟ್ರಕ್ ಲಕ್ನೋ ಈದ್ಗಾ ಡಿಪೋದ ಬಳಿ ಬಸ್​ಗೆ ಡಿಕ್ಕಿ ಹೊಡೆದಿದೆ. ಜರ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಘರ್ಘರಾ ಘಾಟ್ ಬಳಿ ಈ ಅಪಘಾತ ಸಂಭವಿಸಿದೆ. ಮಂಜು ಮುಸುಕಿದ ಕಾರಣದಿಂದ ರಸ್ತೆ ಕಾಣದೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ: 7ಕ್ಕೂ ಹೆಚ್ಚು ಜನರಿಗೆ ಗಾಯ

ಅಪಘಾತಕ್ಕೀಡಾದ ಬಸ್ ಲಕ್ನೋದಿಂದ ಬಹ್ರೈಚ್‌ಗೆ ಹೋಗುತ್ತಿತ್ತು. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಟ್ರಕ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಟ್ರಕ್ ಅನ್ನು ಗುರುತಿಸಲು ಪೊಲೀಸರು ಹತ್ತಿರದ ಡಾಬಾಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸಹ ಪರಿಶೀಲನೆ ಮಾಡುತ್ತಿದ್ದಾರೆ. ಟ್ರಕ್​​ನೊಂದಿಗೆ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮದುವೆಯಾಗಿದಿದ್ದರೆ ಕೊಲ್ಲುವುದಾಗಿ ಅಪ್ರಾಪ್ತೆಯನ್ನು ಹೆದರಿಸುತ್ತಿದ್ದ ಯುವಕ ಈಗ ಪೊಲೀಸರ ಅತಿಥಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಬಹ್ರೈಚ್ ರಸ್ತೆ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಉನ್ನತಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ