Viral Video: ದಲಿತ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಗುಪ್ತಾಂಗಕ್ಕೆ ಥಳಿಸಿದ ಶಾಕಿಂಗ್ ವಿಡಿಯೋ ವೈರಲ್

Crime News Today: ತಮ್ಮ ಮನೆಯ ಹುಡುಗಿಯನ್ನು ಪ್ರೀತಿಸಿದ್ದಕ್ಕೆ 20 ವರ್ಷದ ದಲಿತ ಯುವಕನನ್ನು ಕಾಲಿನಿಂದ ತುಳಿದು, ಮರಕ್ಕೆ ಕಟ್ಟಿ ಹಾಕಿ, ಆತನ ಗುಪ್ತಾಂಗಕ್ಕೆ ಕೋಲಿನಿಂದ ಬಾರಿಸಲಾಗಿದೆ.

Viral Video: ದಲಿತ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಗುಪ್ತಾಂಗಕ್ಕೆ ಥಳಿಸಿದ ಶಾಕಿಂಗ್ ವಿಡಿಯೋ ವೈರಲ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 11, 2021 | 11:23 AM

ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 20 ವರ್ಷದ ದಲಿತ ಯುವಕನನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ ಥಳಿಸಿ, ಗುಪ್ತಾಂಗಕ್ಕೆ (Private Parts) ಕೋಲಿನಿಂದ ಬಾರಿಸುತ್ತಿರುವ ವಿಡಿಯೋವೊಂದು ಸಾಕಷ್ಟು ವೈರಲ್ ಆಗಿದೆ. ಎರಡು ದಿನಗಳ ಹಿಂದೆ ನಡೆದ ಈ ಘಟನೆ ಈಗ ಬೆಳಕಿಗೆ ಬಂದಿದೆ. ವೈರಲ್ ಆಗಿರುವ ವಿಡಿಯೋಗೆ (Viral Video) ಭಾರೀ ವಿರೋಧ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ತಮ್ಮ ಮನೆಯ ಹುಡುಗಿಯನ್ನು ಪ್ರೀತಿಸಿದ್ದಕ್ಕೆ 20 ವರ್ಷದ ದಲಿತ ಯುವಕನ ಪ್ರೇಯಸಿಯ ಮನೆಯವರು ಆತನನ್ನು ಕಾಲಿನಿಂದ ತುಳಿದು, ಮರಕ್ಕೆ ಕಟ್ಟಿ ಹಾಕಿ, ಆತನ ಗುಪ್ತಾಂಗಕ್ಕೆ ಕೋಲಿನಿಂದ ಬಾರಿಸಲಾಗಿದೆ. ತನ್ನನ್ನು ಬಿಟ್ಟುಬಿಡುವಂತೆ ಆತ ಗೋಗರೆಯುತ್ತಿದ್ದರೂ ಕೇಳದೆ ಹಿಂಸೆ ನೀಡಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಈ ಘಟನೆಯನ್ನು ನೋಡಲು ಸುತ್ತಲೂ ಸಾಕಷ್ಟು ಜನರು ಸೇರಿದ್ದರೂ ಯಾರೊಬ್ಬರೂ ಆ ಹಿಂಸೆಯನ್ನು ನಿಲ್ಲಿಸಲು ಹೋಗಿಲ್ಲ. ಬದಲಾಗಿ, ಘಟನೆಯ ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

2 ದಿನಗಳ ಹಿಂದೆ ಕಾನ್ಪುರದ ಅಕ್ಬರ್​ಪುರದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಹರಿದಾಡಿದ ಬಳಿಕ ಪೊಲೀಸರ ಗಮನಕ್ಕೆ ಬಂದಿದೆ. ಒಂದಿಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಆ ಯುವಕನನ್ನು ಥಳಿಸಿದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ. ಅವರನ್ನು ಬಂಧಿಸಲು ಪ್ರತ್ಯೇಕ ತಂಡವೊಂದನ್ನು ರಚಿಸಲಾಗಿದೆ.

ಆ ಯುವಕನಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಅಂಗಗಳಿಗೂ ಹಾನಿಯಾಗಿದೆ. ಆತನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಎಸ್​ಸಿ (SC) ಯುವಕನ ಮೇಲೆ ಈ ರೀತಿ ದಾರುಣವಾಗಿ ಹಲ್ಲೆ ನಡೆಸಿರುವುದಕ್ಕೆ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಗ್ಗೆ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: Viral Video: ಚಿನ್ನದ ಸರ ಕದ್ದು ಓಡಿದ ಕಳ್ಳ, ಪರಾರಿಯಾಗುವಷ್ಟರಲ್ಲಿ ಬಾಗಿಲು ಲಾಕ್! ಕಳ್ಳನ ಪೀಕಲಾಟ ನೋಡಿ ನಕ್ಕ ನೆಟ್ಟಿಗರು

ಇದನ್ನೂ ಓದಿ: Viral Video: ಬೇಸ್​ಬಾಲ್​ ಆಟದಲ್ಲಿ ಚೆಂಡು​ ಹಿಡಿಯೋಕ್​ ಹೋಗಿ ಎತ್ತಿಕೊಂಡಿದ್ದ ಚಿಕ್ಕ ಮಗುವನ್ನೇ ಬಿಟ್ಟುಬಿಡ್ತಾರಾ ಅಪ್ಪ? ಮುಂದೆನಾಯ್ತು ವಿಡಿಯೋ ನೋಡಿ

(Dalit Man Beaten up Stock inserted in Private Parts by Lovers Family in Uttar Pradesh Video goes Viral)

Published On - 11:22 am, Sun, 11 July 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ