ಪಾಣಿಪತ್​​ನಲ್ಲಿ ಎಲ್​ಪಿಜಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ; ಒಂದೇ ಕುಟುಂಬದ 6 ಜನ ಸಾವು

| Updated By: ಸುಷ್ಮಾ ಚಕ್ರೆ

Updated on: Jan 12, 2023 | 1:50 PM

ಅಡುಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಈ ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ

ಪಾಣಿಪತ್​​ನಲ್ಲಿ ಎಲ್​ಪಿಜಿ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ; ಒಂದೇ ಕುಟುಂಬದ 6 ಜನ ಸಾವು
ಸಾಂಧರ್ಬಿಕ ಚಿತ್ರ
Image Credit source: NDTV
Follow us on

ಪಾಣಿಪತ್: ಅಡುಗೆ ಅನಿಲದ ಸಿಲಿಂಡರ್ (LPG Cylinder) ಸೋರಿಕೆಯಾಗಿ ಮನೆಗೆ ಬೆಂಕಿ ಹೊತ್ತಿಕೊಂಡು, ಪಾಣಿಪತ್‌ನಲ್ಲಿ (Panipat) ಒಂದೇ ಕುಟುಂಬದ 6 ಜನ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಡ-ಹೆಂಡತಿ ಹಾಗೂ ನಾಲ್ವರು ಮಕ್ಕಳು ಬೆಂಕಿಯಲ್ಲಿ ಸಜೀವ ದಹನವಾಗಿದ್ದಾರೆ. ಪಾಣಿಪತ್ ಜಿಲ್ಲೆಯ ಬಿಚ್ಪರಿ ಗ್ರಾಮದ ಬಳಿಯ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಈ ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಣಿಪತ್‌ನ ತಹಸಿಲ್ ಕ್ಯಾಂಪ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಇನ್ಸ್‌ಪೆಕ್ಟರ್ ಫೂಲ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಅಡುಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಹೊತ್ತಿಕೊಂಡಿದ್ದು, ಪಾಣಿಪತ್​​ನ ಜನವಸತಿ ಪ್ರದೇಶದಲ್ಲಿ ವಾಸವಿದ್ದ ಕುಟುಂಬ ಪಶ್ಚಿಮ ಬಂಗಾಳದಿಂದ ವಲಸೆ ಬಂದಿತ್ತು ಎನ್ನಲಾಗಿದೆ. ಗಂಡ-ಹೆಂಡತಿ ಇಬ್ಬರೂ ಪಾಣಿಪತ್‌ನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: Bharat Jodo Yatra: ಹರಿಯಾಣದ ಪಾಣಿಪತ್​ನಲ್ಲಿ ಇಂದು ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಸಂಸದ ರಾಹುಲ್ ಗಾಂಧಿ ಭಾಷಣ

ಅವರ ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ರಕ್ಷಣಾ ತಂಡ ಆ ಸ್ಥಳಕ್ಕೆ ತಲುಪುವಷ್ಟರಲ್ಲಿ ಅವರು ಸುಟ್ಟು ಕರಕಲಾಗಿದ್ದರು.

ಮೃತರನ್ನು ಅಬ್ದುಲ್, 45, ಅವರ 40 ವರ್ಷದ ಪತ್ನಿ, 18 ಮತ್ತು 16 ವರ್ಷದ ಅವರ ಇಬ್ಬರು ಪುತ್ರಿಯರು ಮತ್ತು 12 ಮತ್ತು 10 ವರ್ಷದ ಇಬ್ಬರು ಪುತ್ರರು ಎಂದು ಗುರುತಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ